ಬೆಂಗಳೂರು/ಮೈಸೂರು:ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿಯಲ್ಲಿನ ಕೆಲವು ಆತ್ಮಸಾಕ್ಷಿಯ ಮತಗಳು ಕಾಂಗ್ರೆಸ್​ಗೆ ಬಂದೇ ಬರುತ್ತವೆ ಎಂದು ಮೈಸೂರಿನಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಭಾರಿ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ರಾಜ್ಯಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಗೆಲುವಿಗೆ ಎಷ್ಟು ಮತಗಳು ಬೇಕೋ ಅಷ್ಟು ಆತ್ಮಸಾಕ್ಷಿಯ ಮತಗಳು ಜೆಡಿಎಸ್ ಹಾಗೂ ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದೇ ಬರುತ್ತವೆ. ಬಿಜೆಪಿ ಈಗಲೂ ಗೆಲ್ಲಬಾರದು ಎಂಬ ಇಚ್ಛೆ ಜೆಡಿಎಸ್​ಗೆ ಇದ್ದರೆ ಅವರ ಅಭ್ಯರ್ಥಿಯನ್ನ ಚುನಾವಣಾ ಕಣದಿಂದ ನಿವೃತ್ತಿ ಮಾಡಿಸಲಿ ಎಂದು ಮೈಸೂರಿನಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಿನ್ನೆ (ಸೋಮವಾರ) ಹೇಳಿದ್ದರು.
ಅದರ ಬಗ್ಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಶ್ನಿಸಿದಾಗ, ಬೊಮ್ಮಾಯಿ‌ ಒಂದು ಕ್ಷಣ ನಕ್ಕು, ಇಂತಹುವಕ್ಕೆಲ್ಲ ಪ್ರತಿಕ್ರಿಯಿಸಲ್ಲ ಎಂದರು. ಈ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆ ಕುರಿತು ಶಾಸಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಬುಧವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದಷ್ಟೇ ಹೇಳಿ ಸುಮ್ಮನಾದರು.
ಆತ್ಮಸಾಕ್ಷಿ ಮತಗಳ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಅವರೊಬ್ಬರಿಗೆ ಆತ್ಮಸಾಕ್ಷಿ ಇರೋದಾ, ನಮಗ್ಯಾರಿಗೂ ಇಲ್ವಾ.? ಆತ್ಮಸಾಕ್ಷಿಯನ್ನು ಅವರೊಬ್ಬರಿಗೇ ಗುತ್ತಿಗೆ ಕೊಟ್ಟಿದ್ದೇವಾ. ಇದೇ 10ರಂದು ಬರುವ ಫಲಿತಾಂಶವೇ ಎಲ್ಲದಕ್ಕೂ ಉತ್ತರ ಕೊಡಲಿದೆ‌ ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಉಗ್ರನ ಸಂಸಾರ: ಹಿಂದೂಗಳ ಹತ್ಯೆಗೆ ಸಂಚು- ಯುವಕರೇ ಟಾರ್ಗೆಟ್​! ಸಿಎಂ ಹೇಳಿದ್ದೇನು?

ಮದುವೆಗೆ ಹೊರಟ ಕಾರು ಅಪಘಾತ: ಒಂದೇ ಕುಟುಂಬದ ಎಂಟು ಮಂದಿ ದಾರುಣ ಸಾವು!

ನೋಟ್‌ ಬ್ಯಾನ್‌ ಆದ ಆರು ವರ್ಷಗಳ ಬಳಿಕ ಇನ್ನೊಂದು ಮಹತ್ವದ ನಿರ್ಧಾರ! ಆರ್‌ಬಿಐನಿಂದ ಭಾರಿ ಬದಲಾವಣೆ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:16 + 16 =
Remember me
