ಬೆಂಗಳೂರು :ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ (ಗೋಹತ್ಯೆ ನಿಷೇಧ ಕಾಯ್ದೆ) ಮತ್ತು ಸಂರಕ್ಷಣಾ ಕಾಯ್ದೆಯು ಸೋಮವಾರದಿಂದ ರಾಜ್ಯದಲ್ಲಿ ಜಾರಿಯಾಗಲಿದೆ.
ಪಶುಸಂಗೋಪನಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಬಿ.ಎನ್ ಪ್ರವೀಣ್ ಆದೇಶ ಹೊರಡಿಸಿದ್ದು, ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಗೋಹತ್ಯೆ ನಿಷೇಧದ ಹಿನ್ನೆಲೆಯಲ್ಲಿ ಗೋವುಗಳ ಸಂರಕ್ಷಣೆಗೆ ಬೇಕಾಗುವ ಗೋಶಾಲೆ ಹಾಗೂ ಇನ್ನಿತರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ಹಂತ ಹಂತವಾಗಿ ಗೋಶಾಲೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಕ್ರಮ ಗೋವುಗಳ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಆ ಜಿಲ್ಲೆ ಅಥವಾ ತಾಲೂಕಿನ ವ್ಯಾಪ್ತಿಯ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲು ಸಾರ್ವಜನಿಕರಿಗೆ ಮನವಿ ಮಾಡುತ್ತೇನೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ಅವರು ಮನವಿ ಮಾಡಿಕೊಂಡಿದ್ದಾರೆ.
ಹಾಗಿದ್ದರೆ ಈ ನಿಯಮದಲ್ಲಿ ಏನೇನಿವೆ ಎಂದು ಇಲ್ಲಿದೆ ಮಾಹಿತಿ:* ರೈತರು ಕೃಷಿ ಉದ್ದೇಶಕ್ಕೆ ಸ್ಥಳೀಯವಾಗಿ 15 ಕಿಲೋಮೀಟರ್‌ ದೂರದವರೆಗೆ ಪರವಾನಗಿ ಇಲ್ಲದೆ ಎರಡು ಹಸು ಮತ್ತು ಎರಡು ಕರುಗಳನ್ನು ಮಾತ್ರ ಕೊಂಡೊಯ್ಯಬಹುದು. ರಾತ್ರಿ ವೇಳೆ ಗೋವುಗಳ ಸಾಗಣೆ ಸಂಪೂರ್ಣ ನಿಷೇಧ.
* ರಾತ್ರಿ 8ರಿಂದ ಬೆಳಿಗ್ಗೆ 6ರವರೆಗೆ ಗೋವುಗಳ ಸಾಗಣೆಗೆ ಅವಕಾಶವಿಲ್ಲ. ಬೇಸಿಗೆಯ ಕಾಲದಲ್ಲಿ ಮಾರ್ಚ್‌ನಿಂದ ಮೇ ತಿಂಗಳವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರ ಅವಧಿಯಲ್ಲೂ ಗೋವುಗಳ ಸಾಗಣೆಗೆ ನಿಷೇಧ.
* ಕೃಷಿ ಅಥವಾ ಪಶುಸಂಗೋಪನೆಯ ಉದ್ದೇಶಕ್ಕೆ ಹಸು, ಕರು, ಎತ್ತು, ಎಮ್ಮೆ, ಕೋಣಗಳನ್ನು ಸಾಗಿಸುವಾಗಲೂ ಸಾಗಣೆಯ ಪರವಾನಗಿ ಹೊಂದಿರಬೇಕಾದುದು ಕಡ್ಡಾಯ. ಅದರೊಂದಿಗೆ ಮಾಲೀಕತ್ವದ ದಾಖಲೆ ಮತ್ತು ಪಶುವೈದ್ಯಕೀಯ ಪ್ರಥಮ ಚಿಕಿತ್ಸಾ ಪೆಟ್ಟಿಗೆಯನ್ನೂ ಹೊಂದಿರಬೇಕು.
* ವಾಹನದಲ್ಲಿರುವ ಗೋವುಗಳ ಸಂಖ್ಯೆ, ಕಳುಹಿಸಿದವರು ಮತ್ತು ಪಡೆಯುವವರ ಹೆಸರು, ವಿಳಾಸ, ದೂರವಾಣಿ ಸಂಖ್ಯೆಯನ್ನು ದೊಡ್ಡ ಅಕ್ಷರಗಳಲ್ಲಿ ವಾಹನದ ಮೇಲೆ ಬರೆಯುವುದು ಕಡ್ಡಾಯ.
* ನುವಾರುಗಳ ಮಾಲೀಕರು ಮಾಲೀಕತ್ವದ ದಾಖಲೆಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸಿ ಸಾಗಣೆ ಪರವಾನಗಿ ಪಡೆಯುವುದು ಕಡ್ಡಾಯ. ಪರವಾನಗಿಯ ಹೊರತಾಗಿ ಗೋಸಾಗಣೆಗೆ ವಾಹನಗಳ ಮಾಲೀಕರು ಸಮ್ಮತಿ ಸೂಚಿಸುವಂತಿಲ್ಲ.
