ಬೆಂಗಳೂರು:ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಕರ್ನಾಟಕದ ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯಲು ಬೆಂಗಳೂರಿಗೆ ಆಗಮಿಸಿದ್ದಾರೆ.
ಭಾರತದ ರಾಷ್ಟ್ರಪತಿ ಸ್ಥಾನಕ್ಕೆ ಇದೇ 18 ರಂದು ಚುನಾವಣೆ ನಡೆಯಲಿದ್ದು, ದ್ರೌಪದಿ ಮುರ್ಮು ಅವರು ಪ್ರಚಾರಾರ್ಥವಾಗಿ ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು ಮುರ್ಮು ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಭಿವೃದ್ಧಿ ಸಚಿ ಬಸವರಾಜ್ ಬೈರತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನಗರದ ಖಾಸಗಿ ನಡೆಯಲಿರುವ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಮಹಿಳಾ ಮೋರ್ಚಾ ಟೀಮ್ ನಿಂದ ಸಾವಿರಾರು ಕಾರ್ಯಕರ್ತರನ್ನು ಸೇರಿಸಲು ಆಲೋಚಿಸಲಾಗಿದೆ. ಸಂಜೆ ನಾಲ್ಕು ಗಂಟೆಗೆ ಬಿಜೆಪಿ ಶಾಸಕರು ಮತ್ತು ಸಂಸದರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಭಾಗಿಯಾಗಲಿರುವ ಮುರ್ಮು ಚುನಾವಣೆಯಲ್ಲಿ ತಮ್ಮ ಪರ ಮತ ಚಲಾಯಿಸಲು ಕೋರಲಿದ್ದಾರೆ ಎಂದು ತಿಳಿದುಬಂದಿದೆ.
ಪ್ರಥಮ ಪ್ರಜೆಯ ಸ್ಥಾನದತ್ತ ಭಾರತದ ನೈಜ ಪ್ರತಿಭೆ ದ್ರೌಪದಿ ಮುರ್ಮು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
