ಮೈಸೂರು:ಮೃತ ವ್ಯಕ್ತಿಯ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ ಅಧಿಕಾರಿಗಳು 1.80 ಲಕ್ಷ ರೂ. ದೋಖಾ ಮಾಡಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ಎನ್.ಬೇಗೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿದೆ. ಎಚ್‌.ಡಿ.ಕೋಟೆ ತಾಲೂಕಿನ ಎಂಡಿಸಿಸಿ ಬ್ಯಾಂಕ್‌ ಅಕೌಂಟ್‌ನಿಂದ ಹಣವನ್ನು ಡ್ರಾ ಮಾಡಿಕೊಂಡು ವಂಚನೆ ಮಾಡಿರುವ ಪ್ರಕರಣ ಇದಾಗಿದೆ.
ಕೃಷಿಕ ಚಿಕ್ಕಬೊಮ್ಮ ಸತ್ತು ನಾಲ್ಕೂವರೆ ತಿಂಗಳಾಗಿತ್ತು. ಆದರೆ ಅವರ ಹೆಸರಿನಲ್ಲಿ ಬ್ಯಾಂಕಿಗೆ ವಿತ್‌ಡ್ರಾ ಅರ್ಜಿ ಬಂದಿತ್ತು. ನಂತರ 1.80 ಲಕ್ಷ ರೂಪಾಯಿಗಳನ್ನು ವಿತ್‌ಡ್ರಾ ಮಾಡಲಾಗಿತ್ತು. ಪತಿ ಸತ್ತು ನಾಲ್ಕು ತಿಂಗಳ ಬಳಿಕ ಹಣ ವಿತ್‌ಡ್ರಾ ಆಗಿದ್ದನ್ನು ಕಂಡು ಅವರ ಪತ್ನಿ ಕಂಗಾಲಾಗಿ ಹೋಗಿದ್ದಾರೆ. ಇದು ಹೇಗೆ ಸಾಧ್ಯ ಎಂದು ಅವರು ದೂರು ದಾಖಲು ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ನಂತರ ದೂರು ದಾಖಲು ಮಾಡಿದಾಗ ಅಸಲಿಯತ್ತು ಬಹಿರಂಗಗೊಂಡಿದೆ. ಎಚ್.ಡಿ.ಕೋಟೆ ತಾಲೂಕಿನ ಎನ್.ಬೇಗೂರು ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಪ್ರೇಮ್ ಕುಮಾರ್ ಈ ರೀತಿಯ ವಂಚನೆ ಮಾಡಿದ್ದು ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ದೊಣ್ಣೆಮಾದನ ಹಾಡಿಯ ಬೆಟ್ಟ ಕುರುಬ ಸಮುದಾಯದ ಚಿಕ್ಕಬೊಮ್ಮ ಕುಟುಂಬಕ್ಕೆ ವಂಚನೆಗೆ ಸಂಬಂಧಿಸಿದಂತೆ ಇವರ ವಿರುದ್ಧ ಈಗ ತನಿಖೆ ಶುರುವಾಗಿದೆ. ಎಚ್‌.ಡಿ.ಕೋಟೆ ತಾಲೂಕಿನ ಎಂಡಿಸಿಸಿ ಬ್ಯಾಂಕ್‌ ಅಕೌಂಟ್‌ನಿಂದ ಈ ಹಣವನ್ನು ವಿತ್‌ಡ್ರಾ ಮಾಡಿಕೊಳ್ಳಲಾಗಿದೆ.
ಹೊಸಹಳ್ಳಿ ಸರ್ವೇ ನಂ. 48/157ರಲ್ಲಿ ಮೂರು ಎಕರೆ ಜಮೀನಿಗೆ ಸಂಬಂಧಿಸಿದಂತೆ ನಾಲ್ಕೂವರೆ ತಿಂಗಳ ಬಳಿಕ ಮೃತ ಆದಿವಾಸಿಯ ಹೆಸರಲ್ಲಿ ಹಣ ಡ್ರಾ ಮಾಡಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕಾಂಗ್ರೆಸ್‌ನಿಂದ ಮಹತ್ವದ ಸಭೆ: ಪ್ರಿಯಾಂಕಾ ಗಾಂಧಿ ರಾಜೀನಾಮೆ ನೀಡ್ತಿದ್ದಾರಾ? ಪಕ್ಷ ಏನು ಹೇಳಿದೆ ನೋಡಿ…

ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಲು ಎರಡು ಕೋಟಿ ರೂ. ಲಂಚ ಆರೋಪ: ಶಶಿಕಲಾಗೆ ಸಿಕ್ತು ಜಾಮೀನು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − nine =
Remember me
