ಬೆಂಗಳೂರು:ನಿನ್ನೆ ನಡೆದ ದಾಳಿ ವೇಳೆ ಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ನನ್ನ ಪಿಎಗೆ ಹೊಡೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಅದೇ ಇನ್ನೊಂದೆಡೆ, ಟ್ವೀಟ್​ ಮೂಲಕ ಸಿಬಿಐ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿರುವ ಅವರ ಸಹೋದರ, ಸಂಸದ ಡಿ.ಕೆ.ಸುರೇಶ್​, ಕನಕಪುರ, ಬೆಂಗಳೂರು ಮತ್ತು ದೆಹಲಿಯ ನಮ್ಮ ಮನೆ ಮತ್ತು ಕಚೇರಿಗಳಿಗೆ ಬಂದು ಯಾವುದೇ ಕಿರುಕುಳ ನೀಡದೇ ವೃತ್ತಿಪರವಾಗಿ ನಡೆದುಕೊಂಡ ಸಿಬಿಐ ಅಧಿಕಾರಿಗಳಿಗೆ ಧನ್ಯವಾದ ಹೇಳಲು ಇಚ್ಛಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.
ಇಂದು ನಂಜಾವಧೂತ ಸ್ವಾಮೀಜಿಯವರನ್ನು ಭೇಟಿ ಮಾಡಿದ್ದ ಡಿ.ಕೆ.ಸುರೇಶ್​ ಕುಮಾರ್​ ಅಧಿಕಾರಿಗಳ ವಿರುದ್ಧ ಹಲವಾರು ಆರೋಪಗಳನ್ನು ಮಾಡಿದ್ದಾರೆ. ತಮ್ಮ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಬಗ್ಗೆಯೂ ಅವರು ಉಲ್ಲೇಖಿಸಿದ್ದಾರೆ. ಜತೆಗೆ, ಸಿಬಿಐ ದಾಳಿ ನಡೆದಿರುವುದರ ಹಿಂದೆ ರಾಜಕೀಯ ಷಡ್ಯಂತ್ರವಿದೆ. ಕೆಪಿಸಿಸಿ ಅಧ್ಯಕ್ಷನಾದ ಬಳಿಕ ನಾನು ತುಂಬಾ ಸಕ್ರಿಯನಾಗಿದ್ದೇ ತಪ್ಪಾಗಿದೆ. ಇದು ಬಿಜೆಪಿ ನಾಯಕರ ಕಣ್ಣು ಕುಕ್ಕಿದಂತಾಗಿದೆ. ಈಗ ಉಪಚುನಾವಣೆ ಬಂದಿರುವುದರಿಂದ ಸಿಬಿಐ ದಾಳಿ ನಡೆಯುವಂತೆ ಮಾಡಿದ್ದಾರೆ ಎಂದು ಸ್ವಾಮೀಜಿ ಎದುರು ಆರೋಪ ಮಾಡಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ:ಬಿಜೆಪಿ ಜತೆ ಸಿದ್ದರಾಮಯ್ಯ ಒಳಒಪ್ಪಂದ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ
ದಾಳಿ ಕುರಿತಂತೆ ಸರಣಿ ಟ್ವೀಟ್​ ಮಾಡಿರುವ ಡಿ.ಕೆ.ಸುರೇಶ್​ ಅವರು, 57 ಲಕ್ಷ ರೂಪಾಯಿ ದಾಳಿಯ ವೇಳೆ ಸಿಕ್ಕಿದೆ ಎಂದಿರುವುದು ಸುಳ್ಳು ವರದಿ ಎಂದಿದ್ದಾರೆ. ಸಿಬಿಐ ಅಧಿಕಾರಿಗಳು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ಒಟ್ಟು 57 ಲಕ್ಷ ಸಿಕ್ಕಿದ ಮಾಹಿತಿ ಕೊಟ್ಟಿದ್ದಾರೆ. ಆದರೆ ಸಿಕ್ಕಿರುವುದು 6.78 ಲಕ್ಷ ರೂಪಾಯಿಗಳಷ್ಟೇ. ಬಾಕಿ 50.22 ಲಕ್ಷ ಹಣ ಎಲ್ಲಿ ಸಿಕ್ಕಿದೆ, ಅದರ ಹಿನ್ನೆಲೆ ಏನು ಎಂಬುದನ್ನು ಅಧಿಕಾರಿಗಳೇ ಸ್ಪಷ್ಟಪಡಿಸಬೇಕು ಎಂದು ಸವಾಲು ಹಾಕಿದ್ದಾರೆ.
ಅಧಿಕಾರಿಗಳ ದಾಖಲೆ ಪರಿಶೀಲನೆಯಲ್ಲಿ ನನ್ನ ಮತ್ತು ನನ್ನ ಅಣ್ಣನ ಮನೆಯಿಂದ ಸೇರಿ ಒಟ್ಟು 6.78 ಲಕ್ಷ ರೂಪಾಯಿಗಳು ಸಿಕ್ಕಿರುತ್ತದೆ. ಅದರಲ್ಲಿ ನನ್ನ ದೆಹಲಿ ನಿವಾಸದಲ್ಲಿ 1.57 ಲಕ್ಷ, ಬೆಂಗಳೂರಿನ ನನ್ನ ಅಣ್ಣನ ನಿವಾಸದಲ್ಲಿ 1.71 ಲಕ್ಷ, ಅವರ ಬೆಂಗಳೂರಿನ ಕಚೇರಿಯಲ್ಲಿ 3.5 ಲಕ್ಷ ರೂಪಾಯಿಗಳು ಅಧಿಕಾರಿಗಳಿಗೆ ಸಿಕ್ಕಿದೆ.
ಇನ್ನು CBI ಅಧಿಕಾರಿಗಳು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ದಾಖಲೆಗಳಲ್ಲಿ ಒಟ್ಟು 57 ಲಕ್ಷ ಸಿಕ್ಕಿದ ಮಾಹಿತಿ ಕೊಟ್ಟಿದ್ದಾರೆ. ಇದರಲ್ಲಿ ಬಾಕಿ 50.22 ಲಕ್ಷ ಹಣ ಎಲ್ಲಿ ಸಿಕ್ಕಿದೆ, ಅದರ ಹಿನ್ನೆಲೆ ಏನು ಎಂಬುದನ್ನು ಅಧಿಕಾರಿಗಳೇ ಸ್ಪಷ್ಟಪಡಿಸಬೇಕು.6/8
— DK Suresh (@DKSureshINC)October 6, 2020

