ಬೆಂಗಳೂರು:ರಾಜಕಾರಣಿಗಳು ಸೇರಿದಂತೆ ಗಣ್ಯವ್ಯಕ್ತಿಗಳ ಬೆನ್ನುಹತ್ತಿರುವ ಕರೊನಾ, ಅವರನ್ನು ಆವರಿಸಿಕೊಳ್ಳಲು ಶುರು ಮಾಡಿದೆ.
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೇಂದ್ರ, ರಾಜ್ಯಗಳ ಹಲವಾರು ಸಚಿವರನ್ನು ಕರೊನಾ ಕಾಡಿದ್ದು, ಇನ್ನೂ ಕೆಲವರನ್ನು ಕಾಡತೊಡಗಿದೆ.
ಇದೀಗ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೂ ಕರೊನಾ ಪಾಸಿಟಿವ್‌ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ ಎಂದು ಅವರು ಹೇಳಿದ್ದಾರೆ.
ನನಗೆ ಇಂದು ಕರೊನಾ ಸೋಂಕು ದೃಡ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ.
— K S Eshwarappa (@ikseshwarappa)September 1, 2020

ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಈಶ್ವರಪ್ಪ, ‘ಇಂದು ಕರೊನಾ ಸೋಂಕು ದೃಢಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ . ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ನಿಮ್ಮೆಲ್ಲರ ಆಶೀರ್ವಾದ ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.ಇವರ ಟ್ವೀಟ್‌ಗೆ ನೂರಾರು ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದು, ಶೀಘ್ರವಾಗಿ ಗುಣಮುಖರಾಗಲೆಂದು ಹಾರೈಸಿಸಿದ್ದಾರೆ.
ಕರೊನಾ ಕೋಲಾಹಲ: ಶಾಸಕರೇ ನೀವು ಸೋಂಕಿತರು ಎನ್ನುವಷ್ಟರಲ್ಲಿಯೇ ಬಂತು ನೆಗೆಟಿವ್‌ ವರದಿ!

ಟೆಲಿಕಾಂ ಸಂಸ್ಥೆಗಳಿಂದ ಸಾವಿರಾರು ಕೋಟಿ ಶುಲ್ಕ ಬಾಕಿ : ಸುಪ್ರೀಂನಿಂದ 10 ವರ್ಷ ಗಡುವು

ಈ ‘ನೀಲಿ’ ನಟನ ಮೇಲಿದೆ 25ಕ್ಕೂ ಅಧಿಕ ರೇಪ್‌ ಕೇಸ್‌: ಆರೋಪ ಸಾಬೀತಾದರೆ 250 ವರ್ಷ ಶಿಕ್ಷೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 9 =
Remember me
