ಬೆಂಗಳೂರು:ಕರೊನಾ ಸೋಂಕಿನಿಂದ ಗುಣಮುಖರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಮಗ ಡಾ. ಯತೀಂದ್ರ ಸಿದ್ದರಾಮಯ್ಯ ಇಬ್ಬರೂ  ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಆಗಸ್ಟ್‌ 4 ರಂದು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯ ಅವರು ಗುಣಮುಖರಾಗಿರುವ ಹಿನ್ನೆಲೆಯಲ್ಲಿ, ಅವರಿಗೆ ಹೂ ಗುಚ್ಚ ನೀಡುವ ಮೂಲಕ ಆಸ್ಪತ್ರೆ ಸಿಬ್ಬಂದಿ ಅವರನ್ನು ಡಿಸ್ಜಾರ್ಜ್‌ ಮಾಡಿ ಮನೆಗೆ ಕಳುಹಿಸಿಕೊಟ್ಟಿದ್ದಾರೆ.
ಈ ಕುರಿತು ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಕರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ‌ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ‌ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದಿದ್ದಾರೆ.
ವೈದ್ಯರ ಸಲಹೆಯಂತೆ ಒಂದು ವಾರ ಮನೆಯಲ್ಲಿ ವಿಶ್ರಾಂತಿ‌ ಪಡೆಯಲಿದ್ದೇನೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ‌ ಮರಳಿದ್ದೇನೆ.ಕಳೆದ 10 ದಿನಗಳಲ್ಲಿ‌ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು.
ವೈದ್ಯರ ಸಲಹೆಯಂತೆಒಂದು ವಾರ ಮನೆಯಲ್ಲಿ ವಿಶ್ರಾಂತಿ‌ ಪಡೆಯಲಿದ್ದೇನೆ.1/2
— Siddaramaiah (@siddaramaiah)August 13, 2020

ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ‌ ಮರಳಿದ್ದೇನೆ.ಕಳೆದ 10 ದಿನಗಳಲ್ಲಿ‌ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು.
ವೈದ್ಯರ ಸಲಹೆಯಂತೆಒಂದು ವಾರ ಮನೆಯಲ್ಲಿ ವಿಶ್ರಾಂತಿ‌ ಪಡೆಯಲಿದ್ದೇನೆ.1/2
— Siddaramaiah (@siddaramaiah)August 13, 2020

ಕರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು, ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು‌ ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ. ಅವರೆಲ್ಲರಿಗೂ ಆಭಾರಿಯಾಗಿದ್ದೇನೆ, ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಮೂತ್ರಕೋಶ ಸೋಂಕಿನಿಂದಾಗಿ ಸಿದ್ದರಾಮಯ್ಯ ಕಳೆದ ಆಗಸ್ಟ್‌ 4ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಪರೀಕ್ಷೆ ನಡೆಸಿದ್ದಾಗ ಅವರಗೆ ಸೋಂಕು ತಗುಲಿರುವುದು ಖಚಿತವಾಗಿತ್ತು. ಹೀಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿತ್ತು.
ಇದೇ ಆಸ್ಪತ್ರೆಯಲ್ಲೇ ಸಿಎಂ ಯಡಿಯೂರಪ್ಪ ಸಹ ಕೊರೋನಾ ಸೋಂಕಿಗೆ ತುತ್ತಾಗಿ ಇದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ಇವರ ಬೆನ್ನಲ್ಲೇ ಇವರ ಮಗ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೂ ಕರೊನಾ ಸೋಂಕು ತಗುಲಿದ್ದರಿಂದ ಅವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರು ಕೂಡ ಇಂದು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಯತೀಂದ್ರ ಅವರು ಟ್ವಿಟರ್‌ ಖಾತೆಯಲ್ಲಿ ಆಸ್ಪತ್ರೆಯ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಿದ್ದಾರೆ. ‘ಇಂದು ತಂದೆಯವರು ಮತ್ತು ನಾನು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದೇವೆ. ಮಣಿಪಾಲ ಆಸ್ಪತ್ರೆಯಲ್ಲಿ ಉತ್ತಮವಾಗಿ ಚಿಕಿತ್ಸೆ ನೀಡಿದ ವೈದ್ಯರು, ಶುಶ್ರೂಷಕಿಯರು ಮತ್ತು ಇತರ ಸಿಬ್ಬಂದಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಮ್ಮ ಆರೋಗ್ಯಕ್ಕಾಗಿ ಹಾರೈಸಿದ ಎಲ್ಲರಿಗೂ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.
ಇಂದು ತಂದೆಯವರು ಮತ್ತು ನಾನು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದೇವೆ. ಮಣಿಪಾಲ ಆಸ್ಪತ್ರೆಯಲ್ಲಿ ಉತ್ತಮವಾಗಿ ಚಿಕಿತ್ಸೆ ನೀಡಿದ ವೈದ್ಯರು, ಶುಶ್ರೂಷಕಿಯರು ಮತ್ತು ಇತರ ಸಿಬ್ಬಂದಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಮ್ಮ ಆರೋಗ್ಯಕ್ಕಾಗಿ ಹಾರೈಸಿದ ಎಲ್ಲರಿಗೂ ಧನ್ಯವಾದಗಳು.
— Dr Yathindra Siddaramaiah (@Dr_Yathindra_S)August 13, 2020

ಬಿಎಸ್‌-4 ವಾಹನ ಖರೀದಿಸಿದ್ದೀರಾ? ಸುಪ್ರೀಂಕೋರ್ಟ್‌ ನೀಡಿದೆ ಸಿಹಿ ಸುದ್ದಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 + nineteen =
Remember me