ಇನ್ನು ನನ್ನ ಅಣ್ಣನ ದೆಹಲಿ ಮನೆ ಮತ್ತು ನನ್ನ ಬೆಂಗಳೂರಿನ ಮನೆಯಲ್ಲಿ ಯಾವುದೇ ಹಣ ಸಿಕ್ಕಿರುವುದಿಲ್ಲ. ಹಾಗೆಯೇ ನಮ್ಮ ಎರಡೂ ಮನೆಗಳಲ್ಲಿ ಅಧಿಕಾರಿಗಳು ಇಲ್ಲಿಯವರೆಗೂ ಯಾವುದೇ ಆಭರಣಗಳನ್ನೂ ವಶಪಡಿಸಿಕೊಂಡಿಲ್ಲ. ಆಭರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಐಟಿ ಮತ್ತು ಇ.ಡಿಗೆ ಕೊಟ್ಟ ದಾಖಲೆಗಳನ್ನೇ ಮತ್ತೊಮ್ಮೆ ಸಿಬಿಐ ಹೇಳಿದೆ ಎಂದಿದ್ದಾರೆ.
ಡಿಎನ್ಎ ವರದಿಯ ಆಧಾರದ ಮೇಲೆ ವಿಚ್ಛೇದನ ಪಡೆಯಬಹುದೆ?

ಮಗಳಿಗೆ ಮಕ್ಕಳಾಗಿಲ್ಲವೆಂದು ಅಪ್ಪ ಕಳ್ಳನಾಗೋದಾ? ನಂಜನಗೂಡಲ್ಲೊಂದು ವಿಚಿತ್ರ ಘಟನೆ

ಅತ್ಯಾಚಾರದ ವಿರುದ್ಧ ದೂರು ದಾಖಲಿಸಲು 800 ಕಿ.ಮೀ ದೂರ ಧಾವಿಸಿದ ಯುವತಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × three =
Remember me
