ಬೆಂಗಳೂರು:ಕೃಷಿ ಮಸೂದೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ಕರೆ ನೀಡಿರುವ ಡಿಸೆಂಬರ್ 8ರ ಭಾರತ ಬಂದ್‌ ಭಾಗವಾಗಿ ಕರ್ನಾಟಕದಲ್ಲಿ ಸಂಪೂರ್ಣ ಬಂದ್ ಆಚರಿಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಮರಾಠಾ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಬಂದ್​ ನಡೆದ ಮೂರನೇ ದಿನಕ್ಕೆ ಮತ್ತೆ ಕರ್ನಾಟಕ ಬಂದ್​ ಆಗಲಿದೆ.ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ರೈತರ ಪ್ರತಿಭಟನೆ ಸರಿಯಾಗಿ ಮಾಡಲು ಕೊಡಲಿಲ್ಲ. ಅವರ ಚಳವಳಿಯನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡಿದೆ. ಬೇಜವಾಬ್ದಾರಿಯಿಂದ ವರ್ತಿಸಿದೆ. ಆದ್ದರಿಂದ ಕರ್ನಾಟಕ ಬಂದ್​ ಮಾಡುವ ಮೂಲಕ ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿ ರೈತರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಾರೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ:ಇಲ್ಲಿ ವರ ಅವನದ್ದೇ ಮದ್ವೆಗೆ ಹೋಗೋ ಹಾಗಿಲ್ಲ-ವಧುವಿಗೆ ಹೆಣ್ಣೇ ತಾಳಿ ಕಟ್ಟೋದು!
ಯಡಿಯೂರಪ್ಪನವರು ನಮ್ಮ ಬಂದ್ ಹತ್ತಿಕ್ಕುವ ಕೆಲಸ ಮಾಡಬಾರದು ಎಂದರು. ಈ ಬಂದ್‌ಗೆ ಎಲ್ಲ ಸಂಘಟನೆಗಳು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿಕೊಂಡರು.
ಕೇಂದ್ರ ಸರಕಾರ ರೈತರ ಹಾಗೂ ದೇಶ ವಿರೋಧಿ ಮತ್ತು ಕಾರ್ಪೋರೇಟ್ ಕಂಪನಿ ಪರವಾದ ಕೃಷಿ ಕಾಯ್ದೆಗಳು ಮತ್ತು ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ- 2020 ಮತ್ತು ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆ – 2020 ಗಳನ್ನು ಬೇಷರತ್ತಾಗಿ ವಾಪಾಸು ಪಡೆಯುವಂತೆ ಒತ್ತಾಯಿಸಲಾಗುವುದು. ಅಂದು ಎಲ್ಲಾ ಹೆದ್ದಾರಿ, ರಸ್ತೆಗಳನ್ನು ಬಂದ್ ಮಾಡುತ್ತೇವೆ.
ಬಂದ್‌ಗೆ ಎಡಪಕ್ಷದವರು, ಪುಟ್ಟಣ್ಣಯ್ಯನವರ ರೈತ ಸಂಘಟನೆ, ಕುರುಬೂರು ಶಾಂತಕುಮಾರ್ ಸಂಘಟನೆಯವರು ಭಾಗವಹಿಸುತ್ತಾರೆ. ಅನೇಕ ಕನ್ನಡ ಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಭಾಗವಹಿಸಲಿವೆ ಎಂದು ಹೇಳಿದರು.
ಬಾಹ್ಯಾಕಾಶದ ರಹಸ್ಯ ಭೇದಿಸುತ್ತಿದ್ದ 900 ಟನ್ ‘ಅರೆಸಿಬೊ’ ಧರೆಗೆ! ಸಿಸಿಟಿವಿಯಲ್ಲಿ ಸೆರೆ

80 ವರ್ಷದ ಅತ್ತೆಯನ್ನು ಹೊರದಬ್ಬಿ ಚಳಿಯಲ್ಲಿ ಮಲಗಿಸಿದ ಸೊಸೆ- ವಿಡಿಯೋ ವೈರಲ್

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × 3 =
Remember me
