ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಿಬ್ಬಂದಿ ಮತ್ತು ಆಡಳಿ ಸುಧಾರಣೆ ಇಲಾಖೆ (ಇ-ಆಡಳಿತ) ಅಭಿವೃದ್ಧಿ ಪಡಿಸಿರುವ “ಡಿ.ಬಿ.ಟಿ” (ಡೈರೆಕ್ಟ್‌ ಬೆನಿಫಿಟ್‌ ಟ್ರಾನ್ಸ್‌ಫರ್‌) ಮೊಬೈಲ್ ಅಪ್ಲಿಕೇಶನ್‍ಗೆ ಚಾಲನೆ ನೀಡಿದರು.
ರಾಜ್ಯದಲ್ಲಿ ಈ ವರೆಗೆ ಸುಮಾರು 120 ಯೋಜನೆಗಳನ್ನು ಈ ವೇದಿಕೆಗೆ ಒಳಪಡಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ 12 ಸಾವಿರ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತವನ್ನು ಫಲಾನುಭವಿಗಳ ಆಧಾರ್ ಜೋಡಣೆಯಾದ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ. ಈ ವ್ಯವಸ್ಥೆಯಿಂದ ಹಣ ದುರುಪಯೋಗ, ಲೋಪ ದೋಷ ಅಥವಾ ಮಧ್ಯವರ್ತಿಗಳ ಹಾವಳಿ ಇಲ್ಲ ಎಂದು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದರು.ಕೋವಿಡ್-19ರ ಮೊದಲನೆ ಮತ್ತು ಎರಡನೆಯ ಅಲೆಯ ಸಂದರ್ಭದಲ್ಲಿ ಸರ್ಕಾರವು ಘೋಷಿಸಿದ ಎಲ್ಲಾ ಪ್ಯಾಕೇಜ್‍ಗಳು ಈ ವೇದಿಕೆ ಮೂಲಕವೇ ಪಾವತಿ ಮಾಡಲಾಗಿದೆ.
ಈ ಬಾರಿಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯದಲ್ಲಿ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವ ಎಲ್ಲ ಯೋಜನೆಗಳನ್ನು ಡಿ.ಬಿ.ಟಿ. ವೇದಿಕೆಯಡಿ ತರಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.ಈ ವೇದಿಕೆಯು ಫಲಾನುಭವಿಯನ್ನು ಆಧಾರ್ ಸಂಖ್ಯೆ ಮೂಲಕ ಗುರುತಿಸಿ ಫಲಾನುಭವಿಯ ಆಧಾರ್ ಅನ್ನು ಆರ್ಥಿಕ ವಿಳಾಸವಾಗಿ (Financial Address) ಪರಿಗಣಿಸಿ ನಗದು ವರ್ಗಾವಣೆಯನ್ನು ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು.
ಬ್ಯಾಂಕ್ ಖಾತೆಗೆ ಆಧಾರ್ ಜೋಡನೆ ಮಾಹಿತಿಯು ಯು.ಐ.ಡಿ.ಐ. ಜಾಲತಾಣದಲ್ಲಿ ಮಾತ್ರ ಲಭ್ಯವಿದ್ದು ನಾಗರಿಕರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿರುವ ಬಗ್ಗೆ ತಿಳಿದುಕೊಳ್ಳಲು ಕಷ್ಟವಾಗಿತ್ತು. ನಾಗರಿಕರ ಆಧಾರ್ ಬ್ಯಾಂಕ್ ಖಾತೆಗೆ ಜೋಡಣೆಯಾಗದೇ ಇದ್ದಲ್ಲಿ ರಾಜ್ಯ ಸರ್ಕಾರವು ನಗದು ಸೌಲಭ್ಯ ವರ್ಗಾವಣೆಗೆ ಬಳಸುತ್ತಿರುವ ಆಧಾರ್ ಆಧಾರಿತ ನಗದು ವರ್ಗಾವಣೆ ವ್ಯವಸ್ಥೆ (Aadhaar Based Payment System) ಮೂಲಕ ಹಣ ಪಡೆಯಲು ಸಾಧ್ಯವಾಗುವುದಿಲ್ಲ. ಇದಲ್ಲ ಬಹಳಷ್ಟು ನಾಗರಿಕರಿಗೆ ತಮ್ಮ ಯಾವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿದೆ ಎಂಬ ಮಾಹಿತಿ ತಿಳಿದಿರುವುದಿಲ್ಲ. ಇದರಿಂದ ಸರ್ಕಾರವು ಯಾವ ಬ್ಯಾಂಕ್ ಖಾತೆಗೆ ನಗದು ಸೌಲಭ್ಯವನ್ನು ಜಮೆ ಮಾಡಿದೆ ಎಂಬ ವಿವರಗಳನ್ನು