ಬೆಂಗಳೂರು:ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿರಾರು ಕೋಟಿ ಹಣದ ಅಕ್ರಮ ವರ್ಗಾವಣೆ ಆರೋಪದಲ್ಲಿ ಸಿಲುಕಿರುವ ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್​ ಗಾಂಧಿ ಅವರನ್ನು ವಿಚಾರಣೆಗೆ ಕರೆದಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮವನ್ನು ವಿರೋಧಿಸಿ ಕಳೆದ ಮೂರು ದಿನಗಳಿಂದ ದೇಶಾದ್ಯಂತ ಕಾಂಗ್ರೆಸ್​ ಕಾರ್ಯಕರ್ತರು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆ ನಡೆಸುತ್ತಿದ್ದು, ಇಂದು (ಗುರುವಾರ) ರಾಜಭವನ ಚಲೋ ರ್ಯಾಲಿ ಆರಂಭಿಸಿದ್ದಾರೆ.
ಇದರಿಂದ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಟ್ರಾಫಿಕ್​ ಜಾಂ ಆಗಿದ್ದು, ವಾಹನ ಸವಾರರು ಪರದಾಡುತ್ತಾ ಹಿಡಿಶಾಪ ಹಾಕುತ್ತಿದ್ದಾರೆ. ತಮ್ಮ ತಮ್ಮ ಕೆಲಸಗಳಿಗೆ ಹೋಗಲು ಆಗದೇ ಜಾಂನಲ್ಲಿ ಸಿಲುಕಿ ಸವಾರರು ಕಂಗಾಲಾಗಿ ಹೋಗಿದ್ದಾರೆ.
ಬೆಳಗ್ಗೆ 10 ಗಂಟೆ ಸುಮಾರಿಗೆ ಪಾದಯಾತ್ರೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ಆರಂಭವಾಗಿದ್ದು, ರಾಜಭವನಕ್ಕೆ ತೆರಳಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಬಿಜೆಪಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ರಾಜಭವನ ಮುತ್ತಿಗೆ ಬಳಿಕ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಿದೆ.
ಕರೊನಾ ಹೆಚ್ಚಿದರೆ ಕಾಂಗ್ರೆಸ್ಸೇ ಹೊಣೆಕಾಂಗ್ರೆಸ್​ನ ಈ ಪ್ರತಿಭಟನೆಗೆ ಬಿಜೆಪಿ ಕಿಡಿಕಾರಿದೆ. ಕರೊನಾ ಏರುಗತಿಯಲ್ಲಿ ಸಾಗಿರುವ ಈ ಹೊತ್ತಿನಲ್ಲಿ ಹೀಗೆ ಪ್ರತಿಭಟನೆ ಹೆಸರಿನಲ್ಲಿ ಗುಂಪುಗೂಡುವಿಕೆಯಿಂದ ಕರೊನಾ ಹೆಚ್ಚುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನವರ ಹೋರಾಟದಿಂದ ರಾಜ್ಯದಲ್ಲಿ ಕೋವಿಡ್​​ ಹೆಚ್ಚಳ ಆದರೆ‌ ಅದಕ್ಕೆ ಅವರೇ ಹೊಣೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ರಾಜಕಾರಣಿಗಳಿಗೆ ನೈತಿಕ ಹೊಣೆ ಹೊರಬೇಕು. ಅವರು ಪ್ರತಿಭಟನೆ ಮಾಡುವುದಾದರೆ ಫ್ರೀಡಂ ಪಾರ್ಕ್ ನಲ್ಲಿ ಮಾಡಲಿ. ಅದು ಬಿಟ್ಟು ಜನರನ್ನು ಸೇರಿಸಿಕೊಂಡು ರಸ್ತೆಯಲ್ಲಿ ಪ್ರತಿಭಟನೆ ಮಾಡೋದು ಸರಿಯಲ್ಲ. ಇವತ್ತು ರಾಜಭವನ ಚಲೋ ಮಾಡುತ್ತಿರುವುದು ಕೊವೀಡ್ ನಿಯಮ ಉಲ್ಲಂಘನೆ ಆಗಿದೆ. ಈ ಹಿನ್ನೆಲೆಯಲ್ಲಿ ಕೇಸ್ ದಾಖಲಿಸುವ ಸಂಬಂಧ ಮುಖ್ಯಮಂತ್ರಿಗಳ ಬಳಿ ಮಾತನಾಡುತ್ತೇನೆ ಎಂದ ಸುಧಾಕರ್ ಹೇಳಿದರು.
