ಬೆಂಗಳೂರು:ಅತಿವೃಷ್ಟಿಯಿಂದ ಬೆಂಗಳೂರು, ಮೈಸೂರು ಹೆದ್ದಾರಿಯ ಕೆಲವು ಭಾಗಗಳಲ್ಲಿ ನೀರು ನಿಂತಿದೆ. ಇದನ್ನು ಗಮನಿಸಿ ಪರ್ಯಾಯ ಮಾರ್ಗ ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಅದರಂತೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ನಿನ್ನೆ ಅತಿವೃಷ್ಟಿಯಾಗಿರುವ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಹಲವಾರು ಸೂಚನೆಗಳನ್ನು ನೀಡಲಾಗಿದೆ. ಬೆಂಗಳೂರು- ಮೈಸೂರಿನ ಆಯುಕ್ತರು, ಮಂಡ್ಯ ಹಾಗೂ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಲು ಹೇಳಿದ್ದೇನೆ ಎಂದರು.
ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರದೊಂದಿಗೆ ಸಭೆಇಂದು ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರದೊಂದಿಗೆ ಸಭೆ ನಡೆಸಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇನೆ. ಕೆಲವು ಕಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಅಷ್ಟಕ್ಕೇ ಬಿಟ್ಟು ನೀರು ನಿಲ್ಲುವ ಸಮಸ್ಯೆ ಉಂಟಾಗಿದೆ. ಇದಕ್ಕೆ ಚರಂಡಿ ನಿರ್ಮಿಸುವ ಅವಶ್ಯಕತೆ ಇದೆ. ಈ ಕೆಲಸ ಕೂಡಲೇ ಪ್ರಾರಂಭಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೆ, ಜಿಲ್ಲಾಧಿಕಾರಿಗಳೂ ರಾಷ್ಟ್ರೀಯ ಹೆದ್ದಾರಿಯ ಇಂಜಿನಿಯರ್​ಗಳು ಬರುವವರೆಗೆ ಕಾಯಬಾರದೆಂದು ಸೂಚಿಸಲಾಗಿದೆ. ನೀರು ಹೊರ ಹಾಕಲು ಎಲ್ಲಾ ಕ್ರಮಗಳನ್ನು ನಮ್ಮ ಇಂಜಿನಿಯರ್ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಬೆಳೆ ಪರಿಹಾರಕ್ಕೆ ಸೂಚನೆ
ಮನೆ ಹಾಗೂ ಬೆಳೆ ಹಾನಿಯ ವರದಿ ನೀಡುವಂತೆ ಹಾಗೂ ಹಾನಿಯಾಗಿರುವ ಮನೆಗಳಿಗೆ 24 ಗಂಟೆಗಳೂಳಗೆ ಪರಿಹಾರ ದೊರಕಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಮೊದಲನೇ ಕಂತಿನ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. ಯಾದಗಿರಿ, ರಾಯಚೂರು, ಬೆಳಗಾವಿ, ವಿಜಯಪುರ , ಮೈಸೂರು ಜಿಲ್ಲೆಗಳಿಗೆ ಈ ಸೂಚನೆಗಳನ್ನು ನೀಡಲಾಗಿದೆ. ಕೆರೆ ಕಟ್ಟೆಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ಸೂಚನೆ ನೀಡಲಾಗಿದೆ. ಕಳೆದ 6 ತಿಂಗಳಿಂದ ಸತತವಾಗಿ ಮಳೆ ಬರುತ್ತಿರುವುದರಿಂದ ರಾಜ್ಯದ ಎಲ್ಲಾ ಕೆರೆ ಕಟ್ಟೆಗಳು ತುಂಬಿವೆ. ಮಳೆ ಬಂದರೆ ಕೆರೆ ಕಟ್ಟೆಗಳು ಒಡೆಯುವ ಭೀತಿ ಇದೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮ ವಹಿಸಲು ಸೂಚಿಸಲಾಗಿದೆ. ಕೆರೆಗಳ ಬಳಿ ಇರುವ ನಿರುಪಯುಕ್ತ ವಸ್ತುಗಳನ್ನು ವಿಲೇವಾರಿ ಮಾಡಬೇಕು ಎಂದು ಸೂಚಿಸಲಾಗಿದೆ . ಕಾಳಜಿ ಕೇಂದ್ರಗಳಲ್ಲಿ ಇರುವವರಿಗೆ ಆಹಾರ ಬಟ್ಟೆ ವ್ಯವಸ್ಥೆ ಪೂರೈಸಬೇಕೆಂದು ತಿಳಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಬಳಿ 900 ಕೋಟಿ ರೂ.ಗಳು ಲಭ್ಯ
ಕಳೆದ ಜೂನ್ ಜುಲೈ ನಲ್ಲಿ ಆಗಿರುವ ಬೆಳೆ ನಾಶಕ್ಕೆ ಬರುವ ವಾರದೊಳಗೆ ಪರಿಹಾರ ವಿತರಣೆ ಪ್ರಾರಂಭವಾಗುತ್ತದೆ. ಆಗಸ್ಟ್ ಮೊದಲ ವಾರ ಹಾಗೂ ಈಗ ಆಗಿರುವ ಮಳೆಯ ಹಾನಿ ಬಗ್ಗೆ ಸಮೀಕ್ಷೆಯಾದ ಕೂಡಲೇ ಅವುಗಳಿಗೆ ಪರಿಹಾರ ನೀಡಲಾಗುವುದು. ಎಲ್ಲಾ ಜಿಲ್ಲೆಗಳಲ್ಲಿ ಒಟ್ಟು 900 ಕೋಟಿ ರೂ.ಗಳು ಲಭ್ಯವಿದೆ. ಸೇತುವೆ, ರಸ್ತೆ ಮುಂತಾದ ಮೂಲಸೌಕರ್ಯ ಹಾನಿಗೆ ಕೂಡಲೇ ದುರಸ್ತಿ ಮಾಡುವುದು ಹಾಗೂ ವಿದ್ಯುತ್ ಕಂಬಗಳು ಬಿದ್ದಿರುವೆಡೆಗಳಲ್ಲಿ ಸಂಪರ್ಕ ಒದಗಿಸಲು ಎಲ್ಲಾ ಎಸ್ಕಾಂ ಗಳಿಗೆ ಸೂಚನೆ ನೀಡಲು ಡಿಸಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಮುಂದಿನ 2 ತಿಂಗಳಲ್ಲಿ ರಾಜ್ಯದ ಆರು ಕಡೆಗಳಲ್ಲಿ ಬಿಜೆಪಿ ರ‍್ಯಾಲಿ: ಸಿಎಂ ಬೊಮ್ಮಾಯಿ ಮಾಹಿತಿ

ನಿಗೂಢ ಯೋಗಿಯ ಜತೆ ಸಂಪರ್ಕ ಬೆಳೆಸಿ ವಿವಾದದಲ್ಲಿ ಸಿಲುಕಿರೋ ಷೇರುಪೇಟೆಯ ಮಾಜಿ ಸಾಮ್ರಾಜ್ಞಿ ಚಿತ್ರಾಗೆ ಸಿಗಲಿಲ್ಲ ಜಾಮೀನು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − nine =
Remember me
