ಬೆಂಗಳೂರು:ರಾಜ್ಯದ ಪ್ರಾಥಮಿಕ ಮತ್ತು ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 1246 ಸಾಮಾನ್ಯ ವೈದ್ಯರು ಹಾಗೂ 824 ತಜ್ಞ ವೈದ್ಯರನ್ನು ಒಂದು ತಿಂಗಳೊಳಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಸಚಿವ ಕೆ.ಸುಧಾಕರ್ ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 9,850 ಕಿರಿಯ ಆರೋಗ್ಯ ಸಹಾಯಕರ ಹುದ್ದೆಗಳು ಇದ್ದು, ಇದರಲ್ಲಿ 2727 ಹುದ್ದೆಗಳು ಖಾಲಿ ಇವೆ. ಅವುಗಳ ನೇಮಕಾತಿ ಈಗ ನಡೆಸಲಾಗುವುದು ಎಂದು ಸಚಿವರು ಹೇಳಿದರು. 2018ರಲ್ಲಿ 224 ಹುದ್ದೆಗಳಿಗೆ ವಿಶೇಷ ನೇಮಕಾತಿಯಡಿ ಭರ್ತಿ ಮಾಡಿಕೊಳ್ಳಲಾಗಿದೆ. ಈಗಾಗಲೇ 7123 ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಾಕಿ ಹುದ್ದೆಗಳ ನೇಮಕ ನಡೆಯಲಿದೆ ಎಂದರು.
ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಅವರು ಈ ಮಾಹಿತಿ ನೀಡಿದರು. ಖಾಲಿ ಇರುವ 1246 ಸಾಮಾನ್ಯ ವೈದ್ಯರು ಹಾಗೂ 824 ತಜ್ಞ ವೈದ್ಯರನ್ನು ನೇರ ನೇಮಕಾತಿಯನ್ನು ಶೀಘ್ರದಲ್ಲಿ ಮಾಡಿಕೊಳ್ಳಲಾಗುವುದು ಎಂದು ಸುಧಾಕರ್​ ಹೇಳಿದರು.
ಇನ್ನು ಆಂಬ್ಯುಲೆನ್ಸ್​ ಕುರಿತು ಮಾತನಾಡಿದ ಸಚಿವರು ಆಂಬ್ಯುಲೆನ್ಸ್​ ಖರೀದಿಗೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. 30ರಿಂದ 35 ಸಾವಿರ ಜನರಿಗೆ ಒಂದು ಆಂಬ್ಯುಲೆನ್ಸ್​ ನೀಡಲಾಗುವುದು. ಅಂಬ್ಯುಲೆನ್ಸ್​ಗಳಲ್ಲಿ ವಿವಿಧ ರೀತಿಯ ಇನ್ನೂ ಹೆಚ್ಚಿನ 12 ಹೆಚ್ಚುವರಿ ಸೇವೆಗಳನ್ನು ನೀಡಲಾಗುತ್ತದೆ. ಉತ್ಕೃಷ್ಟ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಉತ್ತಮವಾದ ಸೇವೆಯನ್ನು ನೀಡಲು ವೈದ್ಯರಿಗೆ ಸೂಚಿಸಲಾಗಿದೆ ಎಂದರು.
ತೇಜಸ್​ ಮೇಲೇರಿದ ತೇಜಸ್ವಿ: 15 ಸಾವಿರ ಅಡಿ ಎತ್ತರದಲ್ಲಿ ಅರ್ಧ ಗಂಟೆ ಹಾರಾಟ

ಆಧಾರ್​ ಕಾರ್ಡ್​ನಲ್ಲಿ ಕಾಣಿಸಿಕೊಂಡ್ತು ಫಿಷ್​ ಫ್ರೈ, ಮಟನ್, ಚಿಕನ್​,​ ಪಾಪಡ್​, ಐಸ್​​ಕ್ರೀಂ!

ಬಯಲಾಯ್ತು ಕರಾಳಮುಖ! ಪ್ರತಿಭಟನೆ ಹೆಸರಲ್ಲಿ ಭಾರತಕ್ಕೆ ಕಪ್ಪುಮಸಿ ಬಳಿಯೋದು ಹೇಗೆ ಎಂದು ಪಾಠ ಮಾಡಿದ ‘ಪರಿಸರ ಹೋರಾಟಗಾರ್ತಿ’…

ಒಂದೆಡೆ ಪತ್ನಿ, ಇನ್ನೊಂದೆಡೆ ಮದುವೆಯಾಗಲು ಪ್ರೇಯಸಿ ಒತ್ತಾಯ- ಮೈಸೂರಿನಲ್ಲಿ ಬಿತ್ತು ಎರಡು ಹೆಣ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:15 − 6 =
Remember me