ಏನಿದು ನ್ಯಾಷನಲ್​ ಹೆರಾಲ್ಡ್​ ಕೇಸ್​?ಜವಾಹರಲಾಲ್ ನೆಹರು ಮತ್ತು ಇತರ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಜತೆಗೂಡಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಹುಟ್ಟುಹಾಕಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ವತಂತ್ರ ದಳದ ಕಳವಳಗಳಿಗೆ ಧ್ವನಿಯಾಗುವುದು ಇದರ ಉದ್ದೇಶವಾಗಿತ್ತು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಾಶನದ ಈ ಪತ್ರಿಕೆಯು, ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಮುಖವಾಣಿಯಾಗಿತ್ತು.
2010ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಹುಲ್ ಗಾಂಧಿ ಯಂಗ್ ಇಂಡಿಯಾ ಲಿಮಿಟೆಡ್ ಸ್ಥಾಪಿಸಿದ್ದರು. ಈ ಕಂಪೆನಿಯು ಯಂಗ್ ಇಂಡಿಯಾ ಲಿಮಿಟೆಡ್ (ವೈಐಎಲ್), ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಷೇರುಗಳನ್ನು ಖರೀದಿ ಮಾಡುವಲ್ಲಿ ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿದೆ. ಇದರಲ್ಲಿ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು 2012ರಲ್ಲಿ ಬಿಜೆಪಿ ನಾಯಕ ಹಾಗೂ ವಕೀಲ ಸುಬ್ರಮಣಿಯನ್ ಸ್ವಾಮಿ ವಿಚಾರಣಾ ನ್ಯಾಯಾಲಯದಲ್ಲಿ ದೂರು ನೀಡಿದ್ದರು.
ಬಳಕೆಯಲ್ಲಿ ಇಲ್ಲದ ಮಾಧ್ಯಮ ಸಂಸ್ಥೆಯ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಂಡು ಸುಮಾರು 2 ಸಾವಿರ ಕೋಟಿ ರೂ ಲಾಭ ಹಾಗೂ ಆಸ್ತಿ ಸಂಪಾದಿಸಲು ಯಂಗ್ ಇಂಡಿಯಾ ಲಿ. ವಾಮಮಾರ್ಗ ಅನುಸರಿಸಿದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದು, ಜಾರಿ ನಿರ್ದೇಶನಾಲಯವು ರಾಹುಲ್​ ಮತ್ತು ಸೋನಿಯಾ ಅವರಿಗೆ ನೋಟಿಸ್​ ಜಾರಿ ಮಾಡಿದೆ.
ಇಡಿಯಿಂದ ರಾಹುಲ್​ ಗಾಂಧಿ ಬಂಧನವಾಗುತ್ತಾ? ಛತ್ತೀಸ್​ಗಢ ಮುಖ್ಯಮಂತ್ರಿ ಕೊಟ್ಟ ಸ್ಫೋಟಕ ಉತ್ತರ ಹೀಗಿದೆ…

‘ನಮ್ಮ ಪ್ರವಾದಿ​, ನಮ್ಮ ಹೆಮ್ಮೆ’ ಎಂದು ನೂಪುರ್​ ವಿರುದ್ಧ ಪ್ರತಿಭಟಿಸಿದ ಭಾರತೀಯರನ್ನು ಗಡಿಪಾರು ಮಾಡಲಿದೆ ಕುವೈತ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + thirteen =
Remember me
