ಕಲಬುರಗಿ:ಐಪಿಎಲ್​ ಕ್ರಿಕೆಟ್​ ಬೆಟ್ಟಿಂಗ್​ಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇದುವರೆಗೂ ಅನೇಕ ಮಂದಿಯ ವಿರುದ್ಧ ಕೇಸ್​ ದಾಖಲು ಮಾಡಿಕೊಂಡಿದ್ದಾರೆ.
ಅದರಂತೆ ಕಲಬುರಗಿಯಲ್ಲಿಯೂ ಈ ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಈ ಬೆಟ್ಟಿಂಗ್​ನಲ್ಲಿ ಇದೀಗ ಸ್ಥಳೀಯ ಶಾಸಕರ ಪತ್ನಿಯ ಹೆಸರು ಕೇಳಿಬಂದಿದೆ.
ಅಷ್ಟಕ್ಕೂ ಆಗಿರುವುದು ಏನೆಂದರೆ, ಮೂರು ದಿನಗಳ ಹಿಂದೆ ಇಲ್ಲಿಯ ಎಂ.ಬಿ. ನಗರದ ಪ್ರದೇಶದ ಮನೆಯೊಂದರಲ್ಲಿ ಬೆಟ್ಟಿಂಗ್ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸೊಲ್ಲಾಪುರದ ಸಿಸಿಬಿ‌ ಪೊಲೀಸರು ದಾಳಿ ನಡೆಸಿದ್ದರು. ಈ ಸಮಯದಲ್ಲಿ ಬೆಟ್ಟಿಂಗ್​ನಲ್ಲಿ ತೊಡಗಿಸಿಕೊಂಡಿರುವ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.
ಇದನ್ನೂ ಓದಿ:ನಿರ್ಮಾಪಕ ಅಪ್ಪನ ಫಿಲ್ಮ್​ ಶೂಟಿಂಗ್​​ಗಾಗಿ ಮೇಕೆ ಕಳ್ಳರಾದ ‘ನಟ’ರು!
ಅತುಲ್ ಸಿರಶೆಟ್ಟಿ, ಪ್ರದೀಪ್ ಮಲ್ಲಯ್ಯ ಕಾರಂಜೆ ಎಂಬುವವರನ್ನು ಅರೆಸ್ಟ್​ ಮಾಡಿ ಅವರ ಬಳಿ ಇದ್ದ 38.44 ಲಕ್ಷ ರೂಪಾಯಿ ನಗದು, ನಾಲ್ಕು ಲ್ಯಾಪ್‌ಟಾಪ್‌ಗಳು, ಟಿ.ವಿ ಹಾಗೂ ಇನ್ನೋವಾ ಕ್ರಿಸ್ಟಾ ಕಾರು, ಸ್ಕೂಟರ್​ ವಶಕ್ಕೆ ಪಡೆದುಕೊಂಡಿದ್ದರು.
ಇದೀಗ ಆ ಕಾರಿನ ಮಾಹಿತಿ ಕಲೆಹಾಕಿದಾಗ ಕಾರು ಕಲಬುರಗಿಯ ಶಾಸಕ ಬಸವರಾಜ ಮತ್ತಿಮೂಡ ಅವರ ಪತ್ನಿ ಜಯಶ್ರೀ ಮತ್ತಿಮೂಡ ಅವರ ಹೆಸರಿನಲ್ಲಿ ಇರುವುದು ತಿಳಿದಿದೆ. ಸದ್ಯ ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಾತ್ರವಲ್ಲದೇ ಈ ಬೆಟ್ಟಿಂಗ್‌ನಲ್ಲಿ ಅನೇಕ ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ತನಿಖೆ ಮುಂದುರಿಸಲಾಗಿದೆ. ಸದ್ಯ ಆರೋಪಿಗಳನ್ನು ‌ಸೊಲ್ಲಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರಿನ ಕುರಿತಾಗಿಯೂ ಮಾಹಿತಿ ಕಲೆ ಹಾಕಲಾಗುತ್ತಿದೆ.
ಇನ್ನೂ ಮುಗಿದಿಲ್ಲ ಅಮೆರಿಕ ಫೈಟ್​: ಜಾರ್ಜಿಯಾದಲ್ಲಿ ಮರು ಎಣಿಕೆ!

ಶಾಂಘೈ ವೇದಿಕೆಯಲ್ಲಿ ಭಾರತ ಬೆಂಬಲಿಸಿದ ರಷ್ಯಾ: ಪಾಕ್, ಚೀನಾಕ್ಕೆ ಭಾರಿ ಮುಖಭಂಗ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − eighteen =
Remember me
