ಕಾರ್ಕಳ: ಕಳೆದ ಏಪ್ರಿಲ್​ 11ರಂದು ಉಡುಪಿಯ ಲಾಡ್ಜ್​ನಲ್ಲಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರ ಮೇಲೆ 40% ಕಮಿಷನ್ ಆರೋಪ ಕೂಡ ಕೇಳಿಬಂದಿತ್ತು.
ಆತ್ಮಹತ್ಯೆಗೆ ಶರಣಾಗುವ ಮುನ್ನ ಸಂತೋಷ್ ಪಾಟೀಲ್ ನನ್ನ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ವಾಟ್ಸ್ಆ್ಯಪ್​ ಸಂದೇಶ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿತ್ತು. ಸಂತೋಷ್​ ಅವರ ಸಹೋದರ ಪ್ರಶಾಂತ್​ ಅವರು ಈಶ್ವರಪ್ಪ ವಿರುದ್ಧ ದೂರು ಸಲ್ಲಿಸಿದ್ದರು. ‘ನನ್ನ ಸಹೋದರ ಸಂತೋಷ್​ ಹಿಂಡಲಗಾ ಪಂಚಾಯತ್ ವ್ಯಾಪ್ತಿಯ ಲಕ್ಷ್ಮೀದೇವಿ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದ ಅಭಿವೃದ್ಧಿ ಕೆಲಸ ಮಾಡಿದ್ದ. 4 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಚರಂಡಿ ಫೇವರ್ಸ್ ಜೋಡಣೆ ಕಾಮಗಾರಿ ಮಾಡಿಸಿದ್ದ. ಈ ಹಣವನ್ನು ಬಿಡುಗಡೆ ಮಾಡಲು ಸಚಿವ ಈಶ್ವರಪ್ಪ ಶೇ. 40 ಕಮಿಷನ್​ಗೆ ಬೇಡಿಕೆ ಇಟ್ಟಿದ್ದರು’ ಎಂದು ಆರೋಪಿಸಿದ್ದರು.
‘ಕಮಿಷನ್​ ಬಗ್ಗೆ ಪತ್ನಿ ಜಯಾ ಮತ್ತು ನನ್ನ ಬಳಿ ತಿಳಿಸಿದ್ದ. ಅಲ್ಲದೆ, ಈ ಹಿಂದೆ ಪತ್ರಿಕಾಗೋಷ್ಠಿ ನಡೆಸಿ ತನ್ನ ಜೀವಕ್ಕೇನಾದರೂ ಅಪಾಯವಾದರೆ ನೀವೇ ಕಾರಣ ಎಂದು ಈಶ್ವರಪ್ಪ ವಿರುದ್ಧ ಸಂತೋಷ್​ ಹೇಳಿದ್ದ. ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೂ ಮನವಿ ನೀಡಿದ್ದ. ಆದರೆ, ಯಾವುದಕ್ಕೂ ಸ್ಪಂದನೆ ಸಿಗದೆ ಮತ್ತು ಹಣ ಬಿಡುಗಡೆಯಾಗದೇ ಮನನೊಂದಿದ್ದ ಸಂತೋಷ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ಕಾರಣರಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು’ ಎಂದು ಪ್ರಶಾಂತ್​ ಪಾಟೀಲ್​ ದೂರಿನಲ್ಲಿ ತಿಳಿಸಿದ್ದರು.
ಇದರ ಅನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಇದೀಗ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ. ಇದರಲ್ಲಿ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್​ಚಿಟ್​ ನೀಡಲಾಗಿದೆ. ಕೊಲೆ ಅಥವಾ ಕೊಲೆ ಪ್ರಚೋದನೆ ಎಂಬುದಕ್ಕೆ ಸೂಕ್ತ ಸಾಕ್ಷಿಗಳು ಇಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಎಲ್ಲಾ ತಾಂತ್ರಿಕ ಸಾಕ್ಷಿಗಳನ್ನು ಸಂಗ್ರಹಿಸಿ ಕೋರ್ಟ್​ಗೆ ಸಲ್ಲಿಕೆ ಮಾಡಲಾಗಿದೆ. ಸಿಸಿಟಿವಿ ಫುಟೇಜ್​, ವೀಡಿಯೋ, ಆಡಿಯೋ, ಮೊಬೈಲ್ ಸಂದೇಶಗಳ ಜತೆಗೆ ಬ್ಯಾಂಕ್ ದಾಖಲೆ, ಗುತ್ತಿಗೆ ವಿವರ, ಕುಟುಂಬಸ್ಥರು, ಸ್ನೇಹಿತರ ಹೇಳಿಕೆಗಳ ಬಗ್ಗೆಯೂ ಸಂಪೂರ್ಣ ಮಾಹಿತಿಯನ್ನು ಕೋರ್ಟ್​ಗೆ ನೀಡಲಾಗಿದೆ.
ಈಶ್ವರಪ್ಪ , ಈಶ್ವರಪ್ಪ ಕಡೆಯವರಿಂದ ಬೆದರಿಕೆ ಬಂದಿದೆ ಎಂಬುದಕ್ಕೆ ದಾಖಲೆಗಳ ಕೊರತೆ ಇರುವುದಾಗಿ ಅದರಲ್ಲಿ ತಿಳಿಸಲಾಗಿದೆ(ದಿಗ್ವಿಜಯ ನ್ಯೂಸ್​)
ಶಿಂಧೆ ಸಂಪುಟದಲ್ಲಿ ಸಚಿವ ಸ್ಥಾನಕ್ಕೆ 90 ಕೋಟಿ ರೂ.ಗೆ ಡೀಲ್​: ಮುಂದೇನಾಯ್ತು ನೋಡಿ…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
