ಬೆಂಗಳೂರು:ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರವು ಪ್ರತ್ಯೇಕ ಆಯೋಗವನ್ನು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ರಚಿಸಿದೆ.
ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಅವರು ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಕುರಿತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಸೂಚನೆಯಂತೆ ಈ ಆಯೋಗ ರಚಿಸಲಾಗಿದೆ.
ಈ ಬಗ್ಗೆ ಮಾರ್ಚ್ 23 ಹಾಗೂ 31 ರಂದು ನಡೆದ ಸರ್ವಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೇಗಳಿಗೆ ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಿಯೇ ಚುನಾವಣೆ ನಡೆಸುವ ಕುರಿತು ಚರ್ಚಿಸಲಾಗಿತ್ತು. ಅದರಂತೆ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಿ, ಈ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಅಧ್ಯಯನ ನಡೆಸಿ, ಶಿಫಾರಸು ಮಾಡಲು ಈ ಆಯೋಗವನ್ನು ರಚಿಸಲಾಗಿದೆ.
ರಾಜ್ಯದಲ್ಲಿ 6,500 ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌

ಪರೀಕ್ಷೆ ಗೋಲ್‌ಮಾಲ್‌: ಜೈಲಲ್ಲಿದ್ದಾಗಲೂ ಮೆಡಿಕಲ್‌ ಲೀವ್‌: ಮೇಲಧಿಕಾರಿಗಳನ್ನೇ ಯಾಮಾರಿಸಿದ್ದ ಒಳ ಉಡುಪಿನ ಕಿಂಗ್‌ಪಿನ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 19 =
Remember me
