ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರಿಗೆ ಮತ್ತೆ ಸಂಕಟ ಎದುರಾಗಿದೆ. ಈ ಹಿಂದೆ ಅವರು ಮುಖ್ಯಮಂತ್ರಿ ಇದ್ದಾಗ ಸಾಮಾಜಿಕ ಹೋರಾಟಗಾರ ಟಿಜೆ ಆಬ್ರಹಾಂ ಸಲ್ಲಿಸಿರುವ ಅರ್ಜಿಗೆ ಮತ್ತೆ ಜೀವ ಬಂದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ನೋಟಿಸ್​ ಜಾರಿಗೆ ಆದೇಶಿಸಿದೆ.
ಯಡಿಯೂರಪ್ಪ, ವಿಜಯೇಂದ್ರ ಸೇರಿದಂತೆ ಐಎಎಸ್ ಅಧಿಕಾರಿ ಪ್ರಕಾಶ್ ಹಾಗೂ ಎಸ್​.ಟಿ. ಸೋಮಶೇಖರ್​ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿ ಇಬ್ರಾಹಿಂ ಕೇಸನ್ನು ದಾಖಲು ಮಾಡಿದ್ದರು. ಆದರೆ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಹಿನ್ನೆಲೆಯಲ್ಲಿ ಅವರ ವಿಚಾರಣೆಗೆ ರಾಜ್ಯಪಾಲರ ಪೂರ್ವಾನುಮತಿ ಬೇಕಿತ್ತು. ಆದರೆ ಆಗ ರಾಜ್ಯಪಾಲರು ಅನುಮತಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೇಸು ಅಲ್ಲಿಯೇ ಸ್ಥಗಿತಗೊಂಡಿತ್ತು.
ಇದೀಗ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಇಲ್ಲದೇ ಇರುವ ಕಾರಣ, ಪುನಃ ಇಬ್ರಾಹಿಂ ಅವರು ಕೋರ್ಟ್​ ಬಾಗಿಲಿಗೆ ಹೋಗಿದ್ದಾರೆ. ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಕಾರಣ, ವಿಚಾರಣೆ ನಡೆಸಲು ಯಾವುದೇ ಪೂರ್ವಾನುಮತಿ ಬೇಕಾಗಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು. ಆದ್ದರಿಂದ ಅವರಿಗೆ ನೋಟಿಸ್​ ಜಾರಿಗೆ ಆದೇಶಿಸಿರುವ ಕೋರ್ಟ್​, ವಿಚಾರಣೆಗೆ ಹಾಜರಾಗುವಂತೆ ಹೇಳಿದೆ.
ಕೆಲ ದಿನಗಳ ಹಿಂದೆಯಷ್ಟೇ ಯಡಿಯೂರಪ್ಪ ಹಾಗೂ ಅವರ ಕುಟುಂಬದವರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್​ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಆದರೆ ಇದಾಗಲೇ ಒಂದು ಕೇಸ್​ ಪೆಂಡಿಂಗ್​ ಇದ್ದ ಕಾರಣ, ಇದನ್ನು ಸ್ವೀಕರಿಸಲು ಆಗುವುದಿಲ್ಲ ಎಂದು ಕೋರ್ಟ್​ ಹೇಳಿತ್ತು.
ಭರ್ಜರಿ ಬಿರಿಯಾನಿ ತಂದಿಟ್ಟ ಸಂಕಟ: ವರ್ತೂರ್​ ಪ್ರಕಾಶ್​ ಸೇರಿದಂತೆ 105 ಮಂದಿ ವಿರುದ್ಧ ಎಫ್​ಐಆರ್​
ಸ್ಟ್ರಿಕ್ಟ್​ ನೈಟ್​ ಕರ್ಫ್ಯೂ ಜಾರಿ: ರಸ್ತೆಗಿಳಿಯೋ ಮುನ್ನ ಎಚ್ಚರ- ನಿಯಮಗಳೇನು?
ಎರಡು ವರ್ಷದಲ್ಲಿ 24 ಸಾವಿರ ಮಕ್ಕಳ ಆತ್ಮಹತ್ಯೆ: ಕೇಂದ್ರದಿಂದ ಸ್ಫೋಟಕ ಮಾಹಿತಿ, ಕಾರಣವೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 2 =
Remember me
