ಬೆಂಗಳೂರು:ಕೊಲೆ ಸೇರಿದಂತೆ ಹಲವಾರು ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಅನೀಸ್‌ ಅಹಮ್ಮದ್‌ ಇಂದು ನಸುಕಿನಲ್ಲಿ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.
ಬೆಂಗಳೂರಿನ ಕೆ.ಜಿ ಹಳ್ಳಿ ಅರೆಬಿಕಾ ಕಾಲೇಜು ಬಳಿ ಈ ಘಟನೆ ಸಂಭವಿಸಿದೆ.
ಕೊಲೆ ಹಾಗೂ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅನೀಸ್‌ನನ್ನು ಬಂಧಿಸಲು ಪೊಲೀಸರು ತೆರಳಿದ್ದ ವೇಳೆ ಗುಂಡು ಹಾರಿಸಲಾಗಿದೆ. ಪೊಲೀಸರು ಬಂಧಿಸಲು ಬರುತ್ತಿದ್ದಂತೆಯೇ ಇದನ್ನು ಅರಿತ ಅನೀಸ್‌ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾನೆ.
ಅಲ್ಲಿಂದ ಪರಾರಿಯಾಗಲು ಪ್ರಯತ್ನಿಸುತ್ತಿದ್ದಂತೆಯೇ ಪೊಲೀಸರು ಗುಂಡು ಹಾರಿಸಿದ್ದಾರೆ. ಈ ಸಂದರ್ಭದಲ್ಲಿ ಆತನ ಕಾಲಿಗೆ ಕೆ.ಜಿ ಹಳ್ಳಿ ಠಾಣೆ ಇನ್ಸ್‌ಪೆಕ್ಟರ್ ಅಜಯ್ ಸಾರಥಿ ಗುಂಡು ಹಾರಿಸಿದ್ದಾರೆ. ಆತ ಬಿದ್ದಾಗ ಬಂಧಿಸಲಾಗಿದೆ.
ಇದನ್ನೂ ಓದಿ:ಬೈರುತ್​ನಲ್ಲಿ ಭೀಕರ ಸ್ಪೋಟ: 78 ಸಾವು, ಸಾವಿರಾರು ಜನರಿಗೆ ಗಾಯ
ಈತ ಮೂರು ವರ್ಷಗಳಿಂದ ಪೊಲೀಸರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಿದ್ದ. ಒಂದು ಕೊಲೆ ಮಾಡಿರುವ ಗಂಭೀರ ಆರೋಪ ಇವನ ಮೇಲಿದ್ದು, ಪೊಲೀಸರ ಕೈಗೆ ಮಾತ್ರ ಸಿಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲು ಪೊಲೀಸರು ತೆರಳಿದ್ದರು.
ತಮ್ಮ ಮೇಲೆ ಹಲ್ಲೆ ಮಾಡಿದ್ದ ಅನೀಸ್‌ ಓಡಿಹೋಗಲು ಪ್ರಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ಅವನ ಮೇಲೆ ಅನಿವಾರ್ಯವಾಗಿ ಗುಂಡು ಹಾರಿಸಬೇಕಾಯಿತು. ನಿಯಮದ ಪ್ರಕಾರ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸಂದರ್ಶನದಲ್ಲಿ ಗರ್ಲ್‌ಫ್ರೆಂಡೇ ಇಲ್ಲ ಎಂದಿದ್ದ: ಲೈವ್‌ ಷೋನಲ್ಲಿ ಅರೆಬೆತ್ತಲೆ ಹುಡುಗಿಯಿಂದ ಸಿಕ್ಕಿಬಿದ್ದ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one + 17 =
Remember me
