ಆನೇಕಲ್‌:ಕರೊನಾ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಲೇ ಸಾಗಿದೆ. ಆನೇಕಲ್ ತಾಲ್ಲೂಕಿನ ಹಾಲ್ದೇನಹಳ್ಳಿ ನಿವಾಸಿ ನಾಗೇಶ್ ಎನ್ನುವವರು ಕರೊನಾದ ವರದಿ ಬರುವುದಕ್ಕಾಗಿ ಕಾದೂ ಕಾದೂ ಆಸ್ಪತ್ರೆಯಲ್ಲಿಯೇ ಪ್ರಾಣ ಬಿಟ್ಟ ಆತಂಕದ ಘಟನೆ ನಡೆದಿದೆ.
ಜ್ವರದಿಂದ ಬಳಲುತ್ತಿದ್ದ ನಾಗೇಶ್‌ ಅವರಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಆದರೆ ವರದಿ ಬರುವುದು ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ ಬೆಡ್ ಸಿಗಲಿಲ್ಲ. ಅದಕ್ಕಾಗಿ ಸರ್ಕಾರಿ ಆಸ್ಪತ್ರೆಯ ಎದುರು ಕಾಯ್ದು ಕಾಯ್ದು ನಂತರ ಕುಳಿತಲ್ಲಿಯೇ ಬಿದ್ದು ನಾಗೇಶ್‌ ಮೃತಪಟ್ಟಿದ್ದಾರೆ.
ಸೋಂಕಿತ ವ್ಯಕ್ತಿಯನ್ನು ಹಾಲ್ದೇನಹಳ್ಳಿ ಕೆರೆಗೆ ಬಳಿ ಅಂತ್ಯಸಂಸ್ಕಾರ ಮಾಡಲು ಸಿದ್ಧತೆ ನಡೆಸಲಾಗಿದೆ. ಗ್ರಾಮ ಪಂಚಾಯತಿ ಸದಸ್ಯ ತಿಮ್ಮರಾಜು ನೇತೃತ್ವದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ. ಇವರ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಹಿಳೆಯೊಬ್ಬರ ಪತಿಗೆ ಜೀವ ನೀಡಲು ತಮ್ಮ ಬದುಕನ್ನು ಬಲಿಕೊಟ್ಟು ಕೊನೆಯುಸಿರೆಳೆದ ಆರ್‌ಎಸ್‌ಎಸ್‌ ಕಾರ್ಯಕರ್ತ

ನಾಳೆಯಿಂದ ನೌಕರರಿಗಾಗಿ ಬಸ್‌ ಇರುತ್ತಾ? ಕೆಲಸಕ್ಕೆ ಹೋಗಲು ಪಾಸ್‌ ಬೇಕಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ ನೋಡಿ…

ಇದು ‘ಪಾಸಿಟಿವ್‌’ ಸಪ್ತಪದಿ: ಕರೊನಾ ಬಂದರೂ ಡೋಂಟ್‌ ಕೇರ್‌- ನಡೆಯಿತು ಹೀಗೊಂದು ಮದುವೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + twenty =
Remember me
