ಹಾಸನ:ಬೆಂಗಳೂರಿನಿಂದ ಹಾಸನಕ್ಕೆ ಬಂದಿದ್ದ ಇಬ್ಬರು ಯುವಕರು, ಆಕಸ್ಮಿಕವಾಗಿ ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಹಾಸನ ನಗರದ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ.
ಇವರು ಕೂಲಿ ಕೆಲಸಕ್ಕೆಂದು ಹಾಸನಕ್ಕೆ ಬಂದಿದ್ದರು ಎನ್ನಲಾಗಿದೆ.
ಬೆಂಗಳೂರು ಮೂಲದ ನವೀನ್ ಹಾಗೂ ಮತ್ತೊಬ್ಬ ಯುವಕ ಗೂಡ್ಸ್ ರೈಲಿಗೆ ಸಿಲುಕಿ ಸಾವನ್ನಪ್ಪಿದ ದುರ್ದೈವಿಗಳು. ಇನ್ನು ಮೃತರು ಕೂಲಿ ಕೆಲಸಕ್ಕೆಂದು ಬೆಂಗಳೂರಿನಿಂದ ಹಾಸನಕ್ಕೆ ರೈಲಿನಲ್ಲಿ ಬಂದಿದ್ದಾರೆ. ರೈಲಿನಿಂದ ಇಳಿದ ಯುವಕರು ರೈಲ್ವೆ ಟ್ರ್ಯಾಕ್ ಮೇಲೆ ನಿಂತಿದ್ದಾರೆ.
ಇದನ್ನೂ ಓದಿ:ಲವ್ ​ಮಾಕ್​ಟೇಲ್​ ತೆಲುಗು ರಿಮೇಕ್​ಗೆ ಶೀರ್ಷಿಕೆ ಫಿಕ್ಸ್; ಮುಹೂರ್ತಕ್ಕೆ ದಿನಾಂಕವೂ ನಿಗದಿ
ಈ ವೇಳೆ ಗೂಡ್ಸ್ ರೈಲು ಬರುತ್ತಿರುವುದನ್ನು ಅರಿಯದ ಯುವಕರಿಗೆ, ಗೂಡ್ಸ್ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮದಿಂದಾಗಿ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನವೀನ್ ಎಂಬಾತನ ಆಧಾರ್ ಕಾರ್ಡ್ ಸಿಕ್ಕಿದ್ದು ವಿವರ ಪತ್ತೆಯಾಗಿದೆ.
ಸ್ಥಳಕ್ಕೆ ಹಾಸನ ನಗರದ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
ರಾಹುಲ್‌ಗೆ ಸಾಥ್‌ ನೀಡಲು ರಮ್ಯಾ ಎಂಟ್ರಿ: ಮಾಧ್ಯಮಕ್ಕೆ ಮಾಹಿತಿ ನೀಡಿದವರ ಮೇಲೆ ಕಿಡಿಕಿಡಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − fifteen =
Remember me
