ಬೆಂಗಳೂರು:ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟೂ ಹೊಸದಾಗಿ ಸೋಂಕಿತರಾದವರ ಸಂಖ್ಯೆ 8161. ಈ ಮೂಲಕ ಮೊದಲ ದಿನದಿಂದ ಇಲ್ಲಿಯವರೆಗೆ ಕರೊನಾ ಸೋಂಕು ಪೀಡಿತರಾಗಿರುವವರ ಸಂಖ್ಯೆ 2 ಲಕ್ಷದ 91 ಸಾವಿರದ 826.ಈ ಪೈಕಿ ಸದ್ಯ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 82 ಸಾವಿರದ 410. ಇವರಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರು 751 ಮಂದಿ.ನಿನ್ನೆ ಸಂಜೆ 5 ಗಂಟೆಯಿಂದ ಇಲ್ಲಿಯವರೆಗೆ ಕರೊನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿರುವವರ ಸಂಖ್ಯೆ 6814ಕ್ಕೆ ಏರಿದೆ. ಈ ಮೂಲಕ ಇಲ್ಲಿಯವರೆಗೆ ಆಸ್ಪತ್ರೆಯಿಂದ ಒಟ್ಟಾರೆಯಾಗಿ ಬಿಡುಗಡೆಯಾದವರು 2 ಲಕ್ಷ ನಾಲ್ಕು ಸಾವಿರದ 439.ಕಳೆದ 24 ಗಂಟೆಗಳಲ್ಲಿ ಕರೊನಾಕ್ಕೆ 148 ಮಂದಿ ಬಲಿಯಾಗಿದ್ದು, ಇಲ್ಲಿಯವರೆಗೆ ಕರೊನಾ ರಾಜ್ಯದಲ್ಲಿ ಈ ಸೋಂಕು 4958 ಮಂದಿಯನ್ನು ಬಲಿ ಪಡೆದಂತಾಗಿದೆ.
ಇನ್ನು ಭಾರತದ ವಿಷಯಕ್ಕೆ ಬರುವುದಾದರೆ ಇಲ್ಲಿಯವರೆಗೆ 3.17 ದಶಲಕ್ಷ ಮಂದಿ ಕರೊನಾ ಸೋಂಕಿಗೆ ಗುರಿಯಾಗಿದ್ದರೆ, 2.4 ದಶಲಕ್ಷ ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈ ಮಹಾಮಾರಿಗೆ ಭಾರತದಲ್ಲಿ ಇದುವರೆಗೆ 58,390 ಮಂದಿ ಬಲಿಯಾಗಿದ್ದಾರೆ.ರಾಜ್ಯದ ಸಂಪೂರ್ಣ ವಿವರಗಳ ಪಟ್ಟಿ ಇಲ್ಲಿದೆ ನೋಡಿ:




ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 19 =
Remember me
