ಬೆಂಗಳೂರು:ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಎಲ್ಲರ ಗಮನ ಸೆಳೆದದ್ದು ಹೇಮಲತಾ ನಾಯಕ್​ ಅವರು.
ಕೊಪ್ಪಳದವರಾಗಿರುವ ಹೇಮಲತಾ ರಾಜ್ಯ ಬಿಜೆಪಿ ಮಹಿಳಾ ಘಟಕದ ಕಾರ್ಯದರ್ಶಿಯಾಗಿಯೂ ಹುದ್ದೆಯಲ್ಲಿದ್ದಾರೆ. ಪರಿಶಿಷ್ಟ ಪಂಗಡಕ್ಕ ಸೇರಿದ ಅವರಿಗೆ ಬಿಜೆಪಿ ಈ ಬಾರಿ ಅವಕಾಶ ನೀಡಿ ನೀಡಿದೆ. ಆದರೆ ತಮ್ಮ ಹೆಸರು ಘೋಷಣೆಯಾಗುತ್ತದೆ ಎಂದು ತಿಳಿದೇ ಇರದ ಹೇಮಲತಾ ಅವರು ಈ ಸಂದರ್ಭದಲ್ಲಿ ತುಮಕೂರಿನಲ್ಲಿದ್ದರು.
ಹೆಸರು ಘೋಷಣೆಯಾಗುತ್ತಿದ್ದಂತೆಯೇ ಅವರು ವಿಧಾನಸೌಧಕ್ಕೆ ನಾಮಪತ್ರ ಸಲ್ಲಿಕೆಗೆ ಆಗಮಿಸಬೇಕಿತ್ತು. ಆದರೆ ಕೂಡಲೇ ಅದು ಅಸಾಧ್ಯವಾಗಿದ್ದರಿಂದ ಅವರನ್ನು ತುಮಕೂರಿನಿಂದ ಏರ್​ಲಿಫ್ಟ್​ ಮಾಡಲಾಗಿದೆ. ತುಮಕೂರಿನಿಂದ ಜಕ್ಕೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಹೇಮಲತಾ ಅವರು ಕೊನೆಗೆ ರಸ್ತೆ ಮಾರ್ಗವಾಗಿ ವಿಧಾನಸೌಧ ತಲುಪಿದ್ದಾರೆ. ವಿಧಾನಸೌಧ ತಲುಪುತ್ತಿದ್ದಂತೆಯೇ ಓಡೋಡಿ ವಿಧಾನಸೌಧದ ಮೆಟ್ಟಿಲು ಏರಿ ಬಂದಿದ್ದಾರೆ.
ಸಂಸದ ಸಂಗಣ್ಣ ಕರಡಿ ಅವರ ಕಟ್ಟಾ ಬೆಂಬಲಿಗರಾಗಿರುವ ಹೇಮಲತಾ, ಸಂಗಣ್ಣ ಕರಡಿ ಅವರು ಬಿಜೆಪಿಗೆ ಬಂದಾಗ ಬಿಜೆಪಿಗೆ ಬಂದಿದ್ದರು. ಇವರು ಹಾಲಿ, ದಿಶಾ ಸಮಿತಿ ನಾಮ ನಿರ್ದೇಶಿತ ಸದಸ್ಯೆ ಆಗಿದ್ದಾರೆ. ಈ ಹಿಂದೆ ಕೊಪ್ಪಳ ನಗರಸಭೆಗೆ ಸ್ಪರ್ಧೆಗೆ ಟಿಕೆಟ್ ಕೇಳಿದ್ದರು. ಆಗ ಟಿಕೆಟ್ ಸಿಕ್ಕಿರಲಿಲ್ಲ.
ಈ ಹಿಂದೆ ನಗರಸಭೆಯ 18ನೇ ವಾರ್ಡಿಗೆ ಜೆಡಿಎಸ್‍ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕು ಮೂಲದ ಹೇಮಲತಾ , ಕೊಪ್ಪಳದಲ್ಲಿ ವಾಸಿಸುತ್ತಿದ್ದಾರೆ. ಅವರ ಪತಿ ಪರೀಕ್ಷಿತರಾಜ್ಕೊ, ಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದ್ದಾರೆ.
ವಿಧಾನ ಪರಿಷತ್​ ಚುನಾವಣೆಗೆ ಬಿಜೆಪಿ ಟಿಕೆಟ್​ ಘೋಷಣೆ: ಅಧಿಕೃತ ಪಟ್ಟಿ ಇಲ್ಲಿದೆ…

ಕೊನೆಯ ಕ್ಷಣದಲ್ಲಿ ಟಿಕೆಟ್​ ಕೈತಪ್ಪಿದ ಬೆನ್ನಲ್ಲೇ ಟ್ವೀಟ್​ ಮಾಡಿದ ವಿಜಯೇಂದ್ರ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
