ಬೆಂಗಳೂರು:ಡ್ರಗ್ಸ್​ ಕೇಸ್​ ವಿವಾದ ಇದೀಗ ಭಾರಿ ಕೋಲಾಹಲವನ್ನೇ ಸೃಷ್ಟಿಸಿಬಿಟ್ಟಿದೆ. ನಟ-ನಟಿಯರು, ನಿರೂಪಕರು, ನಿರ್ಮಾಪಕ-ನಿರ್ದೇಶಕರು… ಹೀಗೆ ಸಿನಿ ರಂಗವನ್ನು ಡ್ರಗ್ಸ್​ ಮಾಫಿಯಾ ಸುತ್ತಿಕೊಳ್ಳುತ್ತಿದೆ.
ಈಗಾಗಲೇ ಈ ಪ್ರಕರಣದಲ್ಲಿ ಸಿಸಿಬಿ ವಶಕ್ಕೆ ಪಡೆದಿರುವವರು ಒಂದೊಂದೇ ಸತ್ಯವನ್ನು ಬಾಯಿ ಬಿಡುತ್ತಿದ್ದಂತೆಯೇ, ಅವರ ಪರಿಚಯಸ್ಥರು, ಅವರ ಜತೆ ಫೋಟೋ ತೆಗೆಸಿಕೊಂಡವರು, ಪಾರ್ಟಿ ಮಾಡಿದವರೆಲ್ಲರನ್ನೂ ಈ ಕೇಸ್​ ವಿಚಾರವಾಗಿ ವಿಚಾರಣೆಗೆ ಕರೆಯಲಾಗುತ್ತಿದೆ. ಇದೇ ರೀತಿ ಖ್ಯಾತ ನಿರೂಪಕಿ-ನಟಿ ಅನುಶ್ರೀ ಅವರಿಗೂ ಸಿಸಿಬಿ ನಿನ್ನೆ ನೋಟಿಸ್​ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿರುವ ಡ್ಯಾನ್ಸರ್ ಕಿಶೋರ್ ಶೆಟ್ಟಿ ಪಾರ್ಟಿಗಳಲ್ಲಿ ಅನುಶ್ರೀ ಕೂಡ ಭಾಗಿಯಾಗುತ್ತಾರೆ ಎಮದಿದ್ದ. ಅಲ್ಲದೇ ಕಿಶೋರ್ ಆಪ್ತ ತರುಣ್ ವಿಚಾರಣೆ ವೇಳೆ ಅನುಶ್ರೀಯವರ ಹೆಸರು ಹೇಳಿದ್ದಾನೆ ಎನ್ನಲಾಗಿದೆ. ಇವರ ಹೇಳಿಕೆಯನ್ನಾಧರಿಸಿ ಅನುಶ್ರೀ ಅವರಿಗೆ ನೋಟಿಸ್ ನೀಡಲಾಗಿದೆ.
ಈ ವಿಷಯವಾಗಿ ಮಾಧ್ಯಮಗಳಲ್ಲಿ ಭಾರಿ ಸುದ್ದಿಯಾಗುತ್ತಿತ್ತು, ಕೆಲವು ಮಾಧ್ಯಮಗಳಲ್ಲಿ ತಾನು ಅಪರಾಧಿಯಂತೆ ಬಿಂಬಿಸುತ್ತಿದ್ದಾರೆ ಎಂದು ಅನುಶ್ರೀ ತುಂಬಾ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಮಾಧ್ಯಮದವರಿಗೆ ಮನವಿ ಮಾಡಿಕೊಂಡು ಪತ್ರವನ್ನು ಹಾಕಿದ್ದಾರೆ ಅನುಶ್ರೀ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿಗೆ ಪ್ರಯಾಣ ಬೆಳೆಸಿರುವ ನಿರೂಪಕಿ, ಈ ನಡುವೆಯೇ ಮಾಧ್ಯಮದವರಿಗೆ ತನ್ನನ್ನು ಅಪರಾಧಿಯಂತೆ ಬಿಂಬಿಸಬೇಡಿ ಎಂದಿದ್ದಾರೆ.
ಅವರು ಮನವಿ ಮಾಡಿಕೊಂಡಿರುವುದು ಇಷ್ಟು:ಗುರುವಾರ ಸಂಜೆ ನನಗೆ ಮಂಗಳೂರಿನಲ್ಲಿ ಸಿಸಿಬಿ ಕಚೇರಿಯಿಂದ ವಿಚಾರಣೆಗೆ ಹಾಜರಾಗಲು ಒಂದು ನೋಟಿಸ್ ಜಾರಿ ಮಾಡಿದ್ದಾರೆ. ಹೀಗಾಗಿ ಇಂದು ಬೆಳಗ್ಗೆ 11 ಗಂಟೆಗೆ ನಾನು ಸ್ವತಃ ಮಂಗಳೂರಿಗೆ ತೆರಳಿ ಆ ವಿಚಾರಣೆಗೆ ಖುದ್ದಾಗಿ ಹಾಜರಾಗುತ್ತಿದ್ದೇನೆ.
