ಮಡಿಕೇರಿ:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದಿರುವ ಘಟನೆ ಇನ್ನೂ ಹಸಿಹಸಿಯಾಗಿರುವಾಗಲೇ ನಾಟಿಕೋಳಿ ವಿವಾದ ಶುರುವಾಗಿದೆ. ಮೊಟ್ಟೆ ಎಸೆದಿರುವಾತ ಕಾಂಗ್ರೆಸ್​ ಕಾರ್ಯಕರ್ತನೋ, ಬಿಜೆಪಿಯವನೋ ಎಂದು ಪರ-ವಿರೋಧಗಳ ಚರ್ಚೆ ಇನ್ನೂ ಚಾಲ್ತಿಯಲ್ಲಿ ಇರುವಾಗ ಸಿದ್ದರಾಮಯ್ಯನವರ ಮಾಂಸ ಸೇವನೆ ಈಗ ಭಾರಿ ಟೀಕೆಗೆ ಗುರಿಯಾಗಿದೆ.
ನಾಟಿಕೋಳಿ ಸಾರು ತಿಂದು ಕೊಡಗಿನಲ್ಲಿ ದೇವಾಲಯಕ್ಕೆ ಸಿದ್ದರಾಮಯ್ಯನವರು ಭೇಟಿ ನೀಡಿರುವುದಾಗಿ ಹೇಳಲಾಗುತ್ತಿದೆ. ಮಡಿಕೇರಿಯ ಅತಿಥಿಗೃಹದಲ್ಲಿ ಕಳೆದ 18ನೇ ತಾರೀಖು ಮಧ್ಯಾಹ್ನ ಊಟ ಮಾಡಿದ್ದ ಸಿದ್ದರಾಮಯ್ಯನವರು ನಂತರ ಅಲ್ಲಿಂದ ದೇವಾಲಯಕ್ಕೆ ಭೇಟಿ ನೀಡಿದ್ದರು. ಅತಿಥಿ ಗೃಹದಲ್ಲಿ ಸಿದ್ದರಾಮಯ್ಯಗೆ ಮಾಜಿ ಎಂಎಲ್‌ಸಿ ವೀಣಾ ಅಚ್ಚಯ್ಯ ಅವರಿಂದ ಊಟದ ವ್ಯವಸ್ಥೆ ಮಾಡಿಸಿದ್ದರು.
ಸಿದ್ದರಾಮಯ್ಯನವರಿಗೆ ಪ್ರೀತಿ ಎನ್ನುವ ಕಾರಣಕ್ಕೆ ನಾಟಿ ಕೋಳಿ ಸಾರು, ರಾಗಿ ಮುದ್ದೆ, ಕಣಿಲೆ, ಅನ್ನ ತರಕಾರಿ ಸಾಂಬಾರಿನ ವ್ಯವಸ್ಥೆ ಮಾಡಲಾಗಿತ್ತು. ಸಿದ್ದರಾಮಯ್ಯನವರು ತಮ್ಮ ನೆಚ್ಚಿನ ನಾಟಿ ಕೋಳಿ ಸಾರನ್ನು ತಿಂದಿದ್ದರು. ಊಟದ ಬಳಿಕ ಕೊಡ್ಲಿಪೇಟೆಯ ಬಸವೇಶ್ವರ ದೇವಸ್ಥಾನಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದರು ಎನ್ನಲಾಗುತ್ತಿದೆ.
ಇದಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಊಟ ಮಾಡಿದ ಫೋಟೋ, ದೇವಸ್ಥಾನಕ್ಕೆ ಹೋದ ವಿಡಿಯೋ ವೈರಲ್ ಆಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಹಿಂದೂ ಸಂಘಟನೆ ಹಾಗೂ ಬಿಜೆಪಿ ಕಾರ್ಯಕರ್ತರು ಈ ಬಗ್ಗೆ ಭಾರಿ ಆಕ್ರೋಶ ಹೊರಹಾಕುತ್ತಿದ್ದರೆ, ಕಾಂಗ್ರೆಸ್​ ಬೆಂಬಲಿಗರು ಮಾತ್ರ ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುತ್ತಿದ್ದಾರೆ. ಮಾಂಸಾಹಾರ ಸೇವನೆ ಮಾಡಿ ದೇವಾಲಯಕ್ಕೆ ಪ್ರವೇಶ ಮಾಡಬಾರದು ಎನ್ನುವ ಕಾನೂನು ಎಲ್ಲಿದೆ ಎನ್ನುವುದು ಅವರ ಪ್ರಶ್ನೆ.
