ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿ ಹೈಕೋರ್ಟ್​ನ ಧಾರವಾಡ ಪೀಠ ಆದೇಶಿಸಿದೆ.
ಸುಪ್ರೀಂಕೋರ್ಟ್,​ ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶನನ್ನು ಕುಳ್ಳರಿಸಲು ಅನುಮತಿ ನೀಡಿರಲಿಲ್ಲ. ಇದೇ ವೇಳೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶನನ್ನು ಕುಳ್ಳರಿಸಲು ರಾಜ್ಯ ಹೈಕೋರ್ಟ್​ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಜೆಯ ವೇಳೆ ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆ ಪುನಃ ಹೈಕೋರ್ಟ್​ ಮೆಟ್ಟಿಲೇರಿತ್ತು.
ಸುಪ್ರೀಂ ಕೋರ್ಟ್ ಆದೇಶ ಹುಬ್ಬಳ್ಳಿ ಈದ್ಗಾ ಗಣೇಶೋತ್ಸವಕ್ಕೂ ಅನ್ವಯಿಸಲು ಅದರಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು. ನಮಗೂ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸುವಂತೆ ಮನವಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಂಜೆಯ ವೇಳೆ ಹೈಕೋರ್ಟ್​ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಇದೀಗ ಆದೇಶ ಹೊರಬಂದಿದೆ. ತಾನು ನೀಡಿರುವ ಅನುಮತಿಯನ್ನು ವಾಪಸ್​ ಪಡೆಯಲು ಕೋರ್ಟ್​ ಒಪ್ಪಿಗೆ ಸೂಚಿಸಲಿಲ್ಲ.
ಹುಬ್ಬಳ್ಳಿಯ ಈದ್ಗಾ ಮೈದಾನದ ಆಸ್ತಿಯ ಹಕ್ಕು ಪಾಲಿಕೆಗೆ ಸೇರಿದೆ. ಹೀಗಾಗಿ ಮಧ್ಯಂತರ ಆದೇಶ ಹೊರಡಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿ ಕೋರ್ಟ್‌ ಅಂಜುಮನ್‌ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಸರ್ಕಾರ ಗಣೇಶೋತ್ಸವದ ಜವಾಬ್ದಾರಿ ತೆಗೆದುಕೊಳ್ಳಬೇಕು. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಕೋರ್ಟ್​ ಸೂಚಿಸಿದೆ.
ಚಾಮರಾಜಪೇಟೆ ವಿಚಾರವೇ ಬೇರೆ ಹುಬ್ಬಳ್ಳಿ ವಿಚಾರವೇ ಬೇರೆ. ಚಾಮರಾಜಪೇಟೆಯದ್ದು ಮಾಲೀಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹೈಕೋರ್ಟ್ ಗೆ ಹೋಗಲು ಸೂಚಿಸಿದೆ. ಆದರೆ ಹುಬ್ಬಳ್ಳಿ ಈದ್ಗಾ ವಿಚಾರದಲ್ಲಿ ಹಾಗೆ ಇಲ್ಲ. ಹುಬ್ಬಳ್ಳಿ ಈದ್ಗಾ ಮೈದಾನ ಮಹಾನಗರ ಪಾಲಿಕೆಗೆ ಸೇರಿದ ಸ್ವತ್ತು. ಹೀಗಾಗಿ ಮಹಾನಗರ ಪಾಲಿಕೆ ಅಧಿಕಾರವನ್ನು ಹೊಂದಿದೆ ಎಂದು ಸರ್ಕಾರ ಕೋರ್ಟ್​ನಲ್ಲಿ ವಾದಿಸಿತ್ತು.
ಬೆಂಗಳೂರಿನ ಈದ್ಗಾ ಮೈದಾನದಲ್ಲಿನ ಗಣೇಶೋತ್ಸವಕ್ಕೆ ಭಾರಿ ಹಿನ್ನಡೆ: ಎರಡೇ ಗಂಟೆಗಳಲ್ಲಿ ಸುಪ್ರೀಂನಿಂದ ಬಂತು ಈ ರೀತಿ ತೀರ್ಪು

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ- ಹೈಕೋರ್ಟ್​ನಿಂದ ಹೊರಟಿದೆ ಮಹತ್ವದ ತೀರ್ಪು- ಗೊಂದಲಕ್ಕೆ ತೆರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 2 =
Remember me