ತಿಳಿದುಕೊಳ್ಳಲು ಇವರುಗಳಿಗೆ ಬಹಳ ಕಷ್ಟವಾಗುತ್ತದೆ. ಅಲ್ಲದೆ ಇತ್ತೀಚಿಗೆ ರಾಜ್ಯ ಸರ್ಕಾರವು ನಾಗರಿಕರಿಂದ ಯಾವುದೇ ಅರ್ಜಿ ಪಡೆಯದೇ ಅರ್ಹತೆ ಆಧಾರದ ಮೇಲೆ ನಗದು ವರ್ಗಾವಣೆಯನ್ನು ಮಾಡುತ್ತಿರುವುದರಿಂದ ಇವರುಗಳಿಗೆ ಹಣ ಬ್ಯಾಂಕ್ ಖಾತೆಯಲ್ಲಿ ಜಮೆಯಾಗುವ ಬಗ್ಗೆಯು ಮಾಹಿತಿ ಲಭ್ಯ ಇರುವುದಿಲ್ಲ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಡಿ.ಬಿ.ಟಿ ಮೊಬೈಲ್ ಆಪ್ ಅನ್ನು ಅಭಿವೃದ್ಧಿಪಡಿಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈ ಆ್ಯಪ್ ಅನ್ನು ನಾಗರೀಕರು ಹೆಚ್ಚು-ಹೆಚ್ಚಾಗಿ ಬಳಸಿದಾಗ ಪಾರದರ್ಶಕತೆ ಇರುವ ಸರ್ಕಾರದ ಉದ್ದೇಶ ಯಶಸ್ವಿಯಾಗಲು ಸಾಧ್ಯ. ಆದ್ದರಿಂದ ನಾಗರೀಕರು ಈ ಆ್ಯಪ್‍ನ ಸದುಪಯೋಗ ಪಡೆದುಕೊಂಡು ಫಲಾನುಭವಿಗಳಿಗೆ ವರ್ಗಾವಣೆಯಾಗಿರುವ ನಗದು ವಿವರವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಇ-ಆಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಡಿ.ಬಿ. ಟಿ. ಯೋಜನಾ ನಿರ್ದೇಶಕ ಶ್ರೀವತ್ಸ, ಎನ್.ಐ.ಸಿ ಉಪ ನಿರ್ದೇಶಕರಾದ ಜಯಂತಿ ಮತ್ತಿತರರು ಉಪಸ್ಥಿತರಿದ್ದರು.
ಡಿ.ಬಿ.ಟಿ ಅಪ್ಲಿಕೇಷನ್ ಬಗ್ಗೆ:ಈ ಆ್ಯಪ್‌ ಅನ್ನು ಗೂಗಲ್ ಪ್ಲೇ-ಸ್ಟೋರ್‌ ಮೂಲಕ ಡೌನ್‍ಲೋಡ್ ಮಾಡಿಕೊಂಡು, ಆಧಾರ್ e-ಕೆವೈಸಿ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. (DBT Karnataka ಎಂದು ಟೈಪ್‌ ಮಾಡಿ. ಡಿಬಿಟಿ ಎಂದು ಕನ್ನಡದಲ್ಲಿ ಕೆಂಪು ಅಕ್ಷರದಲ್ಲಿ ಇರುವ ಒಂದು ಆ್ಯಪ್‌ ನಿಮಗೆ ಕಾಣಿಸುತ್ತದೆ. ಅದನ್ನು ಕ್ಲಿಕ್‌ ಮಾಡಿ) ಅಥವಾ ಇಲ್ಲಿ ಕ್ಲಿಕ್‌ ಮಾಡಿ ಡೌನ್‌ಲೋಡ್‌ ಮಾಡಿಕೊಳ್ಳಿ.https://play.google.com/store/apps/details?id=com.dbtkarnataka
ಈ ಆ್ಯಪ್‌ NPCI (National Payment Corporation of India) ಗೆ ಸಂಪರ್ಕಿಸಿ ಆಧಾರ್ ಬ್ಯಾಂಕ್ ಸೀಡಿಂಗ್‌ನ ಪ್ರಸ್ತುತ ಸ್ಥಿತಿಯನ್ನು ನೀಡುತ್ತದೆ.• ಡಿ.ಬಿ.ಟಿ ಮೊಬೈಲ್ ಆಪ್ ಯೋಜನೆವಾರು ವಿವಿಧ ಕಂತುಗಳಲ್ಲಿ ವರ್ಗಾಹಿಸಿದ ಪಾವತಿ ಮೊತ್ತ, ಪಾವತಿ ದಿನಾಂಕ, ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಯು.ಟಿ.ಆರ್ ಸಂಖ್ಯೆಯನ್ನು ಒದಗಿಸುತ್ತದೆ.
ಫುಡ್‌ ಡೆಲಿವರಿ ಗರ್ಲ್‌: ಕೈಯಲ್ಲಿ ಕೆಲಸವೇ ಇಲ್ಲ ಎಂದು ಗೋಳೋ ಎನ್ನುವವರಿಗೆ ಈಕೆಯೇ ಸ್ಫೂರ್ತಿಯ ಚಿಲುಮೆ

ನೌಕರರ ಕ್ಷೇಮಕ್ಕೆ ಕೇಂದ್ರದ ಕಾಳಜಿ: ವಿಶೇಷ ರಜಾ ಸೌಲಭ್ಯ- ಕಳೆದ ವರ್ಷದಿಂದಲೇ ಅನ್ವಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 19 =
Remember me
