ಬೆಂಗಳೂರು:ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 8960 ಹೊಸ ಕರೊನಾ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ದಾಖಲಾಗಿರುವ ಸೋಂಕಿತರ ಸಂಖ್ಯೆ 3 ಲಕ್ಷದ 18 ಸಾವಿರದ 752ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ 7,464 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕರೊನಾ ಆರಂಭವಾದ ದಿನದಿಂದ ಇಲ್ಲಿಯವರೆಗೆ ಒಟ್ಟು 2 ಲಕ್ಷದ 27 ಸಾವಿರದ 18 ಮಂದಿ ಗುಣಮುಖರಾಗಿದ್ದಾರೆ.
ಸದ್ಯ 86,347 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರಲ್ಲಿ 754 ಮಂದಿ ಐಸಿಯುನಲ್ಲಿ ಇದ್ದಾರೆ.
ಇದನ್ನೂ ಓದಿ:ಸೋಷಿಯಲ್ ಮೀಡಿಯಾದಲ್ಲಿ ಹೊಸ ದಾಖಲೆ ಬರೆದ ವಿರೂಷ್ಕಾ ಗುಡ್‌ನ್ಯೂಸ್!
ಕರೊನಾ ಮಹಾಮಾರಿ ಒಂದೇ ದಿನ ರಾಜ್ಯದಲ್ಲಿ 136 ಮಂದಿಯನ್ನು ಬಲಿ ಪಡೆದಿದ್ದು, ಮೃತರ ಸಂಖ್ಯೆ 5,368ಕ್ಕೆ ಏರಿದೆ.
ಇನ್ನು ಭಾರತದ ವಿಷಯಕ್ಕೆ ಬಂದರೆ, ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 3.39 ದಶಲಕ್ಷ ಮಂದಿಗೆ ಕರೊನಾ ಸೋಂಕು ತಗುಲಿದೆ. ಈ ಪೈಕಿ 2.58 ದಶಲಕ್ಷ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಭಾರತದಲ್ಲಿ ಇಲ್ಲಿಯವರೆಗೆ ಕರೊನಾ ಸೋಂಕಿನಿಂದ 61,529 ಮಂದಿ ಜೀವ ಕಳೆದುಕೊಂಡಿದ್ದಾರೆ.
ಕರ್ನಾಟಕದ ವಿವಿಧ ಜಿಲ್ಲೆಗಳ ಸಂಪೂರ್ಣ ವಿವರ ಇಲ್ಲಿದೆ:

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × five =
Remember me
