ಹುಬ್ಬಳ್ಳಿ:6ನೇ ವೇತನ ಆಯೋಗದ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ಒಂಬತ್ತು ದಿನಗಳಿಂದ ಸಾರಿಗೆ ಇಲಾಖೆ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ಇವರಿಗೆ ಇದಾಗಲೇ ಹಲವಾರು ರೀತಿಯಲ್ಲಿ ಮನವೊಲಿಸುವ ಪ್ರಯತ್ನ ಮಾಡಿದರೂ, ಸಂಬಳ ಕಡಿತದ ಬೆದರಿಕೆಯೊಡ್ಡಿದರೂ ಮುಷ್ಕರ ಕೈಬಿಟ್ಟಿಲ್ಲ.
ಇದನ್ನು ಗಂಭೀರವಾಗಿ ಪರಿಗಣಿಸಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಹುಬ್ಬಳ್ಳಿಯ 26 ಸಿಬ್ಬಂದಿಯನ್ನು ವಜಾ ಮಾಡಿದೆ. ಇವರೆಲ್ಲರೂ ಮುಷ್ಕರ ಆರಂಭದ ದಿನದಿಂದ ಕರ್ತವ್ಯಕ್ಕೆ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಹುಬ್ಬಳ್ಳಿ ಗ್ರಾಮಾಂತರ ವಿಭಾಗದ 26 ತರಬೇತಿ ಸಿಬ್ಬಂದಿ ಸೇವೆಯಿಂದ ವಜಾ ಮಾಡಲಾಗಿದೆ ಎಂದು ಸಂಸ್ಥೆ ಹೇಳಿದೆ. ಈ ಕುರಿತು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ಆದೇಶ ಹೊರಡಿಸಿದ್ದಾರೆ.
ಮುಷ್ಕರ ಕೈ ಬಿಟ್ಟು ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಇಲ್ಲದಿದ್ದರೆ ಸೇವೆಯಿಂದ ವಜಾ ಮಾಡುವುದಾಗಿ ಈ ಹಿಂದೆಯೇ ಷೋಕಾಸ್​ ನೋಟಿಸ್​ ನೀಡಲಾಗಿತ್ತು. ಆದರೆ ಅದನ್ನು ಕೇಳದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
ಇವರಲ್ಲಿ 15 ಚಾಲಕರು, 8 ಚಾಲಕ ಕಂ ನಿರ್ವಾಹಕರು, ಇಬ್ಬರು ತಾಂತ್ರಿಕ ಸಿಬ್ಬಂದಿ ಮತ್ತು ಒಬ್ಬರು ಕಿರಿಯ ಸಹಾಯಕ ಸೇರಿದ್ದಾರೆ.
ಯಾರಿಗೆ ವಯಸ್ಸಾಗಿರತ್ತೋ ಅವ್ರು ಸಾಯ್ಲೇಬೇಕಲ್ಲಾ? ಕರೊನಾದಿಂದ ಸತ್ರೆ ಏನ್​ ಮಾಡೋಕಾಗತ್ತೆ ಎಂದ ಸಚಿವ

ಒಂದೇ ತಿಂಗಳಲ್ಲಿ ಒಬ್ಬಳನ್ನೇ 4 ಬಾರಿ ಮದ್ವೆಯಾದ- ಐದನೇ ಬಾರಿಗೆ ಸಿಕ್ಕಿಬಿದ್ದ! ಕಾರಣ ಕೇಳಿದ್ರೆ ಸುಸ್ತಾಗ್ತೀರಾ!

ಪತ್ನಿಯನ್ನು ನೋಡಿದರೆ ಮೃತ ಪ್ರೇಯಸಿಯೇ ಕಾಣುತ್ತಾಳೆ: ಏನು ಮಾಡಲಿ?

ವಿಧಾನಸಭೆ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್​ ಅಭ್ಯರ್ಥಿ ಸಾವು- ಬಲಿ ಪಡೆದ ಕರೊನಾ ಸೋಂಕು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