ಇದು ಬರೀ ವಿಚಾರಣೆಯ ಸೂಚನೆಯಾಗಿದ್ದು, ಮಾಧ್ಯಮಗಳಲ್ಲಿ ನಾನು ನಟಿಸಿದ ಚಿತ್ರವೊಂದನ್ನು ಬಳಸಿ ನನ್ನನ್ನು ಅಪರಾಧಿ ಎಂಬಂತೆ ತೋರಿಸುವ ಪ್ರಯತ್ನಗಳು ನಡೆಯುತ್ತಿವೆ. ಮಾಧ್ಯಮ ಮಿತ್ರರಲ್ಲಿ ನನ್ನ ಕೋರಿಕೆ ಇಷ್ಟೆ, ಪ್ರಸ್ತುತ ಚರ್ಚೆಯಾಗುತ್ತಿರುವ ಪ್ರಕರಣದಲ್ಲಿ ನನ್ನ ಪಾತ್ರವೇನೂ ಇಲ್ಲ. ವಿಚಾರಣೆಗೆ ಕರೆದ ಕೂಡಲೇ ನಾನು ಅಪರಾಧಿ ಎಂದಲ್ಲ.
ಪೊಲೀಸರಿಗೆ ನನಗೆ ತಿಳಿದಿರುವ ಮಾಹಿತಿ ನೀಡಿ ಸಂಪೂರ್ಣ ಸಹಕಾರ ನೀಡುತ್ತೇನೆ. ಮಾಧ್ಯಮಗಳು ಈ ವಿಚಾರವನ್ನು ಕುರಿತಂತೆ ಯಾವುದೇ ನಿಲುವನ್ನು ತೆಗೆದುಕೊಳ್ಳದಿರಿ ಎನ್ನುವುದು ನನ್ನ ಕಳಕಳಿಯ ಮನವಿ. ಈ ವಿಚಾರ ನನ್ನ ಕುಟುಂಬ ವರ್ಗಕ್ಕೆ ಈಗಾಗಲೇ ನೋವು ತಂದಿದೆ. ಮಾಧ್ಯಮಗಳಲ್ಲಿ ಅತಿಯಾದ ಪ್ರಚಾರವು ಸತ್ಯವನ್ನು ದಾರಿ ತಪ್ಪಿಸುವುದಾಗಬಾರದು ಎನ್ನವುದು ನನ್ನ ಕಾಳಜಿ. ಆದ್ದರಿಂದ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಎಲ್ಲರೂ ಅಪರಾಧಿಗಳಲ್ಲ ಎನ್ನುವುದು ತಮಗೂ ತಿಳಿದಿದೆ. ಆದ್ದರಿಂದ ಈ ವಿಚಾರ ಕುರಿತಂತೆ ಸಮತೋಲನದ ವರದಿಗಳನ್ನು ನೀಡುವಂತೆ ಕೋರುತ್ತೇನೆ.
ಪೊಲೀಸರ ವಿಚಾರಣೆ ಆದ ನಂತರ ಮಾಧ್ಯಮಗಳಿಗೆ ನೀಡಬಹುದಾದ ಮಾಹಿತಿಯನ್ನು ನಾನು ನೀಡುತ್ತೇನೆ. ಈ ವಿಚಾರದಲ್ಲಿ ಪೊಲೀಸರಿಗೆ ಸಹಕರಿಸುತ್ತೇನೆ. ಮಾಧ್ಯಮ ಮಿತ್ರರು ಕೂಡ ಸತ್ಯಾಸತ್ಯತೆಗಳು ಹೊರಬರುವವರೆಗೆ ತಾಳ್ಮೆಯಿಂದ ಸಹಕರಿಸಿ ಎಂದಿದ್ದಾರೆ.
ಪಾಕಿಗಳಿಂದ ಅಪಹರಣಗೊಂಡು 73 ವರ್ಷದ ಬಳಿಕ ತವರನ್ನು ಕಂಡವಳ ಕಣ್ಣೀರ ಕಥೆಯಿದು…

ಗಂಡನ ಕೊಲೆ ಮಾಡಿ, ಮಂಚದ ಕೆಳಗೆ ಬಾಕ್ಸ್​ನಲ್ಲಿಟ್ಟು ಅಲ್ಲಿಯೇ ರಾತ್ರಿ ಕಳೆದಳು!

ಹಲ್ಲುಜ್ಜುವಾಗ ಪೇಸ್ಟ್​ ಅಲ್ಲ… ಟೂಥ್​ಬ್ರಷನ್ನೇ​ ನುಂಗಿದ! ಮುಂದೇನಾಯ್ತು ನೋಡಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen − 1 =
Remember me
