ರಾಮನಗರ:ಜಮೀನು ಕೊಳ್ಳುವಾಗ ನೂರೆಂಟು ದಾಖಲೆಗಳನ್ನು ನೋಡಿ ಖರೀದಿ ಮಾಡಲಾಗುತ್ತದೆ. ಏಕೆಂದರೆ ಇಲ್ಲಿ ಮೋಸದಾಟವೇ ಹೆಚ್ಚು. ಆದರೆ ಎಲ್ಲವೂ ಅಸಲಿಯಾಗಿದ್ದರೂ ನೀವು ಬೃಹತ್​ ಜಾಲಕ್ಕೆ ಬೀಳಬಹುದು ಎನ್ನುವುದು ಗೊತ್ತೆ?
ಅಂಥದ್ದೊಂದು ಖತರ್ನಾಕ್​ ಗ್ಯಾಂಗ್​ ಈಗ ಪೊಲೀಸರ ಬಲೆಗೆ ಬಿದ್ದಿದೆ! ಡಿಜಿಟಲ್ ಸಹಿ ಬಿಟ್ಟರೆ ಉಳಿದೆಲ್ಲವನ್ನೂ ಅಸಲಿಯಾಗಿಯೇ ತೋರಿಸಿ ಮಾರಾಟ ಮಾಡುತ್ತಿರುವ ಭಯಾನಕ ಗ್ಯಾಂಗ್​ ಇದು. ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ಆರ್.ಟಿ.ಸಿ ಮಾಡಿಸಿ ಅಸಲಿ ದಾಖಲೆ ಎಂಬಂತೆ ಭೂಮಿ ಮಾರಾಟ ಮಾಡುತ್ತಿದ್ದಾರೆ ಈ ಖದೀಮರು!
ಸರ್ಕಾರಿ ಭೂಮಿಯನ್ನು ಬೇಕಾಬಿಟ್ಟೆ ಇದಾಗಲೇ ಮಾರಾಟ ಮಾಡಿದ್ದಾರೆ. ಸರ್ಕಾರಿ ಸರ್ವರ್​ನಲ್ಲಿರುವ ತಂತ್ರಾಂಶಗಳ ಲೋಪಗಳೇ ಇವರಿಗೆ ವರದಾನ. ಕಂಡವರ ಹೆಸರಿಗೆ ಭೂಮಿ ಪರಭಾರೆ ಮಾಡುತ್ತಿದ್ದ ಈ ಖದೀಮರು ಈಗ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ದಾಖಲೆ ಸೃಷ್ಟಿಸಿರುವುದು ಈಗ ಬೆಳಕಿಗೆ ಬಂದಿದೆ.
ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಮಾಡಲಾಗದ ಕೆಲಸ ಇವರು ಮಾಡಿ ಫಲಾನುಭವಿಗಳಿಗೆ ಆರ್​ಟಿಸಿ ಕೊಡುತ್ತಿದ್ದರು. ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ಭೂದಾಖಲೆಯನ್ನು ತಂತ್ರಾಂಶದಲ್ಲಿ ಅಪ್ಲೋಡ್ ಮಾಡುತ್ತಿದ್ದರು. ಇದಾಗಲೇ ಇವರು 7 ಆರ್.ಟಿ.ಸಿ ಸೃಷ್ಟಿಸಿ ಆರು ಮಂದಿಗೆ ಭೂಮಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದ್ದು, ಇನ್ನೆಷ್ಟು ಮಂದಿ ಇವರಿಂದ ಮೋಸ ಹೋಗಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರದ ತಾಲೂಕಿನ ಬನ್ನಿಕುಪ್ಪೆ, ತುಗಣಿ, ರಾಂಪುರಗಳಲ್ಲಿ ಆರು ಎಕರೆ ಮಾರಾಟ ಮಾಡಿರುವುದು ತಿಳಿದುಬಂದಿದೆ. ಈ ಮೂಲಕ ಸರ್ಕಾರಕ್ಕೆ ಸುಮಾರು 6 ಕೋಟಿಯಷ್ಟು ಹಣ ವಂಚನೆ ಮಾಡಿದ್ದಾರೆ. ರಾಜ್ಯಾದ್ಯಂತ ನೂರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಭೂಮಿ ವಂಚನೆ ಮಾಡಿರುವ ಶಂಕೆ ಇದ್ದು, ತನಿಖೆ ನಡೆಯುತ್ತಿದೆ.
ಈ ಖದೀಮರೆಲ್ಲರೂ ರಿಯಲ್ ಎಸ್ಟೆಟ್ ಏಜೆಂಟ್, ಸೈಬರ್ ಮಾಲೀಕ, ಬ್ರೋಕರ್ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಹಾರ್ಡ್​ವೇರ್​ ಎಂಜಿನಿಯರ್ ಆಗಿದ್ದು, ಸದ್ಯ ಓರ್ವ ಜಮೀನು ಖರೀದಿದಾರ ಸೇರಿದಂತೆ 7 ಮಂದಿ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಮತ್ತಷ್ಟು ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ. ಚಿಕ್ಕಮರೀಗೌಡ, ನರಸಿಂಹಮೂರ್ತಿ, ರಾಘವಮೂರ್ತಿ, ಅರುಣ್‌, ನಂದೀಶ್, ಶಿವರಾಜು ಬಂಧಿತ ಆರೋಪಿಗಳು. ರಾಮನಗರ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ(ದಿಗ್ವಿಜಯ ನ್ಯೂಸ್​)
ಬುರ್ಖಾ ತೆಗೆಯುತ್ತಿದ್ದಂತೆಯೇ ಮೂರ್ಛೆ ಹೋಗೋ ಬೆಂಗಳೂರಿನ ಚಿನ್ನದಂಗಡಿವರು! ಬ್ಲ್ಯಾಕ್​ ಮ್ಯಾಜಿಕ್​ ದೃಶ್ಯ ಸಿಸಿಟಿವಿಯಲ್ಲಿ ಸೆರೆ…
ದುಬಾರಿ ಗಿಫ್ಟ್​ ಆಸೆಗೆ ಮಹಾವಂಚಕನ ಸ್ನೇಹ? ಜಾಕ್ವೆಲಿನ್ ಜತೆ ಈ ನಾಲ್ಕು ಖ್ಯಾತ ನಟಿಯರಿಗೂ ಗ್ರಹಚಾರ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
