ಮಂಗಳೂರು:ಇತ್ತೀಚಿಗೆ ಬರ್ಬರವಾಗಿ ಹತ್ಯೆಯಾಗಿರುವ ಬಿಜೆಪಿಯ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು, ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರದ ಚೆಕ್ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪ್ರವೀಣ್ ಕುಟುಂಬಕ್ಕೆ ಅವರು ಸಾಂತ್ವನ ಹೇಳಿದ್ದಾರೆ. ನಂತರ ಮಾಧ್ಯಮದವರ ಜತೆ ಮಾತನಾಡಿದ ಅವರು, ಪ್ರವೀಣ್​ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇನೆ. ಕುಟುಂಬ ಸಂಪೂರ್ಣ ಕಷ್ಟದಲ್ಲಿ ಇರೋದು ಮಾತುಕತೆ ನಂತರ ನನಗೆ ತಿಳಿದಿದೆ ಎಂದರು.
ಸಾವಿಗೆ ಕಾರಣಕರ್ತರಾದವರಿಗೆ ಕಠಿಣ ಶಿಕ್ಷೆ ಆಗಬೇಕು. ಕುಟುಂಬದ ಅಭಿಪ್ರಾಯ ಕೂಡ ಇದೇ ಆಗಿದೆ. ಅವರು ತಮ್ಮ ನೋವನ್ನು ನನ್ನೊಂದಿಗೆ ಹಂಚಿಕೊಂಡಿದ್ದಾರೆ. ಕಾಟಾಚಾರದ ತನಿಖೆ ಆಗಬಾರದು. ವಿಧವೆ ತಂಗಿಯನ್ನು ಸಾಕುವ ಜವಾಬ್ದಾರಿ ಇದೆ ಎಂದರು.
ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಲು ಆಗದೆ ತನಿಖಾ ಅಧಿಕಾರ ಹಸ್ತಾಂತರ ಮಾಡಿದೆ, ರಾಜ್ಯ ಬಿಜೆಪಿ ಸರ್ಕಾರದ ಬೇಜವಾಬ್ದಾರಿ ತೀರ್ಮಾನ ಇದು ಎಂದು ಇದೇ ವೇಳೆ ಎಚ್​ಡಿಕೆ ಆಕ್ರೋಶ ವ್ಯಕ್ತಪಡಿಸಿದರು. ನಮ್ಮ ಅಧಿಕಾರಿಗಳು ಬಹಳ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಎನ್.ಐ.ಎ ಗೆ ವಹಿಸಿದ ಪ್ರಕರಣಗಳ ರಿಸಲ್ಟ್ ಏನಾಗಿದೆ ಎಂದು ಅವರು ಪ್ರಶ್ನಿಸಿದರು(ದಿಗ್ವಿಜಯ ನ್ಯೂಸ್​)
ಚಿಕನ್ ಅಂಗಡಿ ತೆರೆದಿದ್ದೇ ಪ್ರಾಣಕ್ಕೆ ಮುಳುವು? ಪ್ರವೀಣ್​ಗೆ ಮೊದಲೇ ಸಿಕ್ಕಿತ್ತಾ ಸಾವಿನ ಸುಳಿವು? ಸಹೋದರ ನೀಡಿದರು ಸ್ಫೋಟಕ ಹೇಳಿಕೆ

VIDEO: ಬಿಜೆಪಿ ಮುಖಂಡ ಪ್ರವೀಣ್​ ಹತ್ಯೆಯ ಪ್ರಮುಖ ಆರೋಪಿ ಷಫೀಕ್​ ಪತ್ನಿ ಹೇಳಿದ್ದೇನು ಕೇಳಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 18 =
Remember me
