ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಸಿಬಿಐ ಡಿ.ಕೆ.ಸುರೇಶ್​ ಅವರ ಮನೆಯ ಮೇಲೆ ದಾಳಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ತಮಗೆ ಕರೊನಾ ಪಾಸಿಟಿವ್​ ಬಂದಿರುವುದಾಗಿ ಸುರೇಶ್​ ಹೇಳಿದ್ದಾರೆ.
ಈ ಕುರಿತು ಟ್ವೀಟ್​ ಮಾಡಿರುವ ಅವರು, ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ ಎಂದಿದ್ದಾರೆ.
ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಹಾಗೂ ಕೆಲವು ಪತ್ರಕರ್ತರು ಅವರ ಅತ್ಯಂತ ಸಮೀಪ ಸಂಪರ್ಕಕ್ಕೆ ಬಂದಿದ್ದ ಹಿನ್ನೆಲೆಯಲ್ಲಿ ಎಲ್ಲರಲ್ಲಿಯೂ ಇದೀಗ ಆತಂಕ ಶುರುವಾಗಿದೆ.
#Covid19ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ CBI ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ#Coronaಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ.
— DK Suresh (@DKSureshINC)October 6, 2020

ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸಿಕೊಳ್ಳುತ್ತೇನೆ ಎಂದು ಅವರು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಡಿಕೆ ಸುರೇಶ್ ಅವರ ಅಣ್ಣ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ಚಿಕಿತ್ಸೆ ಬಳಿಕ ಇದೀಗ ಗುಣಮುಖರಾಗಿದ್ದಾರೆ.
ಆರ್‌.ಆರ್.ನಗರ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ದಾಳಿ ವೇಳೆ ಹಲ್ಲೆ ಮಾಡಿದ್ರು ಎಂದ ಅಣ್ಣ: ಸೌಜನ್ಯದಿಂದ ನಡೆದುಕೊಂಡ್ರು ಎಂದು ಥ್ಯಾಂಕ್ಸ್​ ಹೇಳಿದ ತಮ್ಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − two =
Remember me