ನಾಟಿಕೋಳಿ ಸಾರಿನ ಬಗ್ಗೆ ಭಾರಿ ಸುದ್ದಿಯಾಗುತ್ತಲೇ ಪ್ರತಿಕ್ರಿಯೆ ನೀಡಿರುವ ವೀಣಾ ಅಚ್ಚಯ್ಯ, ನಾನು ಸಿದ್ದರಾಮಯ್ಯನವರಿಗಾಗಿ ನಾಟಿಕೋಳಿನ ಸಾರು ಮಾಡಿಸಿದ್ದು ನಿಜ, ಅದು ಅವರಿಗೆ ತುಂಬಾ ಪ್ರೀತಿ ಎನ್ನುವ ಕಾರಣಕ್ಕೆ ಮಾಡಿಸಿದ್ದೆ. ಆದರೆ ಅವರು ಅದರ ಸೇವನೆ ಮಾಡಲಿಲ್ಲ ಎಂದಿದ್ದಾರೆ. ಆದರೆ ವೈರಲ್​ ಆಗಿರುವ ವಿಡಿಯೋ ಮಾತ್ರ ಬೇರೆ ಕಥೆಯನ್ನೇ ಹೇಳುತ್ತಿದೆ. ಸದ್ಯ ಇದರ ಬಗ್ಗೆ ಪರ-ವಿರೋಧದ ಚರ್ಚೆ ಶುರುವಾಗಿದೆ.
ಅಂದಹಾಗೆ. 2017ರಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ ಸಿದ್ದರಾಮಯ್ಯನವರು ಮಾಂಸಾಹಾರ ಸೇವನೆ ಮಾಡಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಇದರ ಬಗ್ಗೆ ಹಲವರು ಟೀಕೆ ಮಾಡಿದ್ದರು. ಆಗ ಖುದ್ದು ಸಿದ್ದರಾಮಯ್ಯನವರು ಹೌದು ನಾನು ಮೀನು ಮಾತ್ರವಲ್ಲ, ಚಿಕನ್​ ಕೂಡ ಸೇವನೆ ಮಾಡಿದ್ದೇನೆ, ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದರು. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಕರೆದಿದ್ದರಿಂದ ಅಲ್ಲಿಗೆ ಹೋಗಿದ್ದೆ. ಹೋಗುವಾಗ ಮೀನು, ಚಿಕನ್​ ತಿಂದಿದ್ದೆ ಎಂದಿದ್ದರು. ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ನಾನು ಗರ್ಭಗುಡಿಗೆ ಪ್ರವೇಶಿಸಿರಲಿಲ್ಲ ಎಂದಿದ್ದರು.(ದಿಗ್ವಿಜಯ ನ್ಯೂಸ್​)
VEDIO: ರಾಹುಲ್​ ಕಚೇರಿಯ ಗಾಂಧಿ ಫೋಟೋ ಧ್ವಂಸ; ವಿಡಿಯೋದಿಂದ ಬಯಲಾಯ್ತು ಭಯಾನಕ ಸತ್ಯ- ಕಾಂಗ್ರೆಸ್ಸಿಗರೇ ಅರೆಸ್ಟ್​!

ಆಪರೇಷನ್​ ತಮಿಳುನಾಡು: ರಾಜ್ಯಪಾಲರ ಹುದ್ದೆಗೆ ಸೂಪರ್​ಸ್ಟಾರ್​ ರಜನೀಕಾಂತ್​?

ಇಲ್ಲಿಯ ಬಸ್​ನಲ್ಲಿ ಹೋಗೋ ಪುರುಷರೇ ಎಚ್ಚರ ಎಚ್ಚರ: ಮಹಿಳೆಯರಿಂದ ಇನ್ಮುಂದೆ ನೀವಾಗ್ಬೋದು ಅರೆಸ್ಟ್​!

ಚಿರು ಸರ್ಜಾ ಸಾವಿನ ನಂತರ 2ನೇ ಮದುವೆ ಆಗ್ತಿದ್ದಾರಾ ನಟಿ ಮೇಘನಾ ರಾಜ್? ಸಂದರ್ಶನದಲ್ಲಿ ಅವರು ಹೇಳಿದ್ದೇನು ಕೇಳಿ…​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one − 1 =
Remember me
