ಬೆಂಗಳೂರು:ಪೈಗಂಬರ್‌ ವಿರುದ್ಧ ಹಾಕಿರುವ ಪೋಸ್ಟ್‌ ಒಂದನ್ನು ನೆಪಮಾಡಿಕೊಂಡು ಕೆಲ ಕಿಡಿಗೇಡಿಗಳು ಬೆಂಗಳೂರಿನ ಡಿ.ಜೆ ಹಳ್ಳಿಯಲ್ಲಿ ಸೃಷ್ಟಿಸಿರುವ ಗಲಭೆ ಪ್ರಕರಣ ಕ್ಷಣಕ್ಷಣಕ್ಕೂ ತಿರುವು ಪಡೆಯುತ್ತಲೇ ಸಾಗಿದೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳ ಪೈಕಿ ಫರ್ಹಾನ್‌ ಎಂಬ ಯುವಕ ಕೂಡ ಒಬ್ಬ. ಈತನನ್ನು ನಿನ್ನೆ ಅಂದರೆ ಗುರುವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗಲಭೆ ಪ್ರಕರಣದಲ್ಲಿ ಈತನ ಕೈವಾಡವೂ ಇರುವ ಶಂಕೆ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಇತರ ಕೆಲವರ ಜತೆ ಫರ್ಹಾನ್‌ ಕೂಡ ಬಂಧಿತನಾಗಿದ್ದಾನೆ. ಈತ ಡಿಜೆ ಹಳ್ಳಿಯ ಕುಬ್ಬ ಮಸೀದಿ ರಸ್ತೆಯ ನಿವಾಸಿ.
ಮಗನ ಬಂಧನದ ಸುದ್ದಿ ಕೇಳಿ ಆತನ ತಂದೆಗೆ ಹೃದಯಾಘಾತವಾಗಿದ್ದು ಇಂದು ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ.ತಂದೆ ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮಗನಿಗೆ ಅವಕಾಶ ನೀಡಿದ್ದಾರೆ.ತಂದೆಯ ಅಂತ್ಯ ಸಂಸ್ಕಾರಕ್ಕೆ ತೆರಳಲು ಆರೋಪಿ ಫರ್ಹಾನ್‍ಗೆ ಅವಕಾಶ ಕಲ್ಪಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಇದನ್ನೂ ಓದಿ:ಉತ್ತರಪ್ರದೇಶ ಮಾದರಿಯಂತೆ ಡಿಜೆ ಹಳ್ಳಿ ಘಟನೆಗೆ ಕಾರಣರಾದವರ ಆಸ್ತಿ ಮುಟ್ಟುಗೋಲಿಗೆ ಚಿಂತನೆ ನಡೆದಿದೆ; ಡಿಸಿಎಂ ಲಕ್ಷ್ಮಣ ಸವದಿ
ಗಲಭೆಗೆ ಸಂಬಂಧಿಸಿದಂತೆ ಇದುವರೆಗೂ 151 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಮುಜಾಮಿಲ್‍ನನ್ನು ಐದು ದಿನ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಕರೊನಾ ಪರೀಕ್ಷೆಗೆ ಒಳಪಟ್ಟ 40 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮೂವರಿಗೆ ಕರೊನಾ ಬಂದಿದೆ. ಉಳಿದ ಆರೋಪಿಗಳ ಟೆಸ್ಟ್ ವರದಿ ಬಂದ ಬಳಿಕ ಕೋರ್ಟ್‍ಗೆ ಹಾಜರುಪಡಿಸಲಾಗುತ್ತದೆ. ತನಿಖೆ ಹಂತದಲ್ಲಿ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ನಾವೇ ಮಾಹಿತಿ ನೀಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.
ನಕ್ಸಲ್‌ ಆಗಲು ಅನುಮತಿ ಕೊಡಿ- ರಾಷ್ಟ್ರಪತಿಗೆ ಯುವಕನ ಪತ್ರ: ಆಂಧ್ರದಲ್ಲಿ ತಲ್ಲಣ!

ಮಚ್ಚು ಹಿಡಿದು ಚಿನ್ನದಂಗಡಿಗೆ ನುಗ್ಗಿದವನ ಚಚ್ಚಿದಳು ಚಿಕ್ಕಮಗಳೂರು ಮಹಿಳೆ!

ನಾಯಿಗಳು ಕಚ್ಚಿ ತಿಂದ ಕರೊನಾ ಸೋಂಕಿತನ ಶವ!

ಪಾಕ್‌ಗೆ ಬಿಗ್‌ ಷಾಕ್‌: ಸಾಲವೂ ಬಂದ್‌, ತೈಲವೂ ಬಂದ್‌ ಎಂದ ಸೌದಿ ಅರೇಬಿಯಾ!

ಫ್ರಿಜ್‌ ಟ್ರೇ ಬಳಸಿ ಆನ್‌ಲೈನ್‌ ಕ್ಲಾಸ್‌: ಶಿಕ್ಷಕಿಯ ಪ್ಲ್ಯಾನ್‌ಗೆ ಅಪಾರ ಮೆಚ್ಚುಗೆ

ದಫನ್‌ ಆಗಿದ್ದವ ರಾತ್ರಿ ಹೆಂಡತಿಗೆ ಪ್ರತ್ಯಕ್ಷನಾಗಿ ನಾನೇ ನಿನ್ನ ಗಂಡ ಎಂದ!

ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಪತ್ನಿ ಡೆಲಿವರಿ: ಶ್ಲಾಘನೆಗಳ ಮಹಾಪೂರ

ಹೋಟೆಲ್‌ನಲ್ಲಿ ರಾತ್ರಿ ಕಳೆದ ಪ್ರೇಮಿಗಳು ಮಾರನೆಯ ದಿನ ಶವವಾದರು!

ಹುಟ್ಟುಹಬ್ಬಕ್ಕೆ ಡಾನ್ಸ್‌ ಮಾಡಿ ಮೋಡಿ ಮಾಡಿದ 93ರ ಅಜ್ಜಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − four =
Remember me
