ಹಾವೇರಿ:ಯುವತಿಯೊಬ್ಬಳ ಪ್ರೀತಿಗೆ ಬಿದ್ದು ಯುವಕನೊಬ್ಬ ಪ್ರಾಣ ಕಳಕೊಂಡಿರುವ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೆಡಿಗೊಂಡ ಗ್ರಾಮದಲ್ಲಿ ಘಟನೆ ನಡೆದಿದ್ದು, 29 ವರ್ಷದ ಜಯಪ್ಪ ಬ್ಯಾಡಗಿ ಮೃತ ಯುವಕ. ಈತನ ಶವ ಬಾವಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ, ಆತ್ಮಹತ್ಯೆಯೋ ಎಂಬ ಪ್ರಶ್ನೆ ಎದುರಾಗಿದೆ.
ಕಳೆದ ಐದು ದಿನಗಳ ಹಿಂದೆ ಪ್ರೀತಿಗೆ ಸಂಬಂಧಿಸಿದಂತೆ ಎರಡೂ ಕುಟುಂಬಗಳ ನಡುವೆ ಜಗಳವಾಗಿತ್ತು. ಜಗಳ ವಿಪರೀತಕ್ಕೆ ಹೋಗಿ ಜಯಪ್ಪನನ್ನು ಹುಡುಗಿಯ ಸಂಬಂಧಿಕರು ಮನಸ್ಸಿಗೆ ಬಂದಂತೆ ಥಳಿಸಿದ್ದರು.
ಈ ಘಟನೆ ಬೆನ್ನಲ್ಲೆ ರಾತ್ರೋರಾತ್ರಿ ಯುವಕನ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮೆಲ್ನೋಟಕ್ಕೆ ಬಾವಿಗೆ ಹಾರಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ ಇದನ್ನು ಯುವಕನ ಕುಟುಂಬಸ್ಥರು ಅಲ್ಲಗಳೆದಿದ್ದಾರೆ. ನಮ್ಮ ಮಗನನ್ನು ಹುಡುಗಿಯ ಕಡೆಯವರು ಹೊಡೆದು ಬಾವಿಗೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಅವರೇ ಮಗನ ಕೊಲೆ ಮಾಡಿದ್ದಾರೆಂದು ಪಾಲಕರು ಹೇಳಿದ್ದಾರೆ.
ಸ್ಥಳಕ್ಕೆ ಪೋಲಿಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾಗಿನಲೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್‌)
VIDEO: ಉ.ಪ್ರದೇಶದಲ್ಲಿ ರೋಡ್‌ಷೋ ನಿಲ್ಲಿಸಿ ಮುಗುಳು ನಕ್ಕ ಪ್ರಿಯಾಂಕಾ ಬಿಜೆಪಿ ಕಾರ್ಯಕರ್ತರಿಗೆ ನೀಡಿದರು ಸರ್‌ಪ್ರೈಸ್‌!

ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಅಮಾನತುಗೊಂಡಿದ್ದ ಇಬ್ರಾಹಿಂ ಆಪ್ತನಿಗೆ ಮತ್ತೊಮ್ಮೆ ಉಚ್ಚಾಟನೆಯ ಬಿಸಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 5 =
Remember me
