ಹುಬ್ಬಳ್ಳಿ:ಹುಬ್ಬಳ್ಳಿ ಮತ್ತು ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಇರುವ ಕಾನೂನು ಸಮರಕ್ಕೆ ತೆರೆ ಬಿದ್ದಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಕರ್ನಾಟಕ ಹೈಕೋರ್ಟ್​ನ ಧಾರವಾಡದ ಪೀಠವು ಅನುಮತಿ ನೀಡಿದ್ದರೆ, ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಉತ್ಸವ ಆಚರಣೆಗೆ ಸುಪ್ರೀಂಕೋರ್ಟ್ ಅನುಮತಿ ನೀಡಲಿಲ್ಲ.
ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್​ ಹೇಳಿದ್ದರೆ, ಧಾರವಾಡದ ಕೋರ್ಟ್​, ಗಣೇಶನನ್ನು ಕುಳ್ಳರಿಸುವ ಬಗ್ಗೆ ನಿರ್ಧರಿಸುವ ಅಧಿಕಾರ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಇರುವುದಾಗಿ ಹೇಳಿದೆ. ಆಯುಕ್ತರು ಗಣೇಶೋತ್ಸವಕ್ಕೆ ಇದಾಗಲೇ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಇದಕ್ಕೆ ಗ್ರೀನ್​ ಸಿಗ್ನಲ್​ ನೀಡಿದೆ.​ವಿವಾದ ಇಲ್ಲಗೆ ಮುಗಿದಂತೆ ಕಾಣಿಸುತ್ತಿಲ್ಲ. ಸುಪ್ರೀಂಕೋರ್ಟ್​ ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶನನ್ನು ಕುಳ್ಳರಿಸಲು ಅನುಮತಿ ನೀಡದೇ ಇರುವಾಗ ರಾಜ್ಯ ಹೈಕೋರ್ಟ್​ ಹುಬ್ಬಳ್ಳಿಯಲ್ಲಿ ನೀಡಿರುವುದು ಸರಿಯಲ್ಲ ಎಂದು ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆ ಪುನಃ ಈಗ ಹೈಕೋರ್ಟ್​ ಮೆಟ್ಟಿಲೇರಿದೆ.
ಸುಪ್ರೀಂ ಕೋರ್ಟ್ ಆದೇಶ ಹುಬ್ಬಳ್ಳಿ ಈದ್ಗಾಗೂ ಅನ್ವಯಿಸಲು ಅದರಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ನಮಗೂ ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸುವಂತೆ ಮನವಿ ಸಲ್ಲಿಸಲಾಗಿದೆ. (ದಿಗ್ವಿಜಯ ನ್ಯೂಸ್​)
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ- ಹೈಕೋರ್ಟ್​ನಿಂದ ಹೊರಟಿದೆ ಮಹತ್ವದ ತೀರ್ಪು- ಗೊಂದಲಕ್ಕೆ ತೆರೆ

ಬೆಂಗಳೂರಿನ ಈದ್ಗಾ ಮೈದಾನದಲ್ಲಿನ ಗಣೇಶೋತ್ಸವಕ್ಕೆ ಭಾರಿ ಹಿನ್ನಡೆ: ಎರಡೇ ಗಂಟೆಗಳಲ್ಲಿ ಸುಪ್ರೀಂನಿಂದ ಬಂತು ಈ ರೀತಿ ತೀರ್ಪು

ಗುಜರಾತ್​ನ ಗೋಧ್ರಾ ಗಲಭೆ, ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದ ಎಲ್ಲಾ ಕೇಸ್ ಕ್ಲೋಸ್​: ಸುಪ್ರೀಂ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
