ಬೆಂಗಳೂರು:ಮಲೆನಾಡಿನ ಅಡಕೆ ಬೆಳೆಗಾರರಿಗೆ ಈಗ ಎಲೆಚುಕ್ಕೆ ರೋಗದ ಕಾಟ ಶುರುವಾಗಿದೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ರೈತರಿಗೆ ಉಚಿತ ಔಷಧಿ ಪೂರೈಕೆ ಹಾಗೂ ಸಲಕರಣೆ ಪಡೆಯಲು ಸಹಾಯಧನ ಮಾಡುವುದಾಗಿ ಘೋಷಿಸಿದೆ.
ಈ ಕುರಿತು ತೋಟಗಾರಿಕಾ ಸಚಿವ ಮುನಿರತ್ನ, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್ ಅಂಗಾರ ಅವರು ಜಂಟಿ ಪತ್ರಿಕಾ ಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಮಲೆನಾಡಿನ ಕೆಲವು ಭಾಗಗಳಲ್ಲಿನ ಅಡಕೆ ಬೆಳಿಗೆ ಎಲೆಚುಕ್ಕೆ ರೋಗ ಬಾಧಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ನೆರವಿಗೆ ಸರ್ಕಾರ ಧಾವಿಸಿರುವುದಾಗಿ ಸಚಿವರು ಹೇಳಿದರು. ಎಲೆ ಚುಕ್ಕೆ ರೋಗವನ್ನು ಹತೋಟಿಗೆ ತರುವ ಬಗ್ಗೆ, ರೈತರಿಗೆ ಉಚಿತವಾಗಿ ಔಷಧಿ ಹಾಗೂ ಸುಧಾರಿತ ಧೋಟಿಯನ್ನು ಒದಗಿಸುವ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಮುನಿರತ್ನ ತಿಳಿಸಿದರು.
ಎಲೆಚುಕ್ಕೆ ರೋಗದಿಂದ ಎಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ ಎಂಬ ಬಗ್ಗೆ ಸಮೀಕ್ಷೆ ನಡೆಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು. ಈ ಕುರಿತು ಇದಾಗಲೇ ಸಭೆ ನಡೆಸಿ ಚರ್ಚಿಸಲಾಗಿದೆ. ಅಡಕೆ ಬೆಳೆಗಾರರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಅವರಿಗೆ ಸೂಕ್ತ ಔಷಧಗಳ ಪೂರೈಕೆ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
2021, 2022ನೇ ಸಾಲಿನ ಕರ್ನಾಟಕ ಬಯಲಾಟ ಗೌರವ ಹಾಗೂ ವಾರ್ಷಿಕ ಪ್ರಶಸ್ತಿ ಪ್ರಕಟ- ವಿವರ ಇಲ್ಲಿದೆ…

ಮುಸ್ಲಿಂ ವ್ಯಕ್ತಿಯ ಮನೆ ಅಗೆದಾಗ ಹಿಂದೂ ದೇಗುಲದ ಘಂಟೆ, ಶಂಖ, ತ್ರಿಶೂಲಗಳು ಪತ್ತೆ! ಎಲ್ಲೆಡೆ ಕೋಲಾಹಲ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine + 15 =
Remember me
