ಬೆಂಗಳೂರು:ಬರುವ 29 ಮತ್ತು 30ರಂದು ಗೌರಿ-ಗಣೇಶ ಹಬ್ಬ ಇರುವ ಹಿನ್ನೆಲೆಯಲ್ಲಿ ತಮ್ಮ ತಮ್ಮ ಊರುಗಳಿಗೆ ಹೋಗುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್​ಆರ್​ಟಿಸಿ) ಬೆಂಗಳೂರಿನಿಂದ ವಿಶೇಷ ಹೆಚ್ಚುವರಿ ಬಸ್​ಗಳನ್ನು ಬಿಡುತ್ತಿದೆ. ಮಾತ್ರವಲ್ಲದೇ ಈ ಬಾರಿ ಟಿಕೆಟ್​ ದರದಲ್ಲಿ ವಿಶೇಷ ರಿಯಾಯಿತಿಯನ್ನೂ ನೀಡಿದೆ.
ಬೆಂಗಳೂರಿನಿಂದ ಬೇರೆ ಬೇರೆ ಊರುಗಳಿಗೆ ಮಾತ್ರವಲ್ಲದೇ ಹೊರ ರಾಜ್ಯಗಳಿಗೂ ವಿಶೇಷವಾಗಿ ಹೆಚ್ಚುವರಿ ಬಸ್​ಗಳನ್ನು ಬಿಡಲಾಗುತ್ತಿದೆ ಎಂದು ಕೆಎಸ್​ಆರ್​ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕುಂದಾಪುರ, ಮಂಗಳೂರು, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಚಿತ್ರದುರ್ಗ ಸೇರಿದಂತೆ ಇನ್ನಿತರ ಜಿಲ್ಲೆಗಳಿಗೆ ಹೊರ ರಾಜ್ಯಗಳಿಗೆ ವಿಶೇಷ ಬಸ್ ಸೇವೆ ಇರಲಿದೆ. 500ಕ್ಕೂ ಅಧಿಕ ಹೆಚ್ಚುವರಿ ಬಸ್​ಗಳು ಈ ಮಾರ್ಗಗಳಲ್ಲಿ ಚಲಿಸಲಿವೆ.
ಇದೇ ವೇಳೆ ವಿಶೇಷ ರಿಯಾಯಿತಿಯನ್ನೂ ಘೋಷಿಸಲಾಗಿದೆ. ಅದೇನೆಂದರೆ, ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ವಿರಾಜಪೇಟೆ, ಕುಶಾಲನಗರ ಹಾಗೂ ಶಾಂತಿನಗರ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಇರಲಿದೆ. 5ಕ್ಕೂ ಹೆಚ್ಚು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದ್ದಲ್ಲಿ ಶೇಕಡ 5ರಷ್ಟು ರಿಯಾಯಿತಿ ಹಾಗೂ ಹೋಗಿ ಬರುವ ಟಿಕೆಟ್ ಒಟ್ಟಿಗೆ ಬುಕ್ ಮಾಡಿದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. (ಏಜೆನ್ಸೀಸ್​)
ರಾಹುಲ್​ನಂಥ ನಾಯಕನಿಂದ ಪಕ್ಷಕ್ಕೆ ಅವನತಿಯೇ ಗತಿ ಎಂದು ಬೇಸರಿಸುತ್ತಲೇ ಕಾಂಗ್ರೆಸ್​ಗೆ ಮಾಜಿ ಸಂಸದ ಗುಡ್​ಬೈ

ಅವಳಿ ಕಟ್ಟಡ ನೆಲಸಮಗೊಳಿಸ್ತಿರೋ ಬ್ಲಾಸ್ಟರ್​ ಚೇತನ್​ರ ಕನಸಿಂದು ನನಸಾಗ್ತಿದೆ! ಅವರ ಮಾತಲ್ಲೇ ಕೇಳಿ…

ಭೀಕರ ಪ್ರವಾಹಕ್ಕೆ ಪಾಕ್​ ತತ್ತರ: ಬೀದಿಪಾಲಾದ್ರೂ ಬಿಡದ ಬುದ್ಧಿ- ಸಹಾಯಕ್ಕೆ ಬಂದ ಸೇನೆಯನ್ನೇ ಥಳಿಸಿದ ಪಾಕಿಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − nine =
Remember me
