ಬೆಂಗಳೂರು:ರಾಜ್ಯದ 5,728 ಗ್ರಾಮ ಪಂಚಾಯಿತಿಗಳ 82,616 ಸ್ಥಾನಗಳಿಗೆ ಫಲಿತಾಂಶದ ಸಂಪೂರ್ಣ ಚಿತ್ರಣ ಇನ್ನೇನು ಕೆಲವೇ ಗಂಟೆಗಳಲ್ಲಿ ಸಿಗಲಿದೆ.
ಮೂರು ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಸದ್ಯ ಅರ್ಧಕ್ಕಿಂತ ಹೆಚ್ಚು ಫಲಿತಾಂಶಗಳು ಪ್ರಕಟಗೊಂಡಿವೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ರಾತ್ರಿಯ ವೇಳೆಗೆ ಸಂಪೂರ್ಣ ಚಿತ್ರಣ ಸಿಗಲಿದೆ.
Of 82616 wards in GP elections on Karnataka ,@BJP4Karnatakais ahead with victory in 5344 wards ( 48% ) as of now . Great going …. Congratulations@BSYBJP@nalinkateel
— B L Santhosh (@blsanthosh)December 30, 2020

ಇದುವರೆಗೆ ಸಿಕ್ಕಿರುವ ಫಲಿತಾಂಶದ ಪೈಕಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಎರಡನೆಯ ಸ್ಥಾನದಲ್ಲಿ ಕಾಂಗ್ರೆಸ್ ಹಾಗೂ ಮೂರನೇ ಸ್ಥಾನದಲ್ಲಿ ಜೆಡಿಎಸ್​ ಇರುವುದಾಗಿ ತಿಳಿದುಬಂದಿದೆ.
ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿರುವ ಕುರಿತು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಟ್ವೀಟ್​ ಮಾಡಿದ್ದಾರೆ. 82616 ವಾರ್ಡ್​ಗಳ ಪೈಕಿ ಬಿಜೆಪಿ ಬೆಂಬಲಿತರು  ಭರ್ಜರಿ ಮುನ್ನಡೆ ಸಾಧಿಸಿದ್ದು, ಇದಾಗಲೇ 5344 ವಾರ್ಡ್​ಗಳಲ್ಲಿ  ಜಯಭೇರಿ ಬಾರಿಸಿರುವುದಾಗಿ ತಿಳಿಸಿದ್ದಾರೆ. ಇವರಿಗೆಲ್ಲಾ ತಮ್ಮ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ಕರೊನಾ ವೈರಸ್​ ಹಿನ್ನೆಲೆಯಲ್ಲಿ ಬ್ಯಾಲೆಟ್​ ಪೇಪರ್​ ಮೂಲಕ ಮತದಾನ ಆಗಿರುವ ಕಾರಣ, ಸ್ವಲ್ಪ ನಿಧಾನವಾಗಿ ಮತ ಎಣಿಕೆ ನಡೆಯುತ್ತಿದ್ದು, ರಾತ್ರಿಯ ವೇಳೆಗೆ ಸಂಪೂರ್ಣ ಚಿತ್ರಣ ಸಿಗಲಿದೆ.
ಹುಡುಗನಿಗೆ ಮದುವೆ ವಯಸ್ಸು ಆಗದಿದ್ದರೂ ವಯಸ್ಕರಿಬ್ಬರು ಒಟ್ಟಿಗೇ ಇರಬಹುದು ಎಂದ ಹೈಕೋರ್ಟ್​

ಮೂವರು ಪಾಕ್​ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಮತ ಎಣಿಸುತ್ತಲೇ ಕುಸಿದುಬಿದ್ದು ಮೈಸೂರಿನ ಚುನಾವಣಾಧಿಕಾರಿ ಸಾವು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 + 9 =
Remember me
