ಬೆಂಗಳೂರು:ಪದೇ ಪದೆ ಎಸಿಬಿ ದಾಳಿ ನಡೆಯುತ್ತಿದೆ. ಕೋಟಿ ಕೋಟಿ ಹಣ, ಚಿನ್ನಾಭರಣ, ಆಸ್ತಿ ವಶಕ್ಕೆ ಪಡೆಯಲಾಗುತ್ತಿದೆ. ಆದರೆ ಎಷ್ಟು ಜನಕ್ಕೆ ಶಿಕ್ಷೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದರು.
ರಾಜ್ಯದಲ್ಲಿ ಇಂದು ಬೆಳಗ್ಗೆ ನಡೆದಿರುವ ಎಸಿಬಿ ದಾಳಿಯ ಬಗ್ಗೆ ವಿಧಾನಸೌಧದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಅವರು. ಎಸಿಬಿಯಿಂದ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ದಾಳಿ ಪ್ರಕರಣಗಳು ನೋಡುತ್ತಿದ್ದೇನೆ. ಎಷ್ಟು ಪ್ರಕರಣದಲ್ಲಿ ಶಿಕ್ಷೆಯಾಗಿದೆ? ಎಷ್ಟು ಪ್ರಕರಣದಲ್ಲಿ ಆಸ್ತಿ ಮುಟ್ಟುಗೋಲು ಆಗಿದೆ? ಕೇವಲ ಎಸಿಬಿ ದಾಳಿ ನಡೆಸಿದರೆ ಉಪಯೋಗ ಇಲ್ಲ. ಏನು ಕ್ರಮ ಆಗಿದೆ ಅನ್ನೋದು ಯಾರಿಗೂ ಮಾಹಿತಿ ಇಲ್ಲ. ಕೇವಲ ಕಣ್ಣೊರೆಸುವ ತಂತ್ರವಾಗಿ ಎಸಿಬಿ ದಾಳಿ ನಡೆಯುತ್ತಿದೆ ಎಂದು ಅವರು ಹೇಳಿದರು.
ಎಸಿಬಿ ದಾಳಿ ತೋರ್ಪಡಿಕೆಗೆ ನಡೆಯುತ್ತಿದೆ. ಇದರಿಂದ  ಯಾವುದೇ ಪರಿಣಾಮ ಆಗುತ್ತಿಲ್ಲ. ಭ್ರಷ್ಟರಿಗೆ ಶಿಕ್ಷೆ ಆದರೆ ಜನರಿಗೆ ಇಂಥ ದಾಳಿಗಳ ಮೇಲೆ ನಂಬಿಕೆ ಬರುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಕಾಮಗಾರಿಯ ಹಿನ್ನೆಲೆಯಲ್ಲಿ 240ಕ್ಕೂ ಅಧಿಕ ರೈಲುಗಳ ಸಂಚಾರ ರದ್ದು: ಇಲ್ಲಿದೆ ಸಂಪೂರ್ಣ ವಿವರ…

ಪಂಜಾಬ್‌ನ ನೂತನ ಸಿಎಂ ಮಾನ್‌ ಸೇರಿದಂತೆ 11 ಮಂದಿ ವಿರುದ್ಧ ಕ್ರಿಮಿನಲ್‌ ಕೇಸ್‌! ಸ್ವಯಂ ಘೋಷಣೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + nineteen =
Remember me
