ಬೆಂಗಳೂರು:ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಎಂದು ಮರುನಾಮಕರಣ ಮಾಡಲಾಗಿದೆ.
ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳು ಒಳಗೊಂಡಿರುವ ಹೈದರಾಬಾದ್‌- ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣವಾಗಿರುವ ಹಿನ್ನೆಲೆಯಲ್ಲಿ ಇದೀಗ ಹೊಸ ಹೆಸರು ಸಾರಿಗೆ ಸಂಸ್ಥೆಗೆ ಇಡಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಅಂದಹಾಗೆ ಹೈದರಾಬಾದ್‌- ಕರ್ನಾಟಕ ಪ್ರದೇಶವು ಕಲ್ಯಾಣ ಕರ್ನಾಟಕ ಎಂದು ನಾಮಕರಣವಾಗಿರುವುದು 2019ರ ಸೆಪ್ಟೆಂಬರ್‌ನಲ್ಲಿ. ಅಂದಿನಿಂದ ರಸ್ತೆ ಸಾರಿಗೆ ಸಂಸ್ಥೆಯ ಹೆಸರನ್ನೂ ಬದಲಾಯಿಸಬೇಕು ಎಂಬ ಬಗ್ಗೆ ಒತ್ತಡಗಳು ಬಂದಿದ್ದವು.
ಮದ್ಯದ ಅಂಗಡಿ ಮುಂದೆ ಮದುವೆ ಮಾಡಿಕೊಂಡ ಜೋಡಿ! ಕಾರಣವೂ ಅಷ್ಟೇ ಕುತೂಹಲ…

ಕೊಳೆಗೇರಿವಾಸಿಗಳಿಗೆ ಕಟ್ಟಿಸಿರೋ ಈ ಪಬ್ಲಿಕ್‌ ಟಾಯ್ಲೆಟ್‌ ಒಳಗೆ ಹೋದ್ರೆ ಬರಲು ಮನಸ್ಸೇ ಬರಲ್ವಂತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 3 =
Remember me
