ದಾವಣಗೆರೆ:ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ದಾವಣಗೆರೆಯ ಇಮಾಂ ನಗರದ ನಿವಾಸಿ ಸಾದಿಕ್ ಎಂಬಾತನಿಗೆ ಸೆಷನ್ಸ್​ ಕೋರ್ಟ್​ 20 ವರ್ಷಗಳ ಕಠಿಣ ಶಿಕ್ಷೆ ನೀಡಿದೆ. ಜತೆಗೆ 25 ಸಾವಿರ ರೂಪಾಯಿಗಳ ದಂಡ ವಿಧಿಸಿದೆ.
33 ವರ್ಷದ ಸಾಧಿಕ್​ 2019 ರ ಮೇ 19ರಂದು ಈ ಕೃತ್ಯ ಎಸಗಿದ್ದ. ಆಟವಾಡುತ್ತಿದ್ದ 8 ವರ್ಷದ ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದ.
ಈ ಬಗ್ಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಪೊಲೀಸ್​ ಅಧಿಕಾರಿಗಳು ಸಾದಿಕ್​ ಈ ಕೃತ್ಯ ಎಸಗಿರುವುದನ್ನು ಪತ್ತೆ ಹಚ್ಚಿದ್ದರು. ಈತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ (ಪೋಕ್ಸೋ) ಕಾಯ್ದೆಯಡಿ ಎಫ್​ಐಆರ್ ದಾಖಲು ಮಾಡಲಾಗಿತ್ತು.
ಮಹಿಳಾ ಠಾಣೆಯ ಸರ್ಕಲ್​ ಇನ್ಸ್​ಪೆಕ್ಟರ್​ ಪ್ರಭಾವತಿ ಶೇತಾಸನದಿ ನೇತೃತ್ವದಲ್ಲಿ ಈ ಪ್ರಕರಣ ವಿಚಾರಣೆ ನಡೆದಿತ್ತು. ಈತನೇ ಅತ್ಯಾಚಾರ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಸೆಷನ್ಸ್​ ಕೋರ್ಟ್​ ನ್ಯಾಯಾಧೀಶೆ ಎಸ್. ನಾಗಶ್ರೀ ಅವರು 20 ವರ್ಷಗಳ ಕಠಿಣ ಶಿಕ್ಷೆ ಮತ್ತು 25 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ.
ಪುರುಷತ್ವ ಹೆಚ್ಚಿಸಲು ಆಯುರ್ವೇದ ಪರಿಹಾರವೇನು? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ…

ಐಟಿಐ ಪಾಸಾಗಿದ್ದೀರಾ? ಹಾಗಿದ್ದರೆ ಇಲ್ಲಿದೆ ನಿಮಗೆ ಉದ್ಯೋಗಾವಕಾಶ

ಮನೆಯ ಆಳವಾದ ಹೊಂಡದಲ್ಲಿ ಕಾಲು ಜಾರಿ ಬಿದ್ದಾಕೆ ಪತ್ತೆಯಾಗಿದ್ದು ಪಕ್ಕದ್ಮನೆ ಬಾವಿಯಲ್ಲಿ!

ನನ್ನನ್ನು ಸಲಿಂಗಕಾಮಿ ಎಂದರು- ನನಗೂ ಹಾಗೆನಿಸಲು ಶುರುವಾಯಿತು: ಭಯಾನಕ ದಿನಗಳ ಬಿಚ್ಚಿಟ್ಟ ನಟಿ ನೀಲಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 13 =
Remember me
