ಮಂಡ್ಯ: ಧಾರವಾಡ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ.
ರೈಲು ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ರಾತ್ರಿ 12 ಗಂಟೆ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ರೈಲು ರಾತ್ರಿ 10.30 ರಲ್ಲಿ ಮೈಸೂರಿನಿಂದ ಹೊರಟಿತ್ತು. ಮಂದಗೆರೆ ಬಳಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಚಾಲಕ ರೈಲನ್ನು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಬೋಗಿಯಿಂದ ಪ್ರಯಾಣಿಕರು ಕೆಳಗಿಳಿದ ಹಿನ್ನೆಲೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆದರೆ ಇನ್ನೂ ರೈಲಿನಿಂದ ಕೆಳಗೆ ಇಳಿಯುವಾಗ ತಳ್ಳಾಟ ನೂಕಾಟ ನಡೆದಿದ್ದರಿಂದ ಕೆಲ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ತಕ್ಷಣವೇ ರೈಲ್ವೆ ಸಿಬ್ಬಂದಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ‌ ನಂದಿಸುವ ಕಾರ್ಯ ಮಾಡಿದ್ದಾರೆ. ಬೆಂಕಿ ನಂದಿಸಿದ ಬಳಿಕ ರೈಲು ಸಂಚಾರ ಆರಂಭಿಸಿದೆ. ಒಂದು ಗಂಟೆಗೂ‌ ಹೆಚ್ಚು ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.
ಮಗುವಿನ ಜತೆ ಬಾವಿಗೆ ಹಾರಿದರೂ ಬದುಕಿದ ಅಮ್ಮ- ಕಂದನ ಶವ ಕಂಡು ಪುನಃ ಆತ್ಮಹತ್ಯೆಗೆ ಯತ್ನ

ಪರೋಟ ತಿಂದ ಮರುದಿನವೇ ಬಾಲಕ ದುರಂತ ಸಾವು: ಮರಣೋತ್ತರ ವರದಿಯಲ್ಲಿತ್ತು ಸ್ಫೋಟಕ ಸಂಗತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