* ಜಾನುವಾರುಗಳನ್ನು ಎಂಜಿನ್‌ ಕಡೆ ಮುಖ ಮಾಡಿಯೇ ಕಟ್ಟಿರಬೇಕು. ಮೇವು ಮತ್ತು ನೀರು ಪೂರೈಸಿದ ಬಳಿಕವೇ ವಾಹನ ಹತ್ತಿಸಬೇಕು. ಆರು ತಿಂಗಳಿಗಿಂತಲೂ ಹೆಚ್ಚಿನ ಅವಧಿಯ ಗಬ್ಬದ ಹಸು ಅಥವಾ ಎಮ್ಮೆಗಳನ್ನು ಸಾಗಿಸುವಂತಿಲ್ಲ ಎಂಬ ನಿರ್ಬಂಧಗಳನ್ನು ವಿಧಿಸಲಾಗಿದೆ.
* 25 ಕಿ.ಮೀ. ವೇಗಮಿತಿ: ಗೋವುಗಳನ್ನು ಸಾಗಿಸುವ ವಾಹನವನ್ನು ಪ್ರತಿ ಗಂಟೆಗೆ 25 ಕಿ.ಮೀ.ಗಿಂತ ಹೆಚ್ಚು ವೇಗದಲ್ಲಿ ಓಡಿಸುವಂತಿಲ್ಲ.
* ಸಾಗಣೆಯ ಸಮಯದಲ್ಲಿ ಗೋವುಗಳ ಸಾವು ಸಂಭವಿಸಿದರೆ ಮರಣೋತ್ತರ ಪರೀಕ್ಷೆ ನಡೆಸಿ, ವರದಿ ಪಡೆದ ಬಳಿಕವೇ ಮೃತದೇಹವನ್ನು ಸಾಗಿಸಬಹುದು.
* ವಾಹನದೊಳಗೆ ಗೋವುಗಳು ಪ್ರತ್ಯೇಕವಾಗಿ ಇರುವುದಕ್ಕೆ ಪೂರಕವಾಗಿ ವಿಭಜನಾ ವ್ಯವಸ್ಥೆ ಮಾಡಿರಬೇಕು.100 ಕೆ.ಜಿ.ಗಿಂತ ಕಡಿಮೆ ತೂಕ ಹೊಂದಿದ್ದಲ್ಲಿ 1.5 ಚದರ ಮೀಟರ್‌ ಮತ್ತು 100 ಕೆ.ಜಿ.ಗಿಂತ ಹೆಚ್ಚು ತೂಕವಿದ್ದಲ್ಲಿ 2 ಚದರ ಮೀಟರ್‌ ಸ್ಥಳಾವಕಾಶ ಕಲ್ಪಿಸಬೇಕು.
* ನಿಯಮಗಳ ಉಲ್ಲಂಘನೆಯಾದಲ್ಲಿ ಗೋವುಗಳ ಮಾಲೀಕರು ಅಥವಾ ಅವರ ಪ್ರತಿನಿಧಿ, ವಾಹನ ಮಾಲೀಕರು, ಜತೆಗಿರುವ ಸಿಬ್ಬಂದಿ ಕೂಡ ಹೊಣೆಗಾರರಾಗುತ್ತಾರೆ.
* ಅಕ್ರಮ ಗೋವುಗಳ ಸಾಗಾಟ ಮತ್ತು ವಧೆ ಆಗುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆ, ಆ ಜಿಲ್ಲೆ ಅಥವಾ ತಾಲೂಕಿನ ವ್ಯಾಪ್ತಿಯ ಪಶುಪಾಲನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು. ಸಾರ್ವಜನಿಕರು ಉದ್ವೇಗದಲ್ಲಿ ಕಾನೂನನ್ನು ಯಾವುದೇ ಕಾರಣಕ್ಕೂ ಕೈಗೆತ್ತಿಕೊಳ್ಳಬಾರದು.
* ಸಾರ್ವಜನಿಕರು ಗಮನಕ್ಕೆ ತಂದರೂ ಒಂದು ವೇಳೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ವಿಫಲವಾದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು.
ನಿತ್ಯಭವಿಷ್ಯ| ಈ ರಾಶಿಯವರಿಗೆ ಇಂದು ಸೋಲಿಸಲೆಂದೇ ಜನ ಸುತ್ತುವರಿಯಲಿದ್ದಾರೆ..

ಗ್ಯಾಸ್​ ಸಿಲಿಂಡರ್​ ಮನೆಗೆ ತಂದುಕೊಟ್ಟದ್ದಕ್ಕೆ ಹಣ ಕೇಳ್ತಾ ಇದ್ದಾರಾ? ಹಾಗಿದ್ದರೆ ಈ ಮಾಹಿತಿ ಓದಿ…

ಜೋ ಬೈಡೆನ್​ ಸಂಪುಟದಲ್ಲಿ ಭಾರತೀಯರ ದಾಖಲೆ- 20 ಮಂದಿ ಸೇರ್ಪಡೆ; 13 ಮಹಿಳೆಯರು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − four =
Remember me
