ಹುಬ್ಬಳ್ಳಿ :ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಭಾರಿ ಚರ್ಚೆ ಆಗ್ತಿದೆ. ಆದ್ರೆ ಈಗ ನಾವು ಸಿಎಂ ಖುರ್ಚಿ ಖಾಲಿ ಇಲ್ಲ‌ ಎಂದು ಬೋರ್ಡ್‌ ಹಾಕಿಕೊಂಡು ಓಡಾಡಬೇಕಾದ ಸ್ಥಿತಿ ಬಂದಿದೆ ಎಂದು ಸಚಿವ ಜಗದೀಶ್‌ ಶೆಟ್ಟರ್‌ ಅಸಮಾಧಾನ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಿಲ್ಲ, ಆ ಬಗ್ಗೆ ಅನಗತ್ಯ ಚರ್ಚೆ ಬೇಡ ಎಂದರು. ಇನ್ನು ಶಾಸಕ ಅರವಿಂದ ಬೆಲ್ಲದ ಪೋನ್ ಕದ್ದಾಲಿಕೆ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಶೆಟ್ಟರ್‌, ಈ ವಿಷಯದ ಕುರಿತು ನಾನು ಮಾತನಾಡುವುದಿಲ್ಲ. ಈ ಬಗ್ಗೆ ಈಗಾಗಲೇ ರಾಜ್ಯಮಟ್ಟದಲ್ಲಿ ಚರ್ಚೆ ಆಗಿದೆ. ಯಾರಾದರೂ ಕೆಮ್ಮಿದ್ರೆ ಅದಕ್ಕೆ ನಾನು ಹೊಣೆ ಅಂತಾರೆ. ಅಂಥ ಪರಿಸ್ಥಿತಿ ಬಂದುಬಿಟ್ಟಿದೆ. ಏನೂ ಮಾಡಲು ಆಗಲ್ಲ, ಯಾರ ಯಾರ ಹಣೆಯಲ್ಲಿ ಏನು ಬರೆದಿರುತ್ತೋ, ಅದೇ ಆಗುವುದು ಎಂದರು.
ಅರವಿಂದ ಬೆಲ್ಲದ ಓವರ್ ಟೇಕ್ ಮಾಡ್ತಾ ಇದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಶೆಟ್ಟರ್‌, ಅದು ಅವರ ಸ್ವಭಾವ ಆಗಿದೆ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದರು.
ಶಾಸಕ ಬೆಲ್ಲದ್‌ ಫೋನ್‌ ಕದ್ದಾಲಿಕೆ ಪ್ರಕರಣಕ್ಕೆ ಭಾರಿ ಟ್ವಿಸ್ಟ್‌! ಇದೇ ಕೇಸ್‌ ಆರೋಪಿಗೇ ತನಿಖೆ ಜವಾಬ್ದಾರಿ!

ದೇಹಕ್ಕಾಗಿ ಅವನು, ಸಮಾಜಕ್ಕಾಗಿ ನಾನು: ಡಿವೋರ್ಸ್‌ ಕೊಡದೇ ಪೀಡಿಸ್ತಿದ್ದಾಳೆ- ಪ್ಲೀಸ್‌ ಸಲಹೆ ಕೊಡಿ

ಜುಲೈ 1ರಿಂದ ಹಣ ವಿತ್‌ಡ್ರಾ, ಚೆಕ್‌ಬುಕ್‌ನಲ್ಲಿ ಭಾರಿ ಬದಲಾವಣೆ- ಇಲ್ಲಿದೆ ನೋಡಿ ಡಿಟೇಲ್ಸ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − five =
Remember me
