ಗದಗ:ಕಾಂಗ್ರೆಸ್ ಯುವ ಮುಖಂಡ ಮಹಾಂತೇಶ ಬೆಳಧಡಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಂದವರ ಮೇಲೆ ಪೊಲೀಸರು ದೂರು ದಾಖಲು ಮಾಡಿದ್ದಾರೆ.
ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 25 ಕ್ಕೂ ಹೆಚ್ಚು ಮಂದಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ. ಗದಗ ನಗರದ ಗಂಗಾಪೂರ ನಿವಾಸಿಯಾದ ಮಹಾಂತೇಶ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರವಾದ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.
ಜೂನ್ 5 ರಂದು ಗದಗದಲ್ಲಿ ಅವರ ಅಂತ್ಯ ಸಂಸ್ಕಾರ ನಡೆದಿತ್ತು. ಈ ಸಂದರ್ಭದಲ್ಲಿ ಪಾರ್ಥಿವ ಶರೀರ ನೋಡಲು ಹಾಗೂ ಅಂತ್ಯ ಸಂಸ್ಕಾರದಲ್ಲಿ ಅನೇಕ ಜನರು ನಿಯಮ ಉಲ್ಲಂಘಿಸಿ ಭಾಗಿಯಾಗಿದ್ದರು. ಅಷ್ಟೇ ಅಲ್ಲದೇ ಸಾಮಾಜಿಕ ಅಂತರ ಕಾಪಾಡಿರಲಿಲ್ಲ ಹಾಗೂ ಮಾಸ್ಕ್ ಕೂಡ ಧರಿಸಿರಲಿಲ್ಲ. ಈ ಕಾರಣದಿಂದ ದೂರು ದಾಖಲಿಸಲಾಗಿದೆ ಎಂದು ಗದಗನ ಶಹರ ಪೊಲೀಸ ಠಾಣೆ ಪೊಲೀಸರು ಹೇಳಿದ್ದಾರೆ.
ಗದಗದ ಕಾಂಗ್ರೆಸ್ ಯುವ ಮುಖಂಡ ಮಹಾಂತೇಶ ಬೆಳಧಡಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೋವಿಡ್ ನಿಯಮ ಉಲ್ಲಂಘಿಸಿರುವ 25 ಕ್ಕೂ ಹೆಚ್ಚು ಮಂದಿ ವಿರುದ್ಧ ದೂರು ದಾಖಲಿಸಲಾಗಿದೆ.pic.twitter.com/6fxzrQEHuW
— Vijayavani (@VVani4U)June 7, 2021

ಮಹಿಳೆಯರಿಗೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ: ಮುಂಬೈ ರೈಲು ಆರಂಭದಾದರೂ ಸ್ತ್ರೀಯರಿಗೆ ಪ್ರವೇಶವಿಲ್ಲ

ಸಂಸದೆಗೆ ಟೈಟ್‌ ಪ್ಯಾಂಟ್‌ ತಂದ ಫಜೀತಿ- ಸಂಸತ್ತಿನ ಒಳಗೆ ಹೋಗ್ತಿದ್ದಂತೆಯೇ ಹೊರಬಂದಳೇಕೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × two =
Remember me
