ಮಂಡ್ಯ:5 ರೂಪಾಯಿ ಡಾಕ್ಟರ್ ಎಂದೇ ಖ್ಯಾತರಾಗಿರುವ ಮಂಡ್ಯದ ಖ್ಯಾತ ವೈದ್ಯ ಡಾ.ಶಂಕರೇಗೌಡರಿಗೆ ಹೃದಯಾಘಾತವಾಗಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚರ್ಮ ರೋಗದ ತಜ್ಞರಾಗಿರುವ ಡಾ.ಶಂಕರೇಗೌಡ ಅವರು 5 ರೂಪಾಯಿ ಡಾಕ್ಟರ್ ಎಂದೇ ಪ್ರಖ್ಯಾತಗೊಂಡಿದ್ದಾರೆ.
ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರು ಸುಧಾರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಶ್ರೀಸಾಮಾನ್ಯರ ಸೇವೆಗಾಗಿ ತಮ್ಮ ಬದುಕನ್ನೇ ಮೀಸಲಿಟ್ಟಿರುವ ಇವರು ಶೀಘ್ರದಲ್ಲಿ ಗುಣಮುಖರಾಗಲೆಂದು ಎಲ್ಲರೂ ಹಾರೈಸುತ್ತಿದ್ದಾರೆ.
ಮಂಡ್ಯ ತಾಲೂಕಿನ ಶಿವಳ್ಳಿಯವರಾದ ಡಾ.ಶಂಕರೇಗೌಡ ಅವರು ತಮ್ಮ ಸರಳತೆಯಿಂದ ಜನರಿಗೆ ಹತ್ತಿರವಾಗಿದ್ದಾರೆ. ಮಂಡ್ಯದಲ್ಲಿ ದಲ್ತಾರಾ ಕ್ಲಿನಿಕ್ ಇಟ್ಟುಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇವರು ತಮ್ಮ ಸೇವೆಗೆ ರೋಗಿಗಳಿಂದ ಪಡೆಯುವುದು ಕೇವಲ 5 ರೂಪಾಯಿ ಮಾತ್ರ. ಡಾ.ಶಂಕರೇಗೌಡ ಅವರು ಕೇವಲ ವೈದ್ಯರಲ್ಲ, ಬದಲಾಗಿ ಉತ್ತಮ ರೈತ, ಉತ್ತಮ ರಾಜಕಾರಣಿ ಕೂಡ. ಮಂಡ್ಯ ಜಿ.ಪಂಗೆ ಈ ಹಿಂದೆ ಸದಸ್ಯರಾಗಿ ಜನರ ಸೇವೆ ಮಾಡಿದ್ದಾರೆ.
ಸಮಾಧಿ ಮಾಡುವಾಗ ಕಣ್ಣು ತೆರೆದ ನವಜಾತ ಶಿಶು: ಬೆಚ್ಚಿಬಿದ್ದ ಕುಟುಂಬಸ್ಥರು

ಕೊನೆಯ ಕ್ಷಣದಲ್ಲಿ ಟಿಕೆಟ್​ ಕೈತಪ್ಪಿದ ಬೆನ್ನಲ್ಲೇ ಟ್ವೀಟ್​ ಮಾಡಿದ ವಿಜಯೇಂದ್ರ ಹೇಳಿದ್ದೇನು?

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:8 + five =
Remember me
