ಹಾವೇರಿ:ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಕಾರ್ಣಿಕೋತ್ಸವ ರಾಜ್ಯದಲ್ಲಿಯೇ ವಿಶೇಷ ಸ್ಥಾನವನ್ನು ಪಡೆದಿದೆ. ದೇವರಗುಡ್ಡದ ಕಾರ್ಣಿಕ ನುಡಿಯುವ ಗೊರವಪ್ಪ ನಾಗಪ್ಪ ಉರ್ಮಿ 20 ಅಡಿ ಬಿಲ್ಲನ್ನೇರಿ ಪ್ರತಿವರ್ಷವೂ ಕಾರ್ಣಿಕ (ಭವಿಷ್ಯ) ನುಡಿಯುತ್ತಾರೆ. ಅದು ಸತ್ಯವಾಗುತ್ತದೆ ಎಂದೇ ಜನರು ನಂಬಿದ್ದಾರೆ.
ದಸರಾ ಹಬ್ಬದ ಸಮಯದಲ್ಲಿ ಈ ಮಾಲತೇಶ ದೇವರ ಕಾರ್ಣಿಕೋತ್ಸವ ನಡೆಯುತ್ತದೆ. ಈ ವರ್ಷ ಅವರು ನುಡಿದ ಕಾರ್ಣಿಕ ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ ಎನ್ನುವುದು. ಇಷ್ಟು ಹೇಳುತ್ತಲೇ ಬಿಲ್ಲಿನಿಂದ ಧುಮುಕಿದ ಗೊರವಪ್ಪನನ್ನ ಭಕ್ತರು ಕೆಳಗೆ ಬೀಳದಂತೆ ಹಿಡಿದರು.
ವರ್ಷದ ಭವಿಷ್ಯವಾಣಿ ಎಂದೇ ನಂಬಲಾಗುವ ಈ ಕಾರ್ಣಿಕದ ಅರ್ಥವನ್ನು ದೇವಸ್ಥಾನದ ಪ್ರಧಾನ ಅರ್ಚಕ ಮಾಲತೇಶ ಭಟ್ ವಿಶ್ಲೇಷಿಸಿದರು. ‘ಸಣ್ಣಸಣ್ಣ ರೈತರಿಗೂ ಪ್ರಯೋಜನವಾಗಲಿದೆ. ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ದೊರೆಯಲಿದೆ. ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ’ ಎಂಬುದೇ ಇದರ ಅರ್ಥ ಎಂದು ಅವರು ಹೇಳಿದರು (ದಿಗ್ವಿಜಯ ನ್ಯೂಸ್​)
ಇಲ್ಲಿದೆ ನೋಡಿ ವಿಡಿಯೋ:
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಕಾರ್ಣಿಕೋತ್ಸವದಲ್ಲಿ ಕಾರ್ಣಿಕ ನುಡಿದ ಗೊರವಪ್ಪ ನಾಗಪ್ಪ ಉರ್ಮಿ.pic.twitter.com/ZALZll5x11— Vijayavani (@VVani4U)October 4, 2022
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಕಾರ್ಣಿಕೋತ್ಸವದಲ್ಲಿ ಕಾರ್ಣಿಕ ನುಡಿದ ಗೊರವಪ್ಪ ನಾಗಪ್ಪ ಉರ್ಮಿ.pic.twitter.com/ZALZll5x11
ಜನವರಿ ವೇಳೆಗೆ ಕರೊನಾದ ಮತ್ತೊಂದು ರೂಪ ಬರಲಿದೆ; ಕಾದು ನೋಡಿ ಎಂದು ಭವಿಷ್ಯ ನುಡಿದ ಕೋಡಿಮಠದ ಶ್ರೀ
26 ಕೋಟಿ ರೂ. ನೋಟುಗಳ ಮೇಲೆ ‘ರಿಸರ್ವ್​ ಬ್ಯಾಂಕ್’​ ಬದಲು ‘ರಿವರ್ಸ್​ ಬ್ಯಾಂಕ್’​! ಕಕ್ಕಾಬಿಕ್ಕಿಯಾದ ಪೊಲೀಸರು
Sign in to your account
Please enter an answer in digits:twelve − six =
Remember me
