ಬೆಂಗಳೂರು:ಕನ್ನಡವನ್ನು ಅಧಿಕೃತ ಭಾಷೆಯಾಗಿ ಎಲ್ಲಾ ಹಂತಗಳಲ್ಲಿ ಅನುಷ್ಠಾನಗೊಳಿಸುವುದಕ್ಕಾಗಿ ಪ್ರತ್ಯೇಕ ಮಸೂದೆಯನ್ನು ವಿಧಾನಮಂಡಲದ ಅಧಿವೇಶನದಲ್ಲಿ ಇಂದು ಮಂಡಿಸಲಾಯಿತು. ಇದು ಸದ್ಯ ಮಸೂದೆಯಾಗಿದ್ದು, ಉಭಯ ಸದನಗಳಲ್ಲಿ ಒಪ್ಪಿಗೆಯಾದರೆ ನಂತರ ಇದು ಕಾನೂನು ಆಗಿ ಜಾರಿಗೆ ಬರಲಿದೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆಯಲ್ಲಿರುವ ಮುಖ್ಯಾಂಶಗಳು
– ಉನ್ನತ ತಾಂತ್ರಿಕ/ ವೃತ್ತಿ ಶಿಕ್ಷಣದಲ್ಲಿ, ಕನ್ನಡವನ್ನು ಒಂದು ಭಾಷೆಯನ್ನಾಗಿ ಪರಿಚಯಿಸುವುದು.
– ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದವರಿಗೆ ಉನ್ನತ, ತಾಂತ್ರಿಕ ಮತ್ತು ವೃತ್ತಿ ಶಿಕ್ಷಣದಲ್ಲಿ ಮೀಸಲಾತಿ ಒದಗಿಸುವುದು.
– ರಾಜ್ಯ ಸರ್ಕಾರ, ರಾಜ್ಯದಲ್ಲಿನ ಸ್ಥಳೀಯ ಪ್ರಾಧಿಕಾರಗಳು, ಶಾಸನಬದ್ಧ ಮತ್ತು ಶಾಸನೇತರ ಸಂಸ್ಥೆಗಳು ಮತ್ತು ಸಹಕಾರಿ ಸಂಘಗಳು ಹಾಗೂ ಇತರ ಸಂಘಗಳಲ್ಲಿ ಉದ್ಯೋಗವನ್ನು ಪಡೆಯಲು ಕನ್ನಡ ಭಾಷೆಯನ್ನು ಅತ್ಯವಶ್ಯಕ ಭಾಷೆ ಆಗಿರುವುದು.
– ಅಧೀನ ನ್ಯಾಯಾಲಯಗಳಲ್ಲಿ, ನ್ಯಾಯಾಧೀಕರಣಗಳಲ್ಲಿ, ಬ್ಯಾಂಕುಗಳಲ್ಲಿ ಮತ್ತು ಇತರ ಹಣಕಾಸು ಸಂಸ್ಥೆಗಳಲ್ಲಿ ಕನ್ನಡ ಭಾಷೆಯನ್ನು ಬಳಸುವುದು.
– ಕನ್ನಡ ಭಾಷೆಯ ವ್ಯಾಪಕ ಬಳಕೆ ಮತ್ತು ಪ್ರಚಾರಕ್ಕಾಗಿ ಸಾಮಾನ್ಯ ಕ್ರಮಗಳನ್ನು ತೆಗೆದುಕೊಳ್ಳುವುದು.
– ಮಾಹಿತಿ ತಂತ್ರಜ್ಞಾನ ಮತ್ತು ತಂತ್ರಾಂಶ ಅಭಿವೃದ್ಧಿಯಲ್ಲಿ ಕನ್ನಡ ಭಾಷೆಯ ಬಳಕೆಗಾಗಿ ಕ್ರಮಗಳನ್ನು ತೆಗೆದುಕೊಳ್ಳುವುದು.
– ರಾಜ್ಯದಲ್ಲಿ ಅಧಿಸೂಚಿಸಿರುವ ಕೈಗಾರಿಕಾ ನೀತಿಯ ಪ್ರಕಾರ ಕನ್ನಡಿಗರಿಗೆ ಮೀಸಲಾತಿ ಒದಗಿಸುವ ಎಲ್ಲ ಕೈಗಾರಿಕೆಗಳು ಸರ್ಕಾರದಿಂದ ತೆರಿಗೆ ರಿಯಾಯತಿ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳುವ ಹಕ್ಕನ್ನು ನೀಡುವುದು.
-ಕನ್ನಡ ಭಾಷೆ ಕಾಯ್ದೆ ಅನುಷ್ಠಾನ ಮಾಡದಿದ್ದರೆ ಮೇಲ್ವಿಚಾರಣೆಗೆ ಅಧಿಕಾರ ಉಲ್ಲಂಘನೆಗಾಗಿ ದಂಡವನ್ನು ವಿಧಿಸಲು ಅವಕಾಶವಿದೆ: ಅದರ ಅನ್ವಯ ಮೊದಲನೇ ಸಾರಿ ತಪ್ಪು ಮಾಡಿದ್ರೆ 5 ಸಾವಿರ ರೂ, ಎರಡನೇ ಸಾರಿ ತಪ್ಪು ಮಾಡಿದ್ರೆ 10 ಸಾವಿರ ರೂ., ಮೂರನೇ ಸಾರಿ ತಪ್ಪು ಮಾಡಿದ್ರೆ 20 ಸಾವಿರ ರೂ ದಂಡ ವಿಧಿಸಲಾಗುವುದು.(ದಿಗ್ವಿಜಯ ನ್ಯೂಸ್​)
ಎಐಸಿಸಿ ಅಧ್ಯಕ್ಷರ ಚುನಾವಣೆಗೆ ಅಧಿಸೂಚನೆ ಪ್ರಕಟ: 22 ವರ್ಷಗಳ ದಾಖಲೆ ಮುರಿಯುವುದೆ? ಇಲ್ಲಿಯವರೆಗೆ ಆಗಿದ್ದೇನು?
ಹಿಜಾಬ್​ ಬ್ಯಾನ್​: 10 ದಿನಗಳ ಬಿರುಸಿನ ವಾದ-ಪ್ರತಿವಾದಕ್ಕೆ ತೆರೆ; ತೀರ್ಪು ಕಾಯ್ದಿರಿಸಿದ ಸುಪ್ರೀಂ
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:20 + eight =
Remember me
