ಚಿಕ್ಕಬಳ್ಳಾಪುರ: ತನ್ನ ಪತ್ನಿಯ ಜೊತೆ ವಾಟ್ಸ್‌ಆ್ಯಪ್‌ನಲ್ಲಿ ಚಾಟಿಂಗ್ ಮಾಡುತ್ತಿದ್ದ ಎನ್ನುವ ಕಾರಣಕ್ಕೆ ಸ್ನೇಹಿತನನ್ನೇ ಕೊಂದು ಸುಟ್ಟು ಭಸ್ಮ ಮಾಡಿದ ಭಯಾನಕ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ತನ್ನ ಪತ್ನಿಯ ಜತೆಯೇ ಸ್ನೇಹಿತ ಅನೈತಿಕ ಸಂಬಂಧ ಹೊಂದಿದ್ದ ಎಂದು ಶಂಕಿಸಿರುವ ಅಶೋಕ ಎಂಬಾತ ತನ್ನ ಇತರ ಸ್ನೇಹಿತರ ಜತೆಗೂಡಿ ಈ ಕೃತ್ಯ ಎಸಗಿದ್ದಾನೆ.
ಮುತ್ತಕದಹಳ್ಳಿ ಗ್ರಾಮದ ಶಂಕರ್(28) ಮೃತ ವ್ಯಕ್ತಿಯಾಗಿದ್ದು ಈ ಘಟನೆ ಗೌರಿಬಿದನೂರು ತಾಲ್ಲೂಕಿನ ಕಂಬಾಲಪಲ್ಲಿ ಗ್ರಾಮದ ನೀಲಗಿರಿ ತೋಪಿನ ಬಳಿ ನಡೆದಿದೆ.ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹಲವು ತಿಂಗಳಿಂದ ಶಂಕರ್‌ ಅಶೋಕನ ಪತ್ನಿಯನ್ನು ಚುಡಾಯಿಸುತ್ತಿದ್ದ. ಪದೇಪದೆ ತಿಳಿ ಹೇಳಲಾಗಿದ್ದರೂ ತನ್ನ ಚಾಳಿ ಮುಂದುವರೆಸಿದ್ದ. ಇದರಿಂದ ಕೆರಳಿದ ಅಶೋಕ್ ಈ ಕೊಲೆ ಮಾಡಿದ್ದಾನೆ ಎಂದೂ ಹೇಳಲಾಗುತ್ತಿದೆ. ಒಟ್ಟಿನಲ್ಲಿ ಸತ್ಯಾಂಶ ಇನ್ನಷ್ಟೇ ಹೊರಬರಬೇಕಿದೆ.(ದಿಗ್ವಿಜಯ ನ್ಯೂಸ್‌)
ಲತಾ ಮಂಗೇಶ್ಕರ್‌ ಆರೋಗ್ಯದಲ್ಲಿ ಚೇತರಿಕೆ- ಗಾನ ಕೋಗಿಲೆಯ ಚಿಕಿತ್ಸೆಗೆ ದುಡಿಮೆಯನ್ನು ನೀಡುತ್ತಿರೋ ಆಟೋ ಚಾಲಕ
ನಾವು ಅಧಿಕಾರಕ್ಕೆ ಬಂದ್ರೆ ಇಬ್ಬರು ಮುಖ್ಯಮಂತ್ರಿ, ಮೂವರು ಉಪ ಮುಖ್ಯಮಂತ್ರಿ- ಇದು ಚುನಾವಣಾ ಭರವಸೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − two =
Remember me
