ಬೆಂಗಳೂರು: ಉಡುಪಿಯ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ (ಶಿರವಸ್ತ್ರ) ಧರಿಸುವುದನ್ನು ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿರುವ ಎರಡು ಪ್ರತ್ಯೇಕ ಅರ್ಜಿಗಳನ್ನು ಫೆ.8ರಂದು ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.
ಕಾಲೇಜಿನ ವಿದ್ಯಾರ್ಥಿನಿಯರಾದ ರೇಷ್ಮಾ ಫಾರೂಕ್ ತಾಯಿ ರಹ್ಮತ್ ಫಾರೂಕ್, ಆಯೇಷಾ ಹಾಜಿರಾ ಅಲ್ಮಾಸ್ ತಾಯಿ ಸಾದಿಯಾ ಬಾನು ಸೇರಿ ಐವರು ವಿದ್ಯಾರ್ಥಿನಿಯರ ಪಾಲಕರು ಸಲ್ಲಿಸಿರುವ ತಕರಾರು ಅರ್ಜಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠದ ಮುಂದೆ ಗುರುವಾರ ವಿಚಾರಣೆಗೆ ನಿಗದಿಯಾಗಿತ್ತು.
ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಿದ್ದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ, ಇಂದಷ್ಟೇ ಅರ್ಜಿಯ ಪ್ರತಿ ನಮ್ಮ ಕೈಸೇರಿದೆ. ಈ ಕುರಿತು ಸರ್ಕಾರದಿಂದ ಮಾಹಿತಿ ಪಡೆದು ವಾದ ಮಂಡಿಸಲಾಗುತ್ತದೆ. ಅದಕ್ಕಾಗಿ ಕೊಂಚ ಕಾಲಾವಕಾಶ ನೀಡಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಅದನ್ನು ಪರಿಗಣಿಸಿದ ಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ, ವಿಚಾರಣೆ ಮುಂದೂಡಿತು.
ಅರ್ಜಿಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಶಿಕ್ಷಣ ಇಲಾಖೆ ಕಾರ್ಯದರ್ಶಿ, ಪದವಿಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕರು, ಉಡುಪಿ ಜಿಲ್ಲಾಧಿಕಾರಿ, ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರು, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಯಶ್‌ಪಾಲ್ ಸುವರ್ಣ ಮತ್ತಿತರರನ್ನು ಪ್ರತಿವಾದಿಯಾಗಿಸಲಾಗಿದೆ.
ಮಧ್ಯಾಹ್ನ ಮತ್ತೊಂದು ಅರ್ಜಿ:ಹಿಜಾಬ್ ಧಾರಣೆ ವಿವಾದಕ್ಕೆ ಸಂಬಂಧಿಸಿದಂತೆಯೇ ಕಾಲೇಜಿನ ವಿದ್ಯಾರ್ಥಿನಿ ರೇಷ್ಮಾ ಹಾಗೂ ಮುಬಾರಕ್ ಎಂಬುವರು ಸಲ್ಲಿಸಿರುವ ಮತ್ತೊಂದು ಅರ್ಜಿ ಮಧ್ಯಾಹ್ನ ವಿಚಾರಣೆಗೆ ಬಂದಿತ್ತು. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಗೆ ಸೇರಿಸುತ್ತಿಲ್ಲ. ಇದರಿಂದ, ಅವರ ಕಲಿಕೆಗೆ ತೊಂದರೆ ಆಗುತ್ತಿದ್ದು, ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಇದೇ ವಿಚಾರಕ್ಕೆ ಸಂಬಂಧಿಸಿದ ಮತ್ತೊಂದು ಅರ್ಜಿಯಲ್ಲಿ ಅಡ್ವೊಕೇಟ್ ಜನರಲ್ ವಾದ ಮಂಡಿಸುವುದಾಗಿ ತಿಳಿಸಿದ್ದಾರೆ. ಆದ್ದರಿಂದ, ಎರಡೂ ಅರ್ಜಿಗಳನ್ನು ಒಟ್ಟಾಗಿ ಆಲಿಸಲಾಗುವುದು ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಫೆ.8ಕ್ಕೆ ಮುಂದೂಡಿತು.
ಮನವಿ ಏನು?ಹಿಜಾಬ್ ಧಾರಣೆ ನಿರ್ಬಂಧಿಸುವುದು ಸಂವಿಧಾನದ ಪರಿಚ್ಚೇದ 14 ಮತ್ತು 25ರ ಅನ್ವಯ ಸಂವಿಧಾನದತ್ತ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಧಾರ್ಮಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡಲು ಸರ್ಕಾರಕ್ಕೆ ಅಧಿಕಾರವಿಲ್ಲ. ಕಾಲೇಜು ಹಾಗೆ ಮಾಡುತ್ತಿರುವುದು ಸಂವಿಧಾನಿಕ ಅವಕಾಶಗಳ ನಿರಾಕರಣೆಯಾಗಿದೆ. ಹಿಜಾಬ್ ಧರಿಸುವ ವಿದ್ಯಾರ್ಥಿನಿಯರನ್ನು ಕಾಲೇಜಿಗೆ ಬರುವುದನ್ನು ನಿರ್ಬಂಧಿಸಿ ಪ್ರಾಂಶುಪಾಲರು ಹೊರಡಿಸಿರುವ ಆದೇಶ ಅಸಾಂವಿಧಾನಿಕ ಎಂದು ಘೋಷಿಸಿ ಅದನ್ನು ರದ್ದುಪಡಿಸಬೇಕು. ಪ್ರಾಂಶುಪಾಲರ ವಿರುದ್ಧ ತನಿಖೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಉಡುಪಿ ಶಾಸಕ ರಘುಪತಿ ಭಟ್ ಮತ್ತು ಯಶ್ಪಾಲ್ ಆನಂದ್ ಸುರಾನ ಅವರು ಕಾನೂನಿನ ಯಾವ ನಿಯಮದಡಿ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಆಡಳಿತದಲ್ಲಿ ಮಧ್ಯಪ್ರವೇಶಿಸಿ, ತಮ್ಮ ರಾಜಕೀಯ ಅಜೆಂಡಾ ಹರಡಲು ಯತ್ನಿಸುತ್ತಿದ್ದಾರೆ ಎಂಬುದನ್ನು ವಿವರಿಸಲು ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ರೆಡಿಯಾಗಿ- ಇಲ್ಲಿದೆ ನೋಡಿ 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − eighteen =
Remember me
