ಬೆಂಗಳೂರು:ಕನ್ನಡ ಪುಸ್ತಕ ಪ್ರಾಧಿಕಾರದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹಿರಿಯ ಸಾಹಿತಿ, ಚಿಂತಕ ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ ಅವರನ್ನು ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.
ಕನ್ನಡ ಪುಸ್ತಕ ಪ್ರಾಧಿಕಾರದಿಂದ ನೀಡಲಾಗುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನಕ್ಕೆ ನೀಡಲಾಗಿದೆ. ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಮೈಸೂರಿನ ಸಯ್ಯದ್ ಇಸಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಡಾ. ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ. ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ನೀಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ. ಪುಸ್ತಕ ಬಹುಮಾನಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಕೆಲವು ದಿನಗಳಲ್ಲೇ ಪ್ರಕಟ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ಒಂದು ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ 75 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ; ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ 50 ಸಾವಿರ ರೂ. ಹಾಗೂ ಪ್ರಶಸ್ತಿ ಫಲಕ; ಡಾ. ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ ರೂ.25 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.
ಇಬ್ಬರು ಗಂಡುಮಕ್ಕಳಿದ್ದರೂ ಪಾಲಕರು ‘ಅನಾಥ’: ಹಿರಿಯ ಜೀವಗಳ ನೆರವಿಗೆ ಧಾವಿಸಿದ ನಟ ಸುದೀಪ್‌

ಆಪ್ತ ಸಹಾಯಕನ ಬಂಧನ: ಸಚಿವ ಶ್ರೀರಾಮುಲು ಗರಂ- ಏನು ಹೇಳಿದ್ರು ಕೇಳಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 2 =
Remember me
