ಬೆಂಗಳೂರು:ಮಂಗಳೂರು ಸರಣಿ ಕೊಲೆಗಳಿಗೆ ಸಂಬಂಧಿಸಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಡುತ್ತಿರುವ ತಪ್ಪು ಹೆಜ್ಜೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಎಚ್​ಡಿಕೆ ಅವರು; ಬಸವರಾಜ ಬೊಮ್ಮಾಯಿ ಅವರು ಇಡೀ ಕರ್ನಾಟಕದ ಮುಖ್ಯಮಂತ್ರಿ. ಕೇವಲ ಬಿಜೆಪಿಗಷ್ಟೇ ಅಲ್ಲ. ನಿನ್ನೆಯ ದಿನ ಅವರು ಮಸೂದ್ ಮತ್ತು ಪ್ರವೀಣ್ ನಿಟ್ಟಾರು ಹತ್ಯೆಯಾದ ಬೆಳ್ಳಾರೆ ಗ್ರಾಮಕ್ಕೆ ಭೇಟಿ ನೀಡಿದಾಗ ಸಂವಿಧಾನದತ್ತವಾಗಿ ಸ್ವೀಕರಿಸಿದ ಪ್ರಮಾಣವಚನದ ಪಾವಿತ್ರ್ಯತೆಗೆ ಚ್ಯುತಿ ತಂದಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜಧರ್ಮ ಪಾಲಿಸಿ ಎಂದು ಹಿಂದೊಮ್ಮೆ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರು ಹೇಳಿದ್ದರು. ರಾಜಧರ್ಮ ಪಾಲಿಸುವುದಿರಲಿ, ಸ್ವಧರ್ಮವೇ ಹೇಳಿದ ʼಸರ್ವೇ ಜನೋ ಸುಖಿನೋ ಭವಂತುʼ ಎನ್ನುವ ತತ್ತ್ವವನ್ನೂ ಪಾಲಿಸುತ್ತಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಂದು ಕಿಡಿಕಾರಿದ್ದಾರೆ.
ಕೊಲೆಗೆ ಕೊಲೆಯೇ ಉತ್ತರವಲ್ಲ. ಪ್ರತೀಕಾರಕ್ಕೆ ಪ್ರತೀಕಾರ ಪ್ರತ್ಯುತ್ತರವಲ್ಲ. ಮುಖ್ಯಮಂತ್ರಿ ನಡೆ ಹಿಂಸೆಯನ್ನು ಪ್ರಚೋದಿಸುವಂತಿದೆ. ಕೊಲೆಯಾದ ಇಬ್ಬರೂ ಯುವಕರ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಕೊಲೆಗೆಡುಕರಿಗೆ ಕಠಿಣ ಸಂದೇಶ ರವಾನಿಸಬೇಕಿತ್ತು. ಹಾಗೆ ಮಾಡಲಿಲ್ಲ ಎಂದು ಕಿಡಿ ಕಾರಿದ್ದಾರೆ.
ರಕ್ತದಲ್ಲಿ ಜಾತಿ-ಧರ್ಮಗಳ ಗುಂಪುಗಳಿವೆಯಾ? ಅಷ್ಟು ಸರಳ ವಿಷಯ ಮುಖ್ಯಮಂತ್ರಿಗೇ ಗೊತ್ತಿಲ್ಲದಿದ್ದರೆ ಹೇಗೆ? ಅವರು ಇದ್ದಾಗಲೇ ಮಂಗಳೂರಿನಲ್ಲಿ ಇನ್ನೊಂದು ಕೊಲೆ ನಡೆಯಿತು ಎಂದರೆ ಆಡಳಿತ ವೈಫಲ್ಯಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾ? ಎಂದು ಪ್ರಶ್ನೆ ಮಾಡಿದ್ದಾರೆ.
ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಈಗ ʼಬುಲ್ಡೋಜರ್ʼ ಜಪ ಮಾಡುತ್ತಿದ್ದಾರೆ. ʼಯೋಗಿ ಅದಿತ್ಯನಾಥ್ ಮಾದರಿʼ ಎನ್ನುತ್ತಿದ್ದಾರೆ. ಉತ್ತರ ಪ್ರದೇಶ ಎನ್ನುವುದು ಕರ್ನಾಟಕಕ್ಕೆ ಮಾತ್ರವಲ್ಲ, ಯಾರಿಗೂ ಮಾದರಿ ಅಲ್ಲ. ಸಹಜ ನ್ಯಾಯ, ಸಂವಿಧಾನಕ್ಕೆ ವಿರುದ್ಧದ ಉತ್ತರಪ್ರದೇಶದ ಆಡಳಿತವನ್ನು ಮಾದರಿ ಅನುಕರಣೆ ಎನ್ನುವುದು ಹೊಣೆಗೇಡಿತನದ ಪರಮಾವಧಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಂವಿಧಾನದ ಮೇಲೆ ಗೌರವ ಇಲ್ಲದವರು ʼಬುಲ್ಡೋಜರ್ʼ ಬಗ್ಗೆ ಮಾತನಾಡುತ್ತಾರೆ. ದಕ್ಷತೆ ಇಲ್ಲದವರು ಅಕ್ಕಪಕ್ಕದ ಮಾದರಿಗಳನ್ನು ಹುಡುಕುತ್ತಾರೆ. ಜನತಾ ಪರಿವಾರ ಆಗಿದ್ದವರು ಈಗ ಸಂಘ ಪರಿವಾರಿಯಾಗಿ ರೂಪಾಂತರಗೊಂಡು ಉತ್ತರ ಪ್ರದೇಶದ ಮಾದರಿ ಹೆಸರಿನಲ್ಲಿ ರಾಜ್ಯಕ್ಕೆ ʼಹೊಸ ಮಾರಿʼತರಲು ಹೊರಟಿದ್ದಾರೆ. ಇದು ಬೇಕಿಲ್ಲ ಎಂದು ಕುಮಾರಸ್ವಾಮಿ ಅವರ ವಿರೋಧ ವ್ಯಕ್ತಪಡಿಸಿದ್ದಾರೆ.
ಎಂ.ಎನ್.ರಾಯ್ ಅವರ ಅನುಯಾಯಿ, ಜನತಾ ಪರಿವಾರದ ರಾಯಿಸ್ಟ್ ಎಂದೇ ಖ್ಯಾತರಾಗಿದ್ದ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಈಗ ಸಂವಿಧಾನ ವಿರೋಧಿಯಾದ ಬುಲ್ಡೋಜರ್ ಮಾದರಿ ಮಾತನಾಡುತ್ತಿರುವುದು ನನಗೆ ಅತೀವ ಆಘಾತ ಉಂಟು ಮಾಡಿದೆ ಎಂದು ಹೇಳಿದ್ದಾರೆ.
FACT CHECK: ಸ್ಮೃತಿ ಇರಾನಿ ಪುತ್ರಿಯ ಎಂಗೇಜ್​ಮೆಂಟ್​- ಕಾಂಗ್ರೆಸ್​ ನಾಯಕರಿಗೆ ಮತ್ತೊಮ್ಮೆ ಮುಖಭಂಗ!

ಉತ್ತರ ಕರ್ನಾಟಕದ ಯುವಕರ ಕನಸು ಕೊನೆಗೂ ನನಸು: ಆ. 1ರಿಂದ ಹುಬ್ಬಳ್ಳಿಯಲ್ಲಿ ಇನ್ಫೋಸಿಸ್ ಕಾರ್ಯಾರಂಭ

ಸಚಿವರ ಆಪ್ತೆಯ ಮನೆಯಲ್ಲಿ ರಾಶಿ ರಾಶಿ ಲೈಂಗಿಕ ಆಟಿಕೆಗಳು! ಇ.ಡಿಗೆ ಸಿಕ್ಕ ಬೆಳ್ಳಿಯ ಬಟ್ಟಲು ಹೇಳುತಿದೆ ಬೇರೊಂದು ಕಥೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + twenty =
Remember me
