ಮೈಸೂರು:ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ‌.ಹರೀಶ್ ಗೌಡ ಹಾಗೂ ಶಾಸಕ ಜಿ.ಟಿ‌.ದೇವೇಗೌಡರ ಮೊಮ್ಮಗಳು ಗೌರಿ ಶನಿವಾರ ರಾತ್ರಿ ನಿಧನಳಾಗಿದ್ದಾಳೆ. ಈಕೆಗೆ ಮೂರು ವರ್ಷ ವಯಸ್ಸಾಗಿತ್ತು.
ಕೆಲ ದಿನಗಳಿಂದ ಈಕೆ ಅನಾರೋಗ್ಯದಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಈಕೆಯನ್ನು ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ.
ಮೈಸೂರು ತಾಲೂಕಿನ ಗುಂಗಾಲ್ ಛತ್ರದ ತೋಟದ ಮನೆಯಲ್ಲಿ ಇಂದು (ಭಾನುವಾರ) ಮಧ್ಯಾಹ್ನ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಬಾಲಕಿ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ. ಮಗುವಿನ ಆತ್ಮಕ್ಕೆ ಚಿರಶಾಂತಿ ಸಿಗಲಿ. ದುಃಖವನ್ನು ಭರಿಸುವ ಶಕ್ತಿಯನ್ನು ಜಿ.ಟಿ.ದೇವೇಗೌಡರು, ಅವರ ಪುತ್ರ ಹರೀಶ್‌ ಮತ್ತು ಕುಟುಂಬಕ್ಕೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಮಾಜಿ ಮಂತ್ರಿಗಳಾದ ಶ್ರೀ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಅಸುನೀಗಿರುವ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ.1/2pic.twitter.com/RZIcuAuiOI
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)May 15, 2022

ಆ್ಯಸಿಡ್‌ ಹಾಕಿಬಂದೆ, ಪೊಲೀಸ್ರಿಗೆ ಇನ್ನೂ ಗೊತ್ತಾಗಿಲ್ಲ, ಪ್ಲೀಸ್ ಬೇಲ್‌ ಕೊಡಿಸಿ ಎಂದು ವಕೀಲರ ಬಳಿ ಓಡಿದ್ದ ನಾಗ!

ಮದುವೆ ಎಂಬುದೇ ಈಕೆಯ ಬಾಳಿಗೆ ಬೆಂಕಿ ಇಟ್ಟಿತಾ? ಹಸೆಮಣೆ ಏರಬೇಕಿದ್ದ ತುಮಕೂರು ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಿಯಕರನ ಲೈಂಗಿಕ ಆಸೆ ಈಡೇರಿಸಲು ಮಗಳನ್ನೇ ಆತನ ಬಳಿ ಬಿಟ್ಟ ಪಾಪಿ ತಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 19 =
Remember me
