ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಬಿರುಸುಗೊಳ್ಳಲಿದೆ.ಸೋಮವಾರ ಕೊಡಗಿನ ಗೋಣಿಕೊಪ್ಪದಲ್ಲಿ 34 ಮಿಮೀ, ಮಂಡ್ಯದ ಮಳವಳ್ಳಿಯಲ್ಲಿ 31 ಮಿಮೀ, ಕೆ.ಆರ್.ಪೇಟೆಯಲ್ಲಿ 26 ಮಿಮೀ ಹಾಗೂ ಬೆಂಗಳೂರು ನಗರದಲ್ಲಿ 21 ಮಿಮೀ ಮಳೆ ಸುರಿದಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ,ಮೈಸೂರು, ಚಿತ್ರದುರ್ಗ, ಬಳ್ಳಾರಿ ಹಾಗೂ ದಾವಣಗೆರೆಯಲ್ಲಿ ಮೇ 3ರಿಂದ ಮೇ 6ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
7 ಜಿಲ್ಲೆಗಳಲ್ಲಿ ತಾಪಮಾನ ಏರಿಕೆ:ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ದಕ್ಷಿಣ ಒಳನಾಡಿನ ಕೋಲಾರ ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ತುಸು ಇಳಿಕೆಯಾಗಿದೆ. ಆದರೆ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಉಷ್ಣಾಂಶ ಯಥಾಸ್ಥಿತಿ ಮುಂದುವರಿದಿದೆ. ಸೋಮವಾರ ಗರಿಷ್ಠ ತಾಪಮಾನದಲ್ಲಿ ಕಲಬುರಗಿಯಲ್ಲಿ 42.4, ಕೋಲಾರದ ಕೆಜಿಎ್ನಲ್ಲಿ 42.4, ರಾಯಚೂರಿನಲ್ಲಿ 42.0 ಯಾದಗಿರಿಯಲ್ಲಿ 41.8, ವಿಜಯಪುರದಲ್ಲಿ 40.1, ಬೀದರ್ 41.0 ಕೊಪ್ಪಳದಲ್ಲಿ 40.0, ಬಾಗಲಕೋಟೆಯಲ್ಲಿ 39.0, ಬಳ್ಳಾರಿಯಲ್ಲಿ 39.6 ಮತ್ತು ಬೆಂಗಳೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಹಾಗೂ ಕೊಡಗಿನಲ್ಲಿ 26.0 ಕಡಿಮೆ ಉಷ್ಣಾಂಶ ದಾಖಲಾಗಿದೆ.
https://www.vijayavani.net/s-property-matter-about-property-exchange-nd/
ಎಸ್​ಎಸ್​ಎಲ್​ಸಿ ಮುಗಿಸಿದವರಿಗೆ ಗುಡ್​ ನ್ಯೂಸ್​: ಅಂಚೆ ಇಲಾಖೆಯಲ್ಲಿದೆ 2410 ಡಾಕ್ ಸೇವಕ್ ಹುದ್ದೆಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 2 =
Remember me
